AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದರ್ಶನಕ್ಕೆಂದ ಹೋದ ಮಹಿಳೆ, 3 ದಿನದ ಬಳಿಕ ಶವವಾಗಿ ಪತ್ತೆ

ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ ದರ್ಶನ ಮಾಡಿಕೊಂಡು ಬರುವುದಾಗಿ ಹೇಳಿ ಬಂದಿದ್ದ ಮಹಿಳೆ ವಾಪಸ್ ಮನೆಗೆ ಶವವಾಗಿ ಮರಳಿದ್ದಾರೆ. ಮತ್ತೊಂದೆಡೆ ಮನೆಯವರ ವಿರೋಧದ ನಡೆವೆಯೇ ಒಂದು ವರ್ಷದ ಹಿಂದೆ ಅಷ್ಟೇ ಮದುವೆಯಾಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜಾರ್ಖಂಡ್​ನಲ್ಲಿ ಸಪ್ತಪದಿ ತುಳಿದು ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದಿದ್ದರು. ಆದ್ರೆ, ನವವಿವಾಹಿತೆ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದರ್ಶನಕ್ಕೆಂದ ಹೋದ ಮಹಿಳೆ, 3 ದಿನದ ಬಳಿಕ ಶವವಾಗಿ ಪತ್ತೆ
ಪ್ರಾತಿನಿಧಿಕ ಚಿತ್ರImage Credit source: iStock Photo
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 10, 2023 | 3:21 PM

Share

ಮೈಸೂರು, (ನವೆಂಬರ್ 10): ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿಯ (nanjangud nanjundeshwara temple)ದರ್ಶನ ಮಾಡಿಕೊಂಡು ಬರುವುದಾಗಿ ಹೇಳಿ ಬಂದಿದ್ದ ಮಹಿಳೆ ವಾಪಸ್ ಮನೆಗೆ ಶವವಾಗಿ ಮರಳಿದ್ದಾರೆ. ಹೌದು…ಮೈಸೂರಿನ (Mysuru)ಸುಭಾಷ್ ನಗರದ ಮಂಜುನಾಥ್ ಎಂಬುವವರ ಪತ್ನಿ ಮಂಜುಳಾ (50) ನವೆಂಬರ್ 07ರಂದು ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದಾರೆ. ಆದ್ರೆ, ಅವರು ನಂಜುಂಡೇಶ್ವರ ಸ್ವಾಮಿ ದೇವಾಲಯದ ಬಳಿಯ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಅವರ ಮೃತದೇಹ ಪತ್ತೆಯಾಗಿದೆ.

ನವೆಂಬರ್ 7 ರಂದು ಮಂಜುಳಾ ಮನೆಯಿಂದ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುತ್ತೇನೆ ಎಂದು ಬಂದಿದ್ದರು. ಆದ್ರೆ, ವಾಪಸ್ ಮನೆ ಬಂದಿರಲಿಲ್ಲ. ಈ ಬಗ್ಗೆ ಎಲ್ಲಾ ಕಡೆ ಹುಡುಕಿದರು ಇವರ ಸುಳಿವು ಸಿಕ್ಕಿರಲಿಲ್ಲ. ಇಂದು ಕಪಿಲಾ ನದಿಯಲ್ಲಿ ಶವ ಸಿಕ್ಕಿದೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವವನ್ನು ಒಪ್ಪಿಸಲಾಗಿದೆ.

ಇದನ್ನೂ ಓದಿ: ಶತ್ರುಗಳ ಗುಂಡಿಗೂ ಬಗ್ಗದ ಯೋಧ ಯುವತಿಯ ಲವ್​ ಬಲೆಗೆ ಬಿದ್ದು ದುರಂತ ಅಂತ್ಯಕಂಡ

ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು ಹತ್ತು ವರ್ಷಗಳಿಂದ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಹೊಟ್ಟೆ ನೋವು ತಾಳಲಾರದೇ ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಮಂಜುನಾಥ್ ದೂರಿನಲ್ಲಿ ತಿಳಿಸಿದ್ದಾರೆ.

ಮದುವೆಯಾದ ಒಂದೇ ವರ್ಷದಲ್ಲೇ ನವವಿವಾಹಿತೆ ಆತ್ಮಹತ್ಯೆ

ಬೆಂಗಳೂರು: ಮದುವೆಯಾದ ಒಂದೇ ವರ್ಷದಲ್ಲೇ ನವವಿವಾಹಿತೆ ಮಹಿಳೆಯೊಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ನಗರೂರಿನಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಕಾಜಲ್ ಕುಮಾರಿ(21) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮನೆಯವರ ವಿರೋಧದ ನಡುವೆ ಒಂದು ವರ್ಷದ ಹಿಂದೆ ಅಷ್ಟೇ ವಿಶಾಲ್ ಕುಮಾರ್ (23 ಎನ್ನುವಾನನ್ನು ಮದುವೆಯಾಗಿದ್ದಳು. ಆದ್ರೆ, ಇಂದು ಪತಿ ಇಲ್ಲದ ವೇಳೆ ಮನೆಯ ಪ್ಯಾನ್ ಗೆ ವೇಲ್​ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತ ಕಾಜಲ್ ಕುಮಾರಿ ಮನೆಯವರ ವಿರೋಧದ ನಡುವೆಯೂ ಒಂದು ವರ್ಷದ ಹಿಂದೆ ಅಷ್ಟೇ ವಿಶಾಲ್ ಕುಮಾರ್ ಎನ್ನುವಾತನ್ನು ವಿವಾಹವಾಗಿದ್ದಳು. ಬಳಿಕ ಬೆಂಗಳೂರಿಗೆ ಬಂದು ನಗರೂರಿನಲ್ಲಿ ಜೀವನ ಸಾಗಿಸತ್ತಿದ್ದರು. ಕಾಜಲ್ ಕುಮಾರಿ ಬೆಂಗಳೂರಿನ ಫಿಲಿಪ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆದ್ರೆ, ಕೆಲಸಕ್ಕೆ ಹೋಗುವ ವಿಷಯದಲ್ಲಿ ಗಲಾಟೆ, ಮಾನಸಿಕ ಹಿಂಸೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ಪತಿ ವಿಶಾಲ್ ಕುಮಾರ್​ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Fri, 10 November 23

ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ