ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ; ಬಿಎಸ್​ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ತಿರುಗಿಬಿದ್ದ ನೆಟ್ಟಿಗರು, ಕಾರಣ ಇಲ್ಲಿದೆ

| Updated By: ಆಯೇಷಾ ಬಾನು

Updated on: Mar 12, 2024 | 11:21 AM

ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುವ ವಿಚಾರ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ. ಬಿಎಸ್​ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ವಿರುದ್ಧ ನೆಟ್ಟಿಗರು ತಿರುಗಿಬಿದಿದ್ದಾರೆ. ವಿಜಯೇಂದ್ರ, ಯಡಿಯೂರಪ್ಪ ಭಾವಚಿತ್ರ ಹಾಕಿ ಟ್ವಿಟ್ ಮಾಡಿ ನೆಟ್ಟಿಗರು ವಾಗ್ದಾಳಿ ನಡೆಸಿದ್ದಾರೆ.

ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ; ಬಿಎಸ್​ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ತಿರುಗಿಬಿದ್ದ ನೆಟ್ಟಿಗರು, ಕಾರಣ ಇಲ್ಲಿದೆ
ಪ್ರತಾಪ್ ಸಿಂಹ
Follow us on

ಬೆಂಗಳೂರು, ಮಾರ್ಚ್​.12: ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಸಂಸದ ಪ್ರತಾಪ್ ಸಿಂಹಗೆ (Pratap Simha) ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ವಿರುದ್ಧ ನೆಟ್ಟಿಗರು ತಿರುಗಿಬಿದ್ದಿದ್ದಾರೆ.

ಕರ್ನಾಟಕದಲ್ಲಿ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ ಯಡಿಯೂರಪ್ಪ-ವಿಜಯೇಂದ್ರ ಎಂದು ಪೋಸ್ಟ್ ಹಾಕಿ ನೆಟ್ಟಿಗರು ಕಿಡಿಕಾರಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ತಿರುಗಿ ಬಿದ್ದ ನೆಟ್ಟಿಗರು. ಅಪ್ಪ-ಮಕ್ಕಳಿಗೆ ಯತ್ನಾಳ್ ಬೇಡ, ಸಿಟಿ ರವಿ ಬೇಡ, ಸೋಮಣ್ಣ ಬೇಡ, ಎನ್.ಆರ್. ರಮೇಶ್ ಬೇಡ, ಈಗ ಪ್ರತಾಪ್ ಸಿಂಹ ಬೇಡ, ಹಿಂದುತ್ವವೂ ಬೇಡ. ಎಲ್ಲವೂ ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕು ಅಂದರೆ. ಇನ್ನು ರಾಜ್ಯದಲ್ಲಿ ಹೇಗೆ ಬಿಜೆಪಿ ಬೆಳೆಯುತ್ತೆ ಸ್ವಾಮಿ ಎಂದು ವಿಜಯೇಂದ್ರ, ಯಡಿಯೂರಪ್ಪ ಭಾವಚಿತ್ರ ಹಾಕಿ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿರುವ ಪೋಸ್ಟ್

ಇದನ್ನೂ ಓದಿ: ಕ್ಷೇತ್ರದಾಚೆಯ ಜನ ಸಹ ನನಗೆ ಟಿಕೆಟ್ ಸಿಗಲಿ ಅಂತ ಪ್ರಾರ್ಥಿಸುತ್ತಿದ್ದಾರೆ, ನನ್ನಂಥ ಭಾಗ್ಯಶಾಲಿ ಬೇರ‍್ಯಾರೂ ಇಲ್ಲ: ಪ್ರತಾಪ್ ಸಿಂಹ

ಮೈಸೂರು ಹಾಲಿ ಸಂಸದ ಪ್ರತಾಪ್ ಸಿಂಹರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ಸದ್ಯದ ಹಾಟ್ ಟಾಪಿಕ್ ಆಗಿದೆ.‌ ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಇದೆ ಚರ್ಚೆ ನಡೆಯುತ್ತಿದೆ. 10 ವರ್ಷ ಉತ್ತಮ ಕೆಲಸ‌ ಮಾಡಿದರೂ ಪಕ್ಷ ಟಿಕೆಟ್ ನಿರಾಕರಿಸುತ್ತಿರುವುದಕ್ಕೆ ಕಾರಣ ಏನು ಎನ್ನುವುದು ಸದ್ಯದ ಚರ್ಚೆ. ಇದೀಗಾ ಒಕ್ಕಲಿಗರ ಸಂಘ ಕೂಡ ಸಿಡಿದೆದ್ದಿದೆ. ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ಕೊಟ್ಟು ಒಕ್ಕಲಿಗರ ತಾಳ್ಮೆ ಕೆಣಕುವಂತೆ ಮಾಡಬೇಡಿ ಅಂತ ಎಚ್ಚರಿಕೆ ಕೊಟ್ಟಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ