ಲೋಕಾ ಬಲೆಯಲ್ಲಿರುವ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ: ಶಿಕ್ಷಕರಿಗೆ 70 ಕೋಟಿ ರೂ. ವಂಚನೆ

| Updated By: ವಿವೇಕ ಬಿರಾದಾರ

Updated on: Dec 12, 2023 | 1:10 PM

ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಇದೀಗ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ.

ಲೋಕಾ ಬಲೆಯಲ್ಲಿರುವ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ: ಶಿಕ್ಷಕರಿಗೆ 70 ಕೋಟಿ ರೂ. ವಂಚನೆ
ವಂಚನೆ ಎಸಗಿದ ಮಾಧುಸ್ವಾಮಿ
Follow us on

ಮೈಸೂರು, ಡಿಸೆಂಬರ್​​ 11: ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ (Lokayukta) ಅಧಿಕಾರಿಗಳು ನಂಜನಗೂಡಿನ (Nanjangudu) ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಇದೀಗ ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ನಿವೇಶನ ಕೊಡಿಸುವುದಾಗಿ 70 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.

ಕರ್ನಾಟಕ ರಾಜ್ಯ ಕಾಲೇಜು ಅಧ್ಯಾಪಕರು ಹಾಗೂ ಶಾಲಾ ಶಿಕ್ಷಕರ ಗೃಹನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಮೈಸೂರಿನ ಗುರುಕುಲ ಬಡಾವಣೆಯಲ್ಲಿ 40 ಲಕ್ಷ ರೂ. ಮೌಲ್ಯದ 70 ನಿವೇಶ ಕೊಡಿಸುವುದಾಗಿ ಶಿಕ್ಷಕರಿಂದ 28 ಕೋಟಿ ರೂ. ಹಣ ಪಡೆದಿದ್ದಾನೆ. ಆದರೆ ಶಿಕ್ಷಕರಿಗೆ ನಿವೇಶನ ನೀಡದೆ, ಹೆಂಡತಿ ಮಕ್ಕಳು ಸಂಬಂಧಿಕರಿಗೆ ಹೆಸರಿಗೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು: ಜನರ ಕಣ್ಣಿಗೆ ಮಂಕು ಬೂದಿ ಎರಚಿತೆ ಬೆಸ್ಕಾಂ? ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಬಯಲು

ಅದಲ್ಲದೆ ಮತ್ತೊಂದು ಬಡಾವಣೆ ನಿರ್ಮಾಣಕ್ಕೆ ಶಿಕ್ಷಕರಿಂದ 2014 ರಿಂದ 40 ಕೋಟಿ ಹಣ ವಸೂಲಿ ಮಾಡಿದ್ದಾನೆ. ಆದರೆ ಬಡಾವಣೆ ನಿರ್ಮಾಣಕ್ಕೆ ಮಹದೇವಸ್ವಾಮಿ ಭೂಮಿಯನ್ನೇ ಖರೀದಿ ಮಾಡಿಲ್ಲ. ಈ ಬಗ್ಗೆ ಪೊಲೀಸರು, ಸಹಕಾರ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಹದೇವಸ್ವಾಮಿ ಸಂಬಂಧಿಕರಿಗೆ ಸೈಟ್ ಮಾರಿ ತನ್ನ ಹೆಸರಿಗೆ ದಾನವಾಗಿ ಮಾಡಿಕೊಂಡಿದ್ದಾನೆ ಎಂಬ ಆರೋಪಿದೆ.

ಲೋಕಾಯುಕ್ತ ದಾಳಿ

ಲೋಕಾಯುಕ್ತ ಅಧಿಕಾರಿಗಳು ಒಂದು ವಾರದ ಹಿಂದೆ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ ಮಾಡಿದ್ದರು. ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದರು. ಕುಟುಂಬದ ಹೆಸರಿನಲ್ಲಿ ಎಂ ಎಸ್ ಗ್ರೂಪ್ ಕಂಪನಿ, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐ ಜಿ ಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳು ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದರು. ದಾಳಿ ಬಳಿಕ 8 ಕೋಟಿ ಅಕ್ರಮ ಆಸ್ತಿ ಇದೆ ಎಂದು ಲೋಕಾ ಪೊಲೀಸರು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ