AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಗಾರೆ ಕೆಲಸ ಮಾಡಿಕೊಂಡು ಓದುತ್ತಿದ್ದ ವಿದ್ಯಾರ್ಥಿಗೆ 14 ಚಿನ್ನದ ಪದಕ!

ಅಮ್ಮ ಅಕ್ಕ ಅಣ್ಣನ ಸಹಕಾರದಿಂದ ವಿದ್ಯಾಭ್ಯಾಸ ಮಾಡಿರುವ ಅವರು ಗಾರೆ ಕೆಲಸ, ಬಣ್ಣ ಬಳಿಯುವ ಕೆಲಸ ಸೇರಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದರು. ಸಾಹಿತ್ಯದಲ್ಲಿ ಪಿಎಚ್‌ಡಿ ಮಾಡಬೇಕು, ಐಎಎಸ್ ಹಾಗೂ ಕೆಎ‌ಎಸ್ ಮಾಡಬೇಕೆಂಬ ಕನಸು ಇರುವುದಾಗಿ ತಿಳಿಸಿದ್ದಾರೆ.

ಮೈಸೂರು: ಗಾರೆ ಕೆಲಸ ಮಾಡಿಕೊಂಡು ಓದುತ್ತಿದ್ದ ವಿದ್ಯಾರ್ಥಿಗೆ 14 ಚಿನ್ನದ ಪದಕ!
ವಿದ್ಯಾರ್ಥಿಗಳಿಗೆ ಚಿನ್ನದ ಪದಕ
Follow us
TV9 Web
| Updated By: ganapathi bhat

Updated on: Mar 22, 2022 | 1:27 PM

ಮೈಸೂರು: ಗಾರೆ ಕೆಲಸ ಮಾಡಿಕೊಂಡು ಓದುತ್ತಿದ್ದ ವಿದ್ಯಾರ್ಥಿ ಪಿ. ಮಹದೇವಸ್ವಾಮಿ ಎಂಬವರಿಗೆ 14 ಚಿನ್ನದ ಪದಕ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗೆ 14 ಚಿನ್ನದ ಪದಕ ಲಭ್ಯವಾಗಿದೆ. 14 ಚಿನ್ನದ ಪದಕಗಳ ಜೊತೆಗೆ 3 ನಗದು ಬಹುಮಾನವನ್ನು ವಿದ್ಯಾರ್ಥಿ ಪಡೆದುಕೊಂಡಿದ್ದಾರೆ. ಪುಟ್ಟಬಸವಯ್ಯ, ನಾಗಮ್ಮ ದಂಪತಿ ಪುತ್ರ ಮಹದೇವ, ಚಾಮರಾಜನಗರ ಜಿಲ್ಲೆಯ ನಾಗವಳ್ಳಿಯ ವಿದ್ಯಾರ್ಥಿ ಎಂಎ ಕನ್ನಡದಲ್ಲಿ ಸಾಧನೆ ಮಾಡಿದ್ದಾರೆ.

20 ವರ್ಷದ ಹಿಂದೆ ತಂದೆ ಪುಟ್ಟ ಬಸವಯ್ಯ ನಿಧನ ಹೊಂದಿದ್ದರು. ಅಮ್ಮ ಕೂಲಿ ಕೆಲಸ ಮಾಡಿ ಮಗನಿಗೆ ಶಿಕ್ಷಣ ನೀಡಿದ್ದಾರೆ. ಅಮ್ಮ ಅಕ್ಕ ಅಣ್ಣನ ಸಹಕಾರದಿಂದ ವಿದ್ಯಾಭ್ಯಾಸ ಮಾಡಿರುವ ಅವರು ಗಾರೆ ಕೆಲಸ, ಬಣ್ಣ ಬಳಿಯುವ ಕೆಲಸ ಸೇರಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದರು. ಸಾಹಿತ್ಯದಲ್ಲಿ ಪಿಎಚ್‌ಡಿ ಮಾಡಬೇಕು, ಐಎಎಸ್ ಹಾಗೂ ಕೆಎ‌ಎಸ್ ಮಾಡಬೇಕೆಂಬ ಕನಸು ಇರುವುದಾಗಿ ತಿಳಿಸಿದ್ದಾರೆ. ಡಾ.ಬಿ.ಆರ್ ಅಂಬೇಡ್ಕರ್ ಸ್ಪೂರ್ತಿಯಿಂದ ವಿದ್ಯಾಭ್ಯಾಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಮೈಸೂರು ವಿವಿ ಘಟಿಕೋತ್ಸವ ಕಾರ್ಯಕ್ರಮದಲ್ಲಿ ತಂದೆ ತಾಯಿ ಇಲ್ಲದ ವಿದ್ಯಾರ್ಥಿನಿ ಒಬ್ಬರು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ತೇಜಸ್ವಿನಿ ಎಂಬವರಿಗೆ 9 ಚಿನ್ನದ ಪದಕ 10 ನಗದು ಬಹುಮಾನ ಲಭಿಸಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಗ್ರಾಮ ಸತ್ತೆಗಾಲದ ವಿದ್ಯಾರ್ಥಿನಿ ಈ ಸಾಧನೆ ಮಾಡಿದ್ದಾರೆ. ಮಹಾರಾಣಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ತಂದೆ ವೆಂಕಟೇಶ ಹಾಗೂ ತಾಯಿ ನಾಗಮ್ಮ ವಿದ್ಯಾರ್ಥಿನಿ ಚಿಕ್ಕ ವಯಸ್ಸಿನಿನಲ್ಲಿ ಇರುವಾಗಲೇ ಸಾವನ್ನಪ್ಪಿದ್ದರು. ಆದರೂ ಇದರಿಂದ ಧೃತಿಗೆಡದ ವಿದ್ಯಾರ್ಥಿನಿ ಈ ಸಾಧನೆ ಮಾಡಿದ್ದಾರೆ.

ಮೈಸೂರು ವಿವಿ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಒಬ್ಬರಿಗೆ 19 ಚಿನ್ನದ ಪದಕ 2 ನಗದು ಬಹುಮಾನ ಲಭಿಸಿದೆ. ಕೆಮಿಸ್ಟ್ರಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಭಾವನ ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. ಮಹದೇವ ಭಾಗ್ಯ ದಂಪತಿ ಪುತ್ರಿ ಮೈಸೂರಿನ ರಾಜರಾಜೇಶ್ವರಿ ನಗರದ ನಿವಾಸಿ ಆಗಿದ್ದಾರೆ.

ಪಾರ್ವತಮ್ಮ ರಾಜ್‌ಕುಮಾರ್, ಪುನೀತ್ ಹೆಸರಲ್ಲಿ ಪದಕ

ಮುಂದಿನ ವರ್ಷದಿಂದ ಪಾರ್ವತಮ್ಮ ರಾಜ್‌ಕುಮಾರ್, ಪುನೀತ್ ಹೆಸರಲ್ಲಿ ಬಂಗಾರದ ಪದಕ ಪ್ರದಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಮೈಸೂರಿನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಘೋಷಣೆ ಮಾಡಿದ್ದಾರೆ. ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ವಿಭಾಗಕ್ಕೆ ಪಾರ್ವತಮ್ಮ ಪದಕ, ಲಲಿತ ಕಲೆ ವಿಭಾಗಕ್ಕೆ ಪುನೀತ್ ಹೆಸರಿನಲ್ಲಿ ಪದಕ ಪ್ರದಾನ ಮಾಡಲಾಗುವುದು. ಮುಂದಿನ ವರ್ಷದಿಂದ ಪದಕ ಪ್ರದಾನ ಮಾಡಲಾಗುವುದು ಎಂದು ಅಶ್ವಿನಿ ಪುನೀತ್ ರಾಜ್​ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್​ಗೆ​ ಮೈಸೂರು ವಿವಿಯಿಂದ ಡಾಕ್ಟರೇಟ್​; ಕಾರ್ಯಕ್ರಮದಲ್ಲಿ ರಾಜ್​ ಕುಟುಂಬ ಭಾಗಿ

ಇದನ್ನೂ ಓದಿ: 16 ಚಿನ್ನದ ಪದಕ ಬಾಚಿದ ರಾಯಚೂರಿನ ಬುಶ್ರಾ ಮತೀನ್​ಗೆ, ಐಎಎಸ್ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಒತ್ತಾಸೆ

ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ