AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು: ವಿನೂತನ ಪ್ರತಿಭಟನೆ, ಆಡಳಿತಭವನದಲ್ಲೇ ನಿದ್ದಮಾಡಿದ ರೈತರು

ಸರ್ಕಾರಿ ಭೂಮಿಯನ್ನು ಭೂ ಮಾಫಿಯಾದವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವುಗೊಳಿಸುವಂತೆ ಈಗಿನ ಶಾಸಕರಿಗೆ ಮತ್ತು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ತಹಶೀಲ್ದಾರ್ ಕ್ರಮ ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ನಂಜನಗೂಡು: ವಿನೂತನ ಪ್ರತಿಭಟನೆ, ಆಡಳಿತಭವನದಲ್ಲೇ ನಿದ್ದಮಾಡಿದ ರೈತರು
ಆಡಳಿತಭವನದಲ್ಲೇ ಮಲಗಿದ ರೈತರು
ರಾಮ್​, ಮೈಸೂರು
| Updated By: Ganapathi Sharma|

Updated on: Nov 18, 2023 | 3:38 PM

Share

ಮೈಸೂರು, ನವೆಂಬರ್ 18: ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ನಂಜನಗೂಡು (Nanjangud) ತಾಲ್ಲೂಕು ಆಡಳಿತ ಭವನದಲ್ಲಿ ನಿದ್ದೆ ಮಾಡಿ ವಿನೂತನ ಪ್ರತಿಭಟನೆ (Farmers Protest) ನಡೆಸಿದರು. ಬಳಿಕ ತಾಲ್ಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರಿಂದ ಪ್ರತಿಭಟನೆ ನಡೆಯಿತು.

ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಅಧಿಕಾರಿಗಳು ಮಾಡಲು ವಿಳಂಬ ಮಾಡುತ್ತಿದ್ದಾರೆ. ತಾಲೂಕು ಆಡಳಿತದಿಂದ ಜನರ ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ಸರ್ಕಾರಿ ಭೂಮಿಯನ್ನು ಭೂ ಮಾಫಿಯಾದವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವುಗೊಳಿಸುವಂತೆ ಈಗಿನ ಶಾಸಕರಿಗೆ ಮತ್ತು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ತಹಶೀಲ್ದಾರ್ ಕ್ರಮ ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ 2012 ಸಾಲಿನ ಸಿವಿಲ್ ಆದೇಶ ಉಪವಿಭಾಗಾಧಿಕಾರಿಗಳ ಆದೇಶವಿದ್ದರೂ ಸಹ ಐದು ಭಾರಿ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಂದ ವರದಿಗಳನ್ನು ತೆಗೆದುಕೊಂಡಿದ್ದಾರೆ. ಆದರೆ ಸಿವಿಲ್ ಆದೇಶವನ್ನು ಯಾಕೆ ಮಾಡಬೇಕು ಎಂದು ರೈತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ವರುಣ ಅಸೆಂಬ್ಲಿ ಕ್ಷೇತ್ರದ 5 ಸರ್ಕಾರಿ ಶಾಲೆಗಳ ವಸ್ತುಸ್ಥಿತಿ ಟಿವಿ 9 ರಿಯಾಲಿಟಿ ಚೆಕ್ ನಲ್ಲಿ ಅನಾವರಣಗೊಂಡಿರುವುದು ಹೀಗೆ

ಒತ್ತುವರಿಯಾಗಿರುವ ಸ್ಮಶಾನದ ಜಾಗವನ್ನು ತೆರವುಗೊಳಿಸಿಲ್ಲ. ರೈತರಿಗೆ ಜಮೀನುಗಳಿಗೆ ತೆರಳಲು ಬಂಡಿ ದಾರಿಗಳನ್ನು ತೆರವು ಮಾಡುವ ಕೆಲಸವನ್ನು ಮಾಡಿಲ್ಲ. ಇದಕ್ಕಾಗಿ ನಾವು ನಿದ್ದೆ ಮಾಡುವ ತಾಲೂಕು ಆಡಳಿತದ ವಿರುದ್ಧ ನಿದ್ದೆ ಚಳುವಳಿ ಹಮ್ಮಿಕೊಂಡಿದ್ದೇವೆ. ಶಾಸಕರ ಮಾತಿಗೂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಕೂಡಲೇ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಬೇಕು. ಒಂದು ವೇಳೆ ಇದೆ ತಹಶೀಲ್ದಾರ್ ಮುಂದುವರಿದರೆ ಪ್ರತಿದಿನ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾನಿರತ ರೈತರ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್