ಕಳೆದುಹೋದ ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ!
Mysuru News: ಇದುವರೆಗೆ ಯಾರೂ ತನ್ನ ಮೊಬೈಲ್ ಹುಡುಕಿಕೊಟ್ಟಿಲ್ಲ ಎಂಬ ಬಗ್ಗೆ ಶಿವಣ್ಣ ಮಾಹಿತಿ ನೀಡಿದ್ದಾರೆ. ಹೀಗಾಗಿ ಮೊಬೈಲ್ ಹುಡುಕಿಸಿಕೊಡುವಂತೆ ಸಿಎಂಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಮೈಸೂರು: ಕಳವಾದ ಮೊಬೈಲ್ ಹುಡುಕಿಸಿಕೊಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕುಂದನಹಳ್ಳಿಯ ಶಿವಣ್ಣ ಎಂಬವರು ಪತ್ರ ಬರೆದ ಘಟನೆ ನಡೆದಿದೆ. ಶಿವಣ್ಣ ಮೊಬೈಲ್ ಕಳವಾದ ಬಗ್ಗೆ ಸ್ಥಳೀಯ ಠಾಣೆಗೆ ದೂರು ನೀಡಿದ್ದರು. ನಂತರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದರು. ಆದರೆ ಇದುವರೆಗೆ ಯಾರೂ ತನ್ನ ಮೊಬೈಲ್ ಹುಡುಕಿಕೊಟ್ಟಿಲ್ಲ ಎಂಬ ಬಗ್ಗೆ ಶಿವಣ್ಣ ಮಾಹಿತಿ ನೀಡಿದ್ದಾರೆ. ಹೀಗಾಗಿ ಮೊಬೈಲ್ ಹುಡುಕಿಸಿಕೊಡುವಂತೆ ಸಿಎಂಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಆಗಸ್ಟ್ 28 ರಂದು ಗ್ರಾಮಾಂತರ ಬಸ್ ನಿಲ್ದಾಣದಿಂದ ವುಡ್ ಲ್ಯಾಂಡ್ಸ್ ಚಿತ್ರಮಂದಿರದ ಕಡೆ ನಡೆದುಕೊಂಡು ಹೋಗುವಾಗ ವ್ಯಕ್ತಿಯೊಬ್ಬ ಮೊಬೈಲ್ ಕಿತ್ತುಕೊಂಡು ಹೋಗಿದ್ದಾನೆ. ಬಳಿಕ ತಾನು ಮೊಬೈಲ್ ಹುಡುಕಿಕೊಡುವಂತೆ ಲಷ್ಕರ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ ಯಾರೂ ಇನ್ನೂ ಮೊಬೈಲ್ ಹುಡುಕಿಕೊಟ್ಟಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸ್ ಕಮಿಷನರ್ಗೆ ಪತ್ರ ಬರೆದಿದ್ದರೂ ಏನೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗಿದೆ. ಇನ್ನಾದರೂ ಆರೋಪಿಯನ್ನು ಬಂಧಿಸಿ, ಮೊಬೈಲ್ ಹುಡುಕಿಸಿಕೊಡಬೇಕೆಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ; 13.50 ಲಕ್ಷ ರೂ. ವಶಕ್ಕೆ ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 19 ಜನರ ಬಂಧನ ಮಾಡಿರುವ ಘಟನೆ ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿರುವ ರೆಸಾರ್ಟ್ ಒಂದರಲ್ಲಿ ನಡೆದಿದೆ. ಜೂಜು ಅಡ್ಡೆಯಾಗಿ ಮಾರ್ಪಟ್ಟಿರುವ ರೆಸಾರ್ಟ್ ಬಗ್ಗೆ ಪೊಲೀಸರು ಮಾಹಿತಿ ತಿಳಿದು ದಾಳಿ ಮಾಡಿದ್ದಾರೆ. 13.50 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಡಿಕೇರಿ: ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಆರೋಪಿಗಳನ್ನು ಬಂಧಿಸಿದ ಪೊಲೀಸರು
ಇದನ್ನೂ ಓದಿ: ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!
Published On - 4:32 pm, Mon, 20 September 21