AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮುಡಾ ಬಹುಕೋಟಿ ಹಗರಣ ಪ್ರಕರಣ ಬೆನ್ನಲ್ಲೇ ನೂತನ ಆಯುಕ್ತರ ನೇಮಕ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿದ್ದ ಭ್ರಷ್ಟಾಚಾರದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಈ ಹಗರಣ ಪ್ರಕರಣದ ಬೆನ್ನಲ್ಲೇ ನೂತನ ಆಯುಕ್ತರಾಗಿ ಎ.ಎನ್.ರಘುನಂದನ್ ಹಾಗೂ ಕಾರ್ಯದರ್ಶಿಯಾಗಿ ಪ್ರಸನ್ನ ಕುಮಾರ್ ಎಂಬುವವರನ್ನ ನೇಮಿಸಿ ಸರ್ಕಾರ ಆದೇಶಿಸಿದೆ.

ಮೈಸೂರು: ಮುಡಾ ಬಹುಕೋಟಿ ಹಗರಣ ಪ್ರಕರಣ ಬೆನ್ನಲ್ಲೇ ನೂತನ ಆಯುಕ್ತರ ನೇಮಕ
ಮುಡಾ ಬಹುಕೋಟಿ ಹಗರಣ ಪ್ರಕರಣ ಬೆನ್ನಲ್ಲೇ ನೂತನ ಆಯುಕ್ತರ ನೇಮಕ
ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 02, 2024 | 9:27 PM

Share
ಮೈಸೂರು, ಜು.02: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಹುಕೋಟಿ ಹಗರಣ ಪ್ರಕರಣದ ಬೆನ್ನಲ್ಲೇ ನೂತನ ಆಯುಕ್ತರಾಗಿ ಎ.ಎನ್.ರಘುನಂದನ್ ಹಾಗೂ ಕಾರ್ಯದರ್ಶಿಯಾಗಿ ಪ್ರಸನ್ನ ಕುಮಾರ್ ಎಂಬುವವರನ್ನ ನೇಮಿಸಿ ಸರ್ಕಾರ ಆದೇಶಿಸಿದೆ. ನಾಲ್ವರು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದ್ದ ಹಿನ್ನಲೆ ಸಚಿವ ಭೈರತಿ ಸುರೇಶ್ ನಾಲ್ವರು ಅಧಿಕಾರಿಗಳನ್ನು ಮುಡಾದಿಂದ ವರ್ಗಾವಣೆ ಮಾಡಿ ತನಿಖೆ ಮಾಡುವುದಾಗಿ ಹೇಳಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿದ್ದ ಭ್ರಷ್ಟಾಚಾರದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯ ಎಂಬುವವರು ಈ ಬಗ್ಗೆ ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ: ಸಿಎಂ ಪತ್ನಿಯವರ ಜಮೀನು ಮುಡಾ ಸ್ವಾಧೀನ ಮಾಡಿಕೊಂಡಿದ್ದು ಬಿಜೆಪಿ ಅಧಿಕಾರದಲ್ಲಿದ್ದಾಗ: ಡಿಕೆ ಶಿವಕುಮಾರ

ಸೈಟುಗಳ ಹಂಚಿಕೆಯಲ್ಲಿ ಮೂಲ ಫಲಾನುಭವಿಗಳ ಹೆಸರಿನಲ್ಲಿ ಪ್ರಭಾವಿಗಳಿಗೆ ಕೊಟ್ಟು ವಂಚನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಇನ್ನು ಈ ವಿಷಯ ತಿಳಿಯುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ನಗರಾಭಿವೃದ್ಧಿ ಇಲಾಖೆ ಆಯುಕ್ತ ಸೇರಿದಂತೆ ಕೆಲ ಅಧಿಕಾರಿಗಳಿಗೆ ವರ್ಗಾವಣೆ ಮಾಡಿದ್ದರು. ಇನ್ನು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ದ ಆರೋಪ ಕೇಳಿಬಂದಿದ್ದು, ಇದನ್ನು ಸಿಬಿಐಗೆ ವಹಿಸಬೇಕು ಎಂದು ಆರ್ ಟಿ ಐ ಕಾರ್ಯಕರ್ತ ಗಂಗರಾಜು ಒತ್ತಾಯಿಸಿದ್ದಾರೆ. ಇದೆಲ್ಲದರ ಬೆನ್ನಲ್ಲೇ ಇದೀಗ ನೂತನ ಆಯುಕ್ತರ ನೇಮಕವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Tue, 2 July 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ