ಗಡಿಗಳನ್ನು ಬಂದ್​ ಮಾಡಿ, ನಗರವನ್ನಲ್ಲ; ವೀಕೆಂಡ್​ ಕರ್ಫ್ಯೂ ಜಾರಿಗೆ ವರ್ತಕರು, ವಿವಿಧ ಸಂಘ ಸಂಸ್ಥೆಗಳ ವಿರೋಧ

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದು, ವೀಕೆಂಡ್ ಕರ್ಫ್ಯೂ ಪಾಲನೆಗೆ ಸಹಕಾರ ನೀಡದೇ ಇರಲು ನಿರ್ಧರಿಸಿದ್ದಾರೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಗಡಿಗಳನ್ನು ಬಂದ್ ಮಾಡಿ‌ ಆದರೆ ನಗರವನ್ನು ಬಂದ್ ಮಾಡಬೇಡಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗಡಿಗಳನ್ನು ಬಂದ್​ ಮಾಡಿ, ನಗರವನ್ನಲ್ಲ; ವೀಕೆಂಡ್​ ಕರ್ಫ್ಯೂ ಜಾರಿಗೆ ವರ್ತಕರು, ವಿವಿಧ ಸಂಘ ಸಂಸ್ಥೆಗಳ ವಿರೋಧ
ಮೈಸೂರಿನಲ್ಲಿ ಪೋಸ್ಟರ್ ಅಭಿಯಾನ
Follow us
TV9 Web
| Updated By: Skanda

Updated on: Aug 07, 2021 | 7:12 AM

ಮೈಸೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿರುವುದರಿಂದ ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಿಗೆ ಅನ್ವಯವಾಗುವಂತೆ ವೀಕೆಂಡ್ ಕರ್ಫ್ಯೂ ಹಾಗೂ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ನೈಟ್ ಕರ್ಫ್ಯೂ ಘೋಷಿಸಿದೆ. ಆ ಪ್ರಕಾರವಾಗಿ ಇಂದಿನಿಂದಲೇ (ಆಗಸ್ಟ್ 07, ಶನಿವಾರ) ವೀಕೆಂಡ್ ಕರ್ಫ್ಯೂ ಪಾಲಿಸಬೇಕಾಗಿದೆ. ಆದರೆ, ಮೈಸೂರಿನಲ್ಲಿ ರಾಜ್ಯ ಸರ್ಕಾರದ ಸದರಿ ಆದೇಶದ ವಿರುದ್ಧ ವರ್ತಕರು, ಹೋಟೆಲ್ ಮಾಲೀಕರ ಸಂಘ ಹಾಗೂ ವಿವಿಧ ಸಂಘಸಂಸ್ಥೆಗಳು ಧ್ವನಿಯೆತ್ತಿದ್ದು, ಗಡಿಗಳನ್ನು ಬಂದ್ ಮಾಡಿ‌, ನಗರವನ್ನು ಬಂದ್ ಮಾಡಬೇಡಿ ಎಂದು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದು, ವೀಕೆಂಡ್ ಕರ್ಫ್ಯೂ ಪಾಲನೆಗೆ ಸಹಕಾರ ನೀಡದೇ ಇರಲು ನಿರ್ಧರಿಸಿದ್ದಾರೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಗಡಿಗಳನ್ನು ಬಂದ್ ಮಾಡಿ‌ ಆದರೆ ನಗರವನ್ನು ಬಂದ್ ಮಾಡಬೇಡಿ ಎಂದು ಅಭಿಪ್ರಾಯಪಟ್ಟಿರುವ ಅವರು ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ವ್ಯಾಪಾರ ವಹಿವಾಟು ಚಟುವಟಿಕೆಗಳನ್ನು ಬಂದ್​ ಮಾಡುವುದರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಕೊವಿಡ್‌ ವೀಕೆಂಡ್‌ ಕರ್ಫ್ಯೂ ಜಾರಿ ಬಗ್ಗೆ ಮಾಹಿತಿ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮೈಸೂರು ಜಿಲ್ಲೆಯಲ್ಲಿ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗುತ್ತಿದೆ ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಇಂದಿನಿಂದ (ಶನಿವಾರ) ಸೋಮವಾರ ಮುಂಜಾನೆ 5ರವರೆಗೂ ಕರ್ಫ್ಯೂ ಇರಲಿದೆ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ‌ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುವುದು. ತರಕಾರಿ ಮಾರಾಟಕ್ಕೆ ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಇರುತ್ತದೆ. ಹೋಟೆಲ್‌ಗಳಲ್ಲಿ ಆಹಾರ ಪಾರ್ಸೆಲ್‌ಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಜಿಲ್ಲೆಯಲ್ಲಿ ಎಲ್ಲಾ ವಾಣಿಜ್ಯ ಚಟುವಟಿಕೆ ಬಂದ್ ಆಗಿರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಸಿಗರಿಗೆ ಆರ್​ಟಿಪಿಸಿಆರ್​ ವರದಿ ಕಡ್ಡಾಯವಿಲ್ಲ; ಹೊಸ ಆದೇಶ ಹೊರಡಿಸಿದ ಕೊಡಗು ಡಿಸಿ ಚಾರುಲತಾ 

Bengaluru Metro: ರಾತ್ರಿ ಕರ್ಫ್ಯೂ ಹಿನ್ನೆಲೆ; ಮೆಟ್ರೋ ರೈಲು ಕಾರ್ಯನಿರ್ವಹಿಸುವ ಅವಧಿಯಲ್ಲಿ ಬದಲಾವಣೆ

(Mysuru Traders Sellers and many unions oppose imposing Covid 19 weekend curfew in Cities instead they demand to close state Borders)

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್