AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುಕುಳ ಆರೋಪ: ನಾಡಿದ್ದು ಹಸೆಮಣೆ ಏರಬೇಕಿದ್ದ ಯುವತಿ ಸೇರಿ ಹೆತ್ತವರ ದಾರುಣ ಅಂತ್ಯ

ಮೈಸೂರಿನ ಟಿ.ನರಸೀಪುರದಲ್ಲಿ ನಾಡಿದ್ದು ಮದುವೆಯಾಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಅದೇ ಗ್ರಾಮದ ವ್ಯಕ್ತಿಯೋರ್ವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ದಾರುಣವಾಗಿ ಅಂತ್ಯ ಕಂಡಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ವರುಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಿರುಕುಳ ಆರೋಪ: ನಾಡಿದ್ದು ಹಸೆಮಣೆ ಏರಬೇಕಿದ್ದ ಯುವತಿ ಸೇರಿ ಹೆತ್ತವರ ದಾರುಣ ಅಂತ್ಯ
ಮೃತರುImage Credit source: Tv9 Kannada
ರಾಮ್​, ಮೈಸೂರು
| Edited By: |

Updated on:Jun 22, 2026 | 4:46 PM

Share

ಮೈಸೂರು, ಜೂನ್​​ 22: ದಾಂಪತ್ಯ ಜೀವನದ ಕನಸು ಕಂಡಿದ್ದ ಯುವತಿ ಸೇರಿ ಆಕೆಯ ಹೆತ್ತವರು ದಾರುಣ ಅಂತ್ಯ ಕಂಡಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ವ್ಯಕ್ತಿಯೋರ್ವನಿಂದ ಯುವತಿಗೆ ಕಿರುಕುಳ ಹಿನ್ನೆಲೆ ವಿಷ ಸೇವಿಸಿ ಮೂವರು ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ. ಶಿವಣ್ಣ, ನಾಗರತ್ನ ಹಾಗೂ ರಕ್ಷಿತಾ ಮೃತರಾಗಿದ್ದು, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​​ 24, ಅಂದರೆ ನಾಡಿದ್ದು ರಕ್ಷಿತಾ ವಿವಾಹ ನಡೆಯಬೇಕಿತ್ತು. ಆದರೆ ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ.

ರಕ್ಷಿತಾಗೆ ಉಲ್ಲಾಸ್ ಗೌಡ ಎಂಬಾತ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಈತನಿಗೆ ರಕ್ಷಿತಾ ಕಳುಹಿಸಿದ್ದ ಮೆಸೇಜ್ ಹಾಗೂ ಕೆಲವು ಫೋಟೋಗಳನ್ನು ಇಟ್ಟುಕೊಂಡು ಮಾನಸಿಕ ಹಿಂಸೆ ನೀಡಿದ್ದ ಎನ್ನಲಾಗಿದೆ. ರಕ್ಷಿತಾ ಜೊತೆ ಮದುವೆ ನಿಶ್ಚಯವಾಗಿದ್ದ ಹುಡುಗನಿಗೂ ಈತ ಫೋಟೋಗಳನ್ನು ಕಳುಹಿಸಿದ್ದ. ಹೀಗಾಗಿ ಮಾನಕ್ಕೆ ಅಂಜಿದ ಕುಟುಂಬಸ್ಥರು ಮನೆಯಲ್ಲೇ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಮೂವರ ಸಾವಿಗೂ ಉಲ್ಲಾಸ್ ಗೌಡ‌ನೇ ಕಾರಣನೆಂದು ರಕ್ಷಿತಾ ಡೆತ್​ನೋಟ್ ಬರೆದಿರೋದು ಕೂಡ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ವರುಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಜಿಮ್ ಟ್ರೈನರ್ ವಿಜಯ್ ಕೊಲೆಗೆ ಬಿಗ್​ ಟ್ವಿಸ್ಟ್​​; ಪ್ರಭಾವಿ ಉದ್ಯಮಿಯ ಕೈವಾಡ, ಯಾರದು?

ಸಂಬಂಧಿಕರ ಆಕ್ರಂದನ

ಹಸೆಮಣೆ ಏರಬೇಕಿದ್ದ ಮೊಮ್ಮಗಳ ಜೊತೆ ಅಳಿಯ-ಮಗಳು ಕೂಡ ಮಸಣಕ್ಕೆ ಸೇರಿದ್ದಾರೆ. ರಕ್ಷಿತಾ ಮದುವೆಗೆ ಎಲ್ಲ ಸಿದ್ಧತೆಗಳು ನಡೆದಿತ್ತು. ಆದರೆ ಉಲ್ಲಾಸ್​​ ಗೌಡ ಎಂಬಾತ ಮದುವೆ ನಿಲ್ಲಿಸಬೇಕೆಂದು ನನ್ನ ಮೊಮ್ಮಗಳ ಮಾನ ತೆಗೆದಿದ್ದಾನೆ. ಈತ ನನ್ನ ಅಳಿಯನಿಗೆ ಪರಿಚಯಸ್ಥನಾಗಿದ್ದು, ಟ್ರ್ಯಾಕ್ಟರ್ ಓಡಿಸುತ್ತಿದ್ದ ಈತನಿಗೆ ಅಳಿಯನ ಜೊತೆ ಒಡನಾಟ ಇತ್ತು. ಆಗಾಗ ಮನೆಗೆ ಕೂಡ ಆತ ಬಂದು ಹೋಗುತ್ತಿದ್ದ. ನನ್ನ ಮಗಳು, ಅಳಿಯ ಮತ್ತು ಮೊಮ್ಮಗಳ ಸಾವಿಗೆ ಕಾರಣವಾದ ಉಲ್ಲಾಸ್ ಗೌಡನಿಗೆ ಶಿಕ್ಷೆ ಆಗಬೇಕು ಎಂದು ರಕ್ಷಿತಾಳ ಅಜ್ಜಿ ಚಿನ್ನಮ್ಮ ಆಗ್ರಹಿಸಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ.

ಆ್ಯಂಬುಲೆನ್ಸ್​​ಗೆ ಗ್ರಾಮಸ್ಥರ ಮುತ್ತಿಗೆ

ಆರೋಪಿ ಉಲ್ಲಾಸ್ ಗೌಡ ಬಂಧನಕ್ಕೆ ಗ್ರಾಮಸ್ಥರು ಪಟ್ಟುಹಿಡಿದಿದ್ದು, ಬಂಧನವರೆಗೂ ಮೃತದೇಹಗಳನ್ನು ತೆಗೆದುಕೊಂಡು ಹೋಗದಂತೆ ತಾಕೀತು ಮಾಡಿದ್ದಾರೆ. ಹೀಗಾಗಿ ಪೊಲೀಸರ ಜೊತೆ ಸಂಬಂಧಿಕರು ಹಾಗೂ ಗ್ರಾಮಸ್ಥರ ಮಾತಿನ ಚಕಮಕಿ  ನಡೆದಿದೆ. ವಿರೋಧದ ನಡುವೆಯೂ ಶವಗಳನ್ನು ಕೊಂಡೊಯ್ಯುತ್ತಿದ್ದ ಕಾರಣ ಆ್ಯಂಬುಲೆನ್ಸ್​ಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಪ್ರಸಂಗವೂ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಸಹಾಯಕ ಸಿ. ಟಿ.ಕುಮಾರ್ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರೂ ಗ್ರಾಮಸ್ಥರು ಮಾತ್ರ ನಿರ್ಧಾರದಿಂದ ಹಿಂದೆ ಸರಿದಿಲ್ಲ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:54 pm, Mon, 22 June 26

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್