Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ! ಕಾರಣ ಇಲ್ಲಿದೆ

ಪ್ರತಿ ವರ್ಷ ಬೇಸಗೆ ಬರುತ್ತಿದ್ದಂತೆಯೇ ಪ್ರವಾಸಿಗರಿಂದ ಗಿಜಿಗಿಡುತ್ತಿದ್ದ ಮೈಸೂರಿನ ಪ್ರವಾಸಿ ತಾಣಗಳು ಈ ಬಾರಿ ಖಾಲಿ ಖಾಲಿಯಾಗಿವೆ. ಬೇಸಗೆಯ ತಾಪ ಹೆಚ್ಚಾಗಿರುವುದು, ಪರೀಕ್ಷೆಗಳು ಇನ್ನೂ ಮುಗಿಯದಿರುವುದು ಸೇರಿದಂತೆ ಹಲವು ಕಾರಣಗಳು ಮೈಸೂರಿನ ಪ್ರವಾಸಿಗರ ಸಂಖ್ಯೆ ಇಳಿಕೆಗೆ ಕಾರಣವಾಗಿದೆ. ಪ್ರವಾಸಿಗರ ಕುಸಿತಕ್ಕೆ ಇನ್ನೂ ಏನೇನು ಅಂಶಗಳು ಕಾರಣವಾಗಿವೆ ಎಂಬುದು ಇಲ್ಲಿದೆ.

ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ! ಕಾರಣ ಇಲ್ಲಿದೆ
ಮೈಸೂರು ಅರಮನೆ
Follow us
Ganapathi Sharma
|

Updated on: Mar 25, 2024 | 8:14 AM

ಮೈಸೂರು, ಮಾರ್ಚ್ 25: ಸಾಮಾನ್ಯವಾಗಿ ಏಪ್ರಿಲ್ – ಮೇ ತಿಂಗಳಲ್ಲಿ ಶಾಲೆ ಮಕ್ಕಳ ಬೇಸಗೆ ರಜೆ ಮತ್ತು ಇತರ ರಜೆಗಳ ಕಾರಣಗಳಿಂದ ಮೈಸೂರಿಗೆ (Mysuru) ಹರಿದು ಬರುತ್ತಿದ್ದ ಪ್ರವಾಸಿಗರ (Tourists) ಪ್ರವಾಹ ಈ ವರ್ಷ ಕಡಿಮೆಯಾಗಿದೆ. ಈ ವರ್ಷ ಪ್ರವಾಸಿಗರ ಸಂಖ್ಯೆಯಲ್ಲಿ ಶೇ 50ರಷ್ಟು ಕುಸಿತವಾಗಿರುವ ಬಗ್ಗೆ ವರದಿಯಾಗಿದೆ. ಸಾಮಾನ್ಯವಾಗಿ ಮಾರ್ಚ್‌ನಲ್ಲಿ ಮಕ್ಕಳ ಬೋರ್ಡ್ ಪರೀಕ್ಷೆಗಳು ಮುಗಿದ ತಕ್ಷಣ ಪ್ರವಾಸಿಗರು ಮೈಸೂರು ಮತ್ತು ಹತ್ತಿರದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಆದಾಗ್ಯೂ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮೈಸೂರಿಗೆ ಮತ್ತು ಸಮೀಪದ ಪ್ರವಾಸಿ ತಾಣಗಳಿಗೆ ಬುಕಿಂಗ್​ಗಳು ಗಣನೀಯವಾಗಿ ಕುಸಿತ ಕಂಡಿದೆ ಎಂದು ಟೂರ್ ಆಪರೇಟರ್‌ಗಳು ತಿಳಿಸಿದ್ದಾರೆ.

ಪ್ರವಾಸಿಗರ ಸಂಖ್ಯೆ ಇಳಿಕೆಗೆ ಕಾರಣವೇನು?

ಬೇಸಗೆಯ ತಾಪ ಹೆಚ್ಚಾಗಿರುವುದು ಮತ್ತು ಮುಂಬರುವ ಲೋಕಸಭೆ ಚುನಾವಣೆಯೇ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಗೆ ಕಾರಣ ಎಂದು ಟೂರ್ ಆಪರೇಟರ್​ಗಳು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೆ ಈ ವರ್ಷ ಬೋರ್ಡ್​ ಪರೀಕ್ಷೆ ಸಂಬಂಧ ಉಂಟಾಗಿದ್ದ ಗೊಂದಲದ ಕಾರಣ ತಡವಾಗಿ ಈಗ ಪರೀಕ್ಷೆಗಳು ನಡೆಯುತ್ತಿವೆ. ಹಾಗಾಗಿ, ಪೋಷಕರು ಪ್ರವಾಸದ ಯೋಜನೆಗಳನ್ನು ಮುಂದೂಡುತ್ತಿದ್ದಾರೆ.

ಮತ್ತೊಂದೆಡೆ, ಪರೀಕ್ಷೆಗಳು ಮುಗಿದ ನಂತರವೂ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯೋಗಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಜಿಲ್ಲಾ ಚುನಾವಣಾ ಕಚೇರಿಯ ಅನುಮತಿಯಿಲ್ಲದೆ ಅವರು ಭಾನುವಾರವೂ ತಮ್ಮ ಕೇಂದ್ರ ಕಚೇರಿಯನ್ನು ಬಿಡುವಂತಿಲ್ಲ. ಅಲ್ಲದೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ತಡೆಯಲು ಚುನಾವಣಾ ಅಧಿಕಾರಿಗಳು ಎಲ್ಲೆಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿರುವ ಕಾರಣ ಪ್ರವಾಸಿಗರು ಭೇಟಿ ನೀಡಲು ನಿರಾಕರಿಸುತ್ತಿದ್ದಾರೆ.

ಚಾಮುಂಡಿ ಬೆಟ್ಟಕ್ಕಿಲ್ಲ ಸಮಸ್ಯೆ

ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾದರೂ ಚಾಮುಂಡಿ ಬೆಟ್ಟಕ್ಕೆ ಬರುವವರ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಆದರೆ, ಇತರ ಪ್ರವಾಸಿ ಕೇಂದ್ರಗಳಾದ ಮೃಗಾಲಯ, ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟು, ಕಾರಂಜಿ ಕೆರೆ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ಮೇಲುಕೋಟೆ, ಟಿಪ್ಪು ಅರಮನೆ, ನಿಮಿಷಾಂಬ ಸೇರಿದಂತೆ ಮೈಸೂರಿನ ಎಲ್ಲಾ ಪ್ರವಾಸಿ ತಾಣಗಳ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ.

ಇದನ್ನೂ ಓದಿ: ಕಬಿನಿ ಜಲಾಶಯದಿಂದ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ: ಎಲ್ಲಿಗೆ ಹರಿಯುತ್ತಿದ್ದಾಳೆ ಕಪಿಲೆ?

ಮೈಸೂರು ಅರಮನೆಗೆ ಸಾಮಾನ್ಯವಾಗಿ ಪ್ರತಿನಿತ್ಯ 5,000 ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಈ ವಾರಾಂತ್ಯದಲ್ಲಿ ಭೇಟಿ ನೀಡಿದವರ ಸಂಖ್ಯೆ ಕೇವಲ 2,500 ಇತ್ತು. ಈಗ ಕೇವಲ ಶೇ 30 ರಷ್ಟು ಹೋಟೆಲ್ ಕೊಠಡಿಗಳು ಮಾತ್ರ ಬುಕ್ ಆಗಿವೆ. ಶೇ 70 ರಷ್ಟು ಕೊಠಡಿಗಳು ಖಾಲಿ ಇವೆ ಎಂದು ಪ್ರವಾಸೋದ್ಯಮ ಕ್ಷೇತ್ರದ ಮೂಲಗಳನ್ನು ವರದಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ