ಲಾಕ್​ಡೌನ್​ ಸಮಯದಲ್ಲಿ ಕೊವಿಡ್ ವಾರಿಯರ್ಸ್​ ರೀತಿ ದುಡಿಯುತ್ತಿದ್ದಾರೆ ಈ ಯುವಕರು

ಮೈಸೂರು: ಲಾಕ್​ಡೌನ್ ಸಂದರ್ಭದಲ್ಲಿ ಎಲ್ಲರು ಮನೆಯಲ್ಲಿ ಟಿವಿ ನೋಡ್ತಾ ಆಟ ಆಡ್ತ ಕುಟುಂಬಸ್ಥರ ಜೊತೆ ಕಾಲಕಳೆದ್ರೆ ಮೈಸೂರಿನ ಈ ಯುವಕರ ಕಾರ್ಯ ಶ್ಲಾಘನೀಯ. ಲಾಕ್​ಡೌನ್ ಸಂದರ್ಭದಲ್ಲಿ ಈ ಯುವಕರು ಕೊರೊನಾ ವಾರಿಯರ್​ಗಳಂತೆ ದುಡಿದಿದ್ದಾರೆ. ಬಡವರ ಪ್ರತಿ ಮನೆ ಮನೆಗಳಿಗೆ ಧಾನಿಗಳು ನೀಡಿದ ಆಹಾರ ಪದಾರ್ಥಗಳನ್ನು ತಲುಪಿಸಿ ಬಂದಿದ್ದಾರೆ. ಆದ್ರೆ ಇದ್ಯಾವುದಕ್ಕೂ ಅವರು ಒಂದು ರೂಪಾಯಿ ಪಡೆದಿಲ್ಲ. ಬದಲಿಗೆ ತಮ್ಮ ದುಡಿಮೆಯಲ್ಲಿ ಉಳಿದಿದ್ದ ಹಣವನ್ನೇ ಖರ್ಚು ಮಾಡಿ ಸೇವೆ ಸಲ್ಲಿಸಿದ್ದಾರೆ. ಅಷ್ಟೆ ಅಲ್ಲದೆ ದಿನಸಿ ಕಿಟ್​ಗಳನ್ನು ಮನೆ ಮನೆಗೆ […]

ಲಾಕ್​ಡೌನ್​ ಸಮಯದಲ್ಲಿ ಕೊವಿಡ್ ವಾರಿಯರ್ಸ್​ ರೀತಿ ದುಡಿಯುತ್ತಿದ್ದಾರೆ ಈ ಯುವಕರು
Follow us
ಸಾಧು ಶ್ರೀನಾಥ್​
| Updated By:

Updated on:May 29, 2020 | 5:06 PM

ಮೈಸೂರು: ಲಾಕ್​ಡೌನ್ ಸಂದರ್ಭದಲ್ಲಿ ಎಲ್ಲರು ಮನೆಯಲ್ಲಿ ಟಿವಿ ನೋಡ್ತಾ ಆಟ ಆಡ್ತ ಕುಟುಂಬಸ್ಥರ ಜೊತೆ ಕಾಲಕಳೆದ್ರೆ ಮೈಸೂರಿನ ಈ ಯುವಕರ ಕಾರ್ಯ ಶ್ಲಾಘನೀಯ. ಲಾಕ್​ಡೌನ್ ಸಂದರ್ಭದಲ್ಲಿ ಈ ಯುವಕರು ಕೊರೊನಾ ವಾರಿಯರ್​ಗಳಂತೆ ದುಡಿದಿದ್ದಾರೆ. ಬಡವರ ಪ್ರತಿ ಮನೆ ಮನೆಗಳಿಗೆ ಧಾನಿಗಳು ನೀಡಿದ ಆಹಾರ ಪದಾರ್ಥಗಳನ್ನು ತಲುಪಿಸಿ ಬಂದಿದ್ದಾರೆ. ಆದ್ರೆ ಇದ್ಯಾವುದಕ್ಕೂ ಅವರು ಒಂದು ರೂಪಾಯಿ ಪಡೆದಿಲ್ಲ. ಬದಲಿಗೆ ತಮ್ಮ ದುಡಿಮೆಯಲ್ಲಿ ಉಳಿದಿದ್ದ ಹಣವನ್ನೇ ಖರ್ಚು ಮಾಡಿ ಸೇವೆ ಸಲ್ಲಿಸಿದ್ದಾರೆ. ಅಷ್ಟೆ ಅಲ್ಲದೆ ದಿನಸಿ ಕಿಟ್​ಗಳನ್ನು ಮನೆ ಮನೆಗೆ ತಲುಪಿಸಲು ತಮ್ಮ ವಾಹನಗಳನ್ನೇ ಬಳಸಿದ್ದಾರೆ.

ಕೆಲವು ಸಂದರ್ಭದಲ್ಲಿ ಬೇರೆ ಜಿಲ್ಲೆಗಳಿಗೂ ಆಹಾರ ಪದಾರ್ಥಗಳು ಹಾಗೂ ಔಷಧಿಯನ್ನು ತಲುಪಿಸಿ ಬಂದಿದ್ದಾರೆ. ಅಷ್ಟೆ ಅಲ್ಲದೆ ಮಂಗಳೂರಿನ ಕೊವಿಡ್ ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಮೈಸೂರು ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡೋಗಿ ಜೀವ ಉಳಿಸಿದ್ದಾರೆ. ಹೀಗೆ ನಾನಾ ರೀತಿಯಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ಮೈಸೂರಿನ 100 ಯುವಕರು ಒಂದು ಗುಂಪಾಗಿ ಅನೇಕ ಸೇವೆಗಳನ್ನು ಮಾಡಿಕೊಂಡು ಬಂದಿದ್ದಾರೆ.

ಕಾರ್ಮಿಕರನ್ನ ತವರೂರಿಗೆ ತಲುಪಿಸುವ ಕೆಲಸ: ಇದೀಗಾ ಬಿಹಾರದ‌ 12 ವಲಸೆ ಕಾರ್ಮಿಕರು ಮೈಸೂರಿನಲ್ಲೇ ಸಿಕ್ಕಿ ಹಾಕಿಕೊಂಡಿದ್ರು. ಅವರ ಜೇಬಿನಲ್ಲಿ ಒಂದು ರೂ‌ಪಾಯಿ ಸಹ ಇರಲಿಲ್ಲ.‌ ಈ ಸಂದರ್ಭದಲ್ಲಿ ತಮ್ಮ ಬಳಿಯೇ ಇದ್ದ ಹಣವನ್ನ ಯುವಕರು ಒಟ್ಟುಗೂಡಿಸಿ ಬಾಡಿಗೆ ಕಾರು ಮಾಡಿ ಅವರನ್ನು ತಮ್ಮ ಊರಿಗೆ ಕಳುಹಿಸುವ ಕೆಲಸ ಮಾಡಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಉಳಿದ ಕಾರ್ಮಿಕರನ್ನು ತವರೂರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ.

ಲಾಕ್​ಡೌನ್ ಸಮಯದಲ್ಲಿ ಈ ಯುವಕರ ತಂಡ ಮಾಡಿರುವ ಕೆಲಸ ನಿಜಕ್ಕೂ ಶ್ಲಾಘನೀಯ. ತಮ್ಮ ಜೇಬಿನಿಂದಲೇ ಹಣ ಖರ್ಚು ಮಾಡಿಕೊಂಡು ನಿರಂತರ ಸೇವೆಯಲ್ಲಿ ತೊಡಗಿರುವ ಯುವಕರ ಕಾರ್ಯ ಎಲ್ಲರಿಗೂ ಮಾದರಿ.

Published On - 4:59 pm, Fri, 29 May 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್