AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಕೆ’ ಗರ್ಭಿಣಿಯಾಗಲು ತಾನಲ್ಲ ಕಾರಣ ಎಂದು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ!

ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿದ್ದ ಯುವಕನೊಬ್ಬ, ಆಕೆಯನ್ನು ತಾನು ಬಸಿರು ಮಾಡಿಲ್ಲ ಎಂದು ಪ್ರತಿಪಾದಿಸಿ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಆತನ, ಮೃತದೇಹ ಬೆಟ್ಟದ ತುಂಗಾ ನಾಲೆಯಲ್ಲಿ ಪತ್ತೆಯಾಗಿದೆ.

‘ಆಕೆ’ ಗರ್ಭಿಣಿಯಾಗಲು ತಾನಲ್ಲ ಕಾರಣ ಎಂದು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ!
ರಾಮು
ರಾಮ್​, ಮೈಸೂರು
| Edited By: |

Updated on: Nov 03, 2025 | 8:59 AM

Share

ಮೈಸೂರು, ನವೆಂಬರ್ 3: ಶಾಲಾ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷ ವಯಸ್ಸಿನ ಯುವಕ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು (Mysuru) ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ, ಸಾವಿಗೆ ಶರಣಾಗುವುದಕ್ಕೂ ಮುನ್ನ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪಗಳೆಲ್ಲ ಸುಳ್ಳು. ಎಲ್ಲದಕ್ಕೂ ಆ ಶಾಲೆಯ ಪಿಟಿ ಮಾಸ್ತರೇ ಕಾರಣ. ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ಯಾರಿಂದ ಎಂಬುದನ್ನು ಡಿಎನ್​​ಎ ಟೆಸ್ಟ್ ಮೂಲಕ ಪತ್ತೆಹಚ್ಚಬೇಕು ಎಂದು ಹೇಳಿಕೊಂಡಿದ್ದಾನೆ.

ಯುವಕನ ವಾಯ್ಸ್ ನೋಟ್​ನಲ್ಲೇನಿದೆ?

ಆತ್ಮಹತ್ಯೆಗೂ ಮುನ್ನ ವಾಯ್ಸ್ ನೋಟ್ ಮಾಡಿಟ್ಟಿರುವ ಯುವಕ, ವಿದ್ಯಾರ್ಥಿನಿ ಗರ್ಭಿಣಿಯಾಗುವುದಕ್ಕೆ ನಾನು ಕಾರಣ ಅಲ್ಲ. ನನಗೂ ಆಕೆಗೂ ಯಾವುದೇ ಸಂಬಂಧ ಇಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಇದರಿಂದಾಗಿ ನನಗೆ ತಲೆ ಎತ್ತಿ ನಡೆಯಲು ಸಾಧ್ಯವಾಗುತ್ತಿಲ್ಲ, ವೈದ್ಯರು ಬಂದು ಬಾಲಕಿಯ ಆರೋಗ್ಯ ತಪಾಸಣೆ ನಡೆಸಿದ್ದರು. ಆಗ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಶಾಲೆಗೆ ಕಳಂಕ ಬರುತ್ತದೆ ಎಂದು ಅಂತ ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾನೆ.

ಮುಂದುವರಿದು, ಹುಡುಗಿಯನ್ನು ಮಾತನಾಡಿಸಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಶಾಲೆಯ ಪಿಟಿ ಟೀಚರ್ ಇದಕ್ಕೆಲ್ಲಾ ಕಾರಣ. ಅವರು ಹೀಗೆ ಮಾಡಿದ್ದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವಾಯ್ಸ್ ನೋಟ್​ನಲ್ಲಿ ಯುವಕ ಹೇಳಿದ್ದಾನೆ.

ಇದನ್ನೂ ಓದಿ: ಮೈಸೂರಿನ ಸರಗೂರಲ್ಲಿ ನಿಲ್ಲದ ವ್ಯಾಘ್ರನ ಆರ್ಭಟ: ಹುಲಿ ದಾಳಿಗೆ ದನಗಾಹಿ ಸಾವು

ಅಕ್ಟೋಬರ್ 31ರಂದು ವಾಯ್ಸ್ ನೋಟ್ ಹಾಕಿ ಯುವಕ ನಾಪತ್ತೆಯಾಗಿದ್ದ. ಇದೀಗ ಬೆಟ್ಟದ ತುಂಗಾ ನಾಲೆಯಲ್ಲಿ ಯುವಕನ ದೇಹ ಪತ್ತೆಯಾಗಿದೆ. ಬೆಟ್ಟದ ತುಂಗಾ ಗ್ರಾಮದ ನಾಲೆಯ ಬಳಿ ಬೈಕ್, ಚಪ್ಪಲಿ, ಮೊಬೈಲ್, ಜರ್ಕಿನ್ ಬಿಟ್ಟು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಲ್ಲದೆ, ಡಿಎನ್ಎ ಟೆಸ್ಟ್ ಮೂಲಕ ತಪ್ಪಿತಸ್ಥರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಿ ಎಂದು ವಾಯ್ಸ್​ ನೋಟ್ ಮೂಲಕ ಒತ್ತಾಯಿಸಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್