ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್​ ವಿದ್ಯಾರ್ಥಿಗಳು ನೀರುಪಾಲು

ಮೈಸೂರು ತಾಲೂಕಿನ ಮೀನಾಕ್ಷಿಪುರದ ಬಳಿ ಕಾವೇರಿ ನದಿಯ ಹಿನ್ನೀರಿನಲ್ಲಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್​ ವಿದ್ಯಾರ್ಥಿಗಳು ನೀರುಪಾಲು
ಕಾವೇರಿ ಹಿನ್ನೀರು
Updated By: ಗಂಗಾಧರ​ ಬ. ಸಾಬೋಜಿ

Updated on: Jul 20, 2025 | 4:44 PM

ಮೈಸೂರು, ಜುಲೈ 20: ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿಯ ಕೆಆರ್​ಎಸ್​​ (KRS) ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವಂತಹ (death) ಘಟನೆ ನಡೆದಿದೆ. ಪ್ರಶಾಂತ್, ಸಿದ್ದ ಮತ್ತು ಕೃಷ್ಣ ನೀರುಪಾಲಾದವರು. ಮೃತರು ಮಂಡ್ಯದ (Mandya) ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಪತ್ತೆ ಮಾಡಿದ್ದಾರೆ. ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಒಂದು ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ

ಗದಗ: ಕೌಟುಂಬಿಕ ಸಮಸ್ಯೆಯಿಂದ ಮನನೊಂದು ತನ್ನ ಒಂದು ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಶನಿವಾರ ಸಾಯಂಕಾಲ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದರು.

ಇದನ್ನೂ ಓದಿ: ಕೋಲ್ಕತ್ತಾ: ಹಾಸ್ಟೆಲ್​ನಲ್ಲಿ ಅತ್ಯಾಚಾರ ಪ್ರಕರಣ, ಮುಧೋಳ ಲೋಕಾಪುರ ಯುವಕ ಪರಮಾನಂದ ಜೈನ್ ಬಂಧನ

ಇದನ್ನೂ ಓದಿ
ವಿಜಯಪುರ: ತೆಪ್ಪ ಮಗುಚಿ ಬಿದ್ದು ಇಬ್ಬರು ಯುವಕರು ಸಾವು, ನಾಲ್ವರು ಪಾರು
ಬಿಸಿಲಿನ ಝಳಕ್ಕೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ವೈದ್ಯ ವಿದ್ಯಾರ್ಥಿನಿ ನೀರುಪಾಲು: 30 ಗಂಟೆಗಳ ಬಳಿಕ ಶವ ಪತ್ತೆ
ಕೊನೇ ಕ್ಷಣದಲ್ಲಿ ಜೀವ ಉಳಿಸಿಕೊಳ್ಳಲು ಒದ್ದಾಡಿದ್ದ ವೈದ್ಯೆ, ವಿಡಿಯೋ ಇಲ್ಲಿದೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯ ಶಶಿಕಲಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಸಾರ್ವಜನಿಕರು ತಕ್ಷಣ 112 ಕರೆ ಮಾಡಿ ವಿಷಯ ತಿಳಿಸಿದ್ದು, ಮುಂಡರಗಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆ, ಮಗುವನ್ನು ರಕ್ಷಿಸಿ ಬುದ್ದಿ ಹೇಳಿ ಮನೆ ಕಳುಹಿಸಿ ಕೊಟ್ಟಿದ್ದಾರೆ. ಮುಂಡರಗಿ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.

ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಗ್ರಾಮಲೆಕ್ಕಾಧಿಕಾರಿಯ ಮೃತದೇಹ ಪತ್ತೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಗ್ರಾಮಲೆಕ್ಕಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಗ್ರಾಮಲೆಕ್ಕಾಧಿಕಾರಿ ನಿರಂಜನಮೂರ್ತಿ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ಕಾವೇರಿ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದರು. ಇಂದು ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಯಡಕುರಿಯಾ ಬಳಿ ಮೃತದೇಹ ಪತ್ತೆ ಆಗಿದೆ.

ಇದನ್ನೂ ಓದಿ: 112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡು ಪೊಲೀಸಪ್ಪನ ಪೋಲಿ ಆಟ

ಮಂಡ್ಯ ಜಿಲ್ಲೆಯ ಬಿಜಿ ಪುರದ ಗ್ರಾಮಲೆಕ್ಕಾಧಿಕಾರಿಯಾಗಿದ್ದ ನಿರಂಜನ್​ ಜುಲೈ 17 ರಂದು ಕೊಳ್ಳೇಗಾಲದ ಸೇತುವೆ ಮೇಲಿಂದ ಕಾವೇರಿ ನದಿಗೆ ಹಾರಿದ್ದರು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:51 pm, Sun, 20 July 25