Santro Ravi: ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ದಾಖಲೆ ಪತ್ರಗಳನ್ನು ಮೈಸೂರು ಪೊಲೀಸರು ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

Santro Ravi: ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ
ಸ್ಯಾಂಟ್ರೋ ರವಿ
Follow us
TV9 Web
| Updated By: Rakesh Nayak Manchi

Updated on:Jan 17, 2023 | 2:50 PM

ಮೈಸೂರು: ಸ್ಯಾಂಟ್ರೋ ರವಿ (Santro Ravi) ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವುದರಿಂದ (CID Investigation) ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಪ್ರಕರಣಗಳು ತಮಗೆ ಒಪ್ಪಿಸುರುವ ಹಿನ್ನಲೆ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ನ್ಯಾಯಾಲಯದ ನ್ಯಾಯಾಧೀಶರು, ಜನವರಿ 30ರವರೆಗೆ ಸಿಐಡಿ ಕಸ್ಟಡಿಗೆ ನೀಡಿದ ಆದೇಶ ಹೊರಡಿಸಿದ್ದಾರೆ.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನುಸಿಐಡಿ ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಸಂಗ್ರಹಿಸಿದೆ.

ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಪಡೆದರು. ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವಹಿಸುವ ಬಗ್ಗೆ ಸೋಮವಾರ ಬೆಳಿಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9 ಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: Santro Ravi Case: ಸ್ಯಾಂಟ್ರೋ ರವಿ ಪ್ರಕರಣ; ಅಖಾಡಕ್ಕಿಳಿದ ಸಿಐಡಿ, ಮೈಸೂರಿನಲ್ಲಿ ಮಾಹಿತಿ ಸಂಗ್ರಹ

ಪ್ರಸ್ತುತ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಅನೇಕ ಆರೋಪಗಳಿವೆ. ಇವುಗಳಲ್ಲಿ ಮಾಂಸದಂಧೆ, ದಶಕಗಳ ಕಾಲ ವೇಶ್ಯಾವಾಟಿಕೆ ನಡೆಸುತ್ತಿದ್ದುದು ಮತ್ತು ಇದ್ದಕ್ಕಿದ್ದಂತೆ ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದೂ ಸೇರಿದೆ.

ಪತ್ನಿ ಸೇರಿದಂತೆ ಮೂವರ ವಿರುದ್ಧ ಸುಳ್ಳು ಪ್ರಕರಣ ದಾಖಲಿದ ಸ್ಯಾಂಟ್ರೋ ರವಿ ಅವರನ್ನು ಜೈಲಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದ. ಜೈಲಿನಿಂದ ಹೊರಬಂದ ಸ್ಯಾಂಟ್ರೋ ರವಿ ಪತ್ನಿ ಸೇರಿದಂತೆ ಮೂವರು ಸ್ಯಾಂಟ್ರೋ ರವಿ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ತಲೆಮರೆಸಿಕೊಂಡಿದ್ದು, ಪೊಲೀಸರಿಗೆ ಯಾವುದೇ ಸಣ್ಣ ಸುಳಿವು ಸಿಗದಂತೆ ಓಡಾಡಿಕೊಂಡು ಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಆದರೆ ವಿವಿಧ ತಂಡಗಳನ್ನು ರಚಿಸಿ ಅಖಾಡಕ್ಕಿಳಿದಿದ್ದ ಪೊಲೀಸರು ಸ್ಯಾಂಟ್ರೋ ರವಿಯನ್ನು ಗುಜರಾತ್​ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Tue, 17 January 23

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್