AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಶಾಲೆಯಲ್ಲಿ ರ್‍ಯಾಗಿಂಗ್​, ಹಲ್ಲೆ: ಆಡಳಿತ ಮಂಡಳಿ, ಶಿಕ್ಷಕರು, ಬಾಲಕರ ವಿರುದ್ಧ FIR

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ರ್‍ಯಾಗಿಂಗ್ ಮತ್ತು ಹಲ್ಲೆ ಪ್ರಕರಣ ಸಂಬಂಧ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಬಾಲಕರ ವಿರುದ್ಧ ಕೇಸ್​ ದಾಖಲಾಗಿದೆ. ಹಲ್ಲೆಗೊಳಗಾದ 8ನೇ ತರಗತಿ ವಿದ್ಯಾರ್ಥಿ ಗುಪ್ತಾಂಗಕ್ಕೆ ತೀವ್ರ ಗಾಯವಾಗಿದ್ದ ಹಿನ್ನಲೆ, ಬಾಲಕನಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಒಂದು ವೃಷಣವನ್ನು ತೆಗೆದುಹಾಕಿದ್ದರು. ಘಟನೆಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಮೈಸೂರಿನ ಶಾಲೆಯಲ್ಲಿ ರ್‍ಯಾಗಿಂಗ್​, ಹಲ್ಲೆ: ಆಡಳಿತ ಮಂಡಳಿ, ಶಿಕ್ಷಕರು, ಬಾಲಕರ ವಿರುದ್ಧ FIR
ಸಾಂದರ್ಭಿಕ ಚಿತ್ರImage Credit source: Google
ರಾಮ್​, ಮೈಸೂರು
| Updated By: ಪ್ರಸನ್ನ ಹೆಗಡೆ|

Updated on:Nov 11, 2025 | 12:41 PM

Share

ಮೈಸೂರು, ನವೆಂಬರ್​ 10: ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ರ್‍ಯಾಗಿಂಗ್ ಮತ್ತು ಹಲ್ಲೆ ಪ್ರಕರಣ ಸಂಬಂಧ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಬಾಲಕರ ವಿರುದ್ಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಎ1 ಆಗಿ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಶಿಕ್ಷಕರು, ಜೆ1, ಜೆ2, ಜೆ3 ಆಗಿ ಮೂವರು ಬಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸಹಪಾಠಿಗಳಿಂದಲೇ ರ್‍ಯಾಗಿಂಗ್​​ಗೆ ಒಳಗಾಗಿ ಹಲ್ಲೆಗೊಂಡಿದ್ದ ಬಾಲಕನಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಗಂಭಿರ ಪೆಟ್ಟು ಬಿದ್ದಿದ್ದ ಹಿನ್ನಲೆ ಬಾಲಕ ಒಂದು ವೃಷಣವನ್ನೇ ವೈದ್ಯರು ತೆಗೆದ ಪ್ರಸಂಗ ನಡೆದಿತ್ತು. ಒಂದು ತಿಂಗಳ ಹಿಂದೆ ಬಾಲಕನ ಮೇಲೆ ಹಲ್ಲೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯ ಮೇಲೆ ಆತನದ್ದೇ ತರಗತಿಯ ಮೂವರು ಬಾಲಕರು ಹಲ್ಲೆ ನಡೆಸಿದ್ದರು. ಗುಪ್ತಾಂಗಕ್ಕೆ ಕಾಲಿನಿಂದ ಒದ್ದು ವಿಕೃತಿ ಮೆರೆದಿದ್ದರು.

ತರಗತಿಯ ಲೀಡರ್​ ಆಗಿದ್ದ 13 ವರ್ಷದ ಬಾಲಕನನ್ನು ಆತನ ಸಹಪಾಠಿಗಳೇ ಪ್ರತಿನಿತ್ಯ ರ್‍ಯಾಗಿಂಗ್​ ಮಾಡುತ್ತಿದ್ದರು. ಈ ವಿಷಯವನ್ನು ಆತ ಶಿಕ್ಷಕರಿಗೆ ತಿಳಿಸಿದ್ದ. ಇದೇ ಕಾರಣಕ್ಕೆ ತರಗತಿಯ ಮೂವರು ಸಂತ್ರಸ್ತ ಬಾಲಕನನ್ನು ಅಕ್ಟೋಬರ್ 25ರಂದು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಗುಪ್ತಾಂಗಕ್ಕೆ ಕಾಲಿನಿಂದ ಒದ್ದು ಗಂಭೀರ ಗಾಯಗೊಳಿಸಿದ್ದರು. ಆ ಬಳಿಕ ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ಬಾಲಕ ಪೋಷಕರಿಗೆ ತಿಳಿಸಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಕೊಡಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಕೂಡಲೇ ಆಪರೇಷನ್ ಮಾಡಬೇಕೆಂದು ತಿಳಿಸಿ, ಶಸ್ತ್ರ ಚಿಕಿತ್ಸೆ ಮಾಡಿ ಒಂದು ವೃಷಣವನ್ನ ತೆಗೆದಿದ್ದಾರೆ.

ಇದನ್ನೂ ಓದಿ: ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ತಾಯಿ ಬಲಿ

ಹಲ್ಲೆ ನಡೆಸಿರುವ ಆರೋಪಿತ ಮೂವರು ಬಾಲಕರು ಹಲವು ದಿನಗಳಿಂದ ರ್‍ಯಾಗಿಂಗ್​ ನಡೆಸುತ್ತಿದ್ದ ಬಗ್ಗೆ ಶಾಲೆಯ ಶಿಕ್ಷಕರು ಮತ್ತು ಆಡಳಿತ ಮಂಡಳಿಗೆ ಫೊಷಕರು ದೂರು ಕೂಡ ನೀಡಿದ್ದರು. ಆದರೆ, ಶಾಲೆಯವರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲದೆ ಶಾಲೆಯ ಮುಖ್ಯ ಶಿಕ್ಷಕಿ ಉಡಾಫೆಯಾಗಿ ನಡೆದುಕೊಂಡಿದ್ದಾರೆ. ಒಂದು ವೇಳೆ ದೂರನ್ನು ಗಂಭೀರವಾಗಿ ಪರಿಗಣಿಸಿದ್ದರೆ ಈ ರೀತಿ ಸ್ಥಿತಿ ಮಗನಿಗೆ ಬರುತ್ತಿರಲಿಲ್ಲ ಎಂಬುದು ಸಂತ್ರಸ್ತ ಬಾಲಕನ ಪೋಷಕರ ಅಳಲು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಗನಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದೇವೆ. ಇಷ್ಟೆಲ್ಲಾ ಆದರೂ ಶಾಲೆಯ ಆಡಳಿತ ಮಂಡಳಿ ಮಾತ್ರ ಬಾಲಕನ ಆರೋಗ್ಯ ವಿಚಾರಿಸಿಲ್ಲ. ಅಲ್ಲದೆ, ಬಾಲಕನ ತಾಯಿ ಶಾಲೆಗೆ ತೆರಳಿದಾಗ ಕೆಟ್ಟದಾಗಿ ಮಾತನಾಡಿ ವಾಪಸ್ಸು ಕಳುಹಿಸಿದ್ದಾರೆ ಎಂಬ ಆರೋಪವೂ ಪೋಷಕರಿಂದ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:51 pm, Mon, 10 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ