ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ: ಹೆರಿಗೆ ವೇಳೆ ತಾಯಿ-ಮಗು ಸಾವು

ಮೈಸೂರು ಜಿಲ್ಲೆಯ ಕೃಷ್ಣರಾಜನಗರದಲ್ಲಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮತ್ತು ಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯಿಂದ ಕುಟುಂಬ ದುಃಖತಪ್ತವಾಗಿದ್ದು, ಶಾಸಕ ಡಿ. ರವಿಶಂಕರ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ: ಹೆರಿಗೆ ವೇಳೆ ತಾಯಿ-ಮಗು ಸಾವು
ಮೃತ ತಾಯಿ
Edited By:

Updated on: Nov 03, 2026 | 7:55 PM

ಮೈಸೂರು, ನವೆಂಬರ್​ 03: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಪಟ್ಟಣದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಆಸ್ಪತ್ರೆ ಎದುರು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶಾಸಕ ಡಿ. ರವಿಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

ನಡೆದಿದ್ದೇನು?

ಹೆರಿಗೆಗಾಗಿ ಆಸ್ಪತ್ರೆಗೆ ಬಂದಿದ್ದ ಗರ್ಭಿಣಿ ಹಾಗೂ ಕಂದಮ್ಮ ಬದುಕು ದುರಂತದಲ್ಲಿ ಅಂತ್ಯವಾಗಿದೆ. ಮಳಲಿ ಗ್ರಾಮದ ಮಹೇಶ್ ಎಂಬುವರ ಪತ್ನಿ ಸುಶ್ಮಿತಾ ಹೆರಿಗೆಗಾಗಿ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಬೆಳಗ್ಗೆ ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗು ಇಬ್ಬರೂ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ ತಯಾರಿಸಿ ಊಟ

ಇನ್ನು ವೈದ್ಯರ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ವೈದ್ಯರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ತಾಯಿ ಮತ್ತು ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಡಿ. ರವಿಶಂಕರ್

ಘಟನೆ ಬೆನ್ನಲ್ಲೇ ಶಾಸಕ ಡಿ. ರವಿಶಂಕರ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಕಿವಿ ಚಿಕಿತ್ಸೆಗೆಂದು ಬಂದಿದ್ದ ಮಗು ಕೋಮಾಗೆ: 3 ತಿಂಗಳಿನಿಂದ ಚಿಕಿತ್ಸೆ ನೀಡಿದ್ರೂ ಚಿಂತಾಜನಕ ಸ್ಥಿತಿ: ಕ್ಲೌಡ್‌9 ಆಸ್ಪತ್ರೆ ವಿರುದ್ಧ ಆಕ್ರೋಶ

ಒಂಬತ್ತು ತಿಂಗಳು ಹೊತ್ತು, ಹೆತ್ತು ಮಗುವಿನ ಮುಖ ನೋಡುವ ಕನಸು ಕಂಡಿದ್ದ ಕುಟುಂಬಕ್ಕೆ ಈಗ ಬರಸಿಡಿಲು ಬಡಿದಂತಾಗಿದೆ. ತಾಯಿ ಮತ್ತು ಮಗುವನ್ನು ಕಳೆದುಕೊಂಡ ಕುಟುಂಬದ ನೋವು ಹೇಳತೀರದಾಗಿದೆ. ವೈದ್ಯರ ನಿರ್ಲಕ್ಷ್ಯದ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆದು, ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us