ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿದ್ದ ಭ್ರಷ್ಟಾಚಾರದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯ ಎಂಬುವವರು ಈ ಬಗ್ಗೆ ಗಂಭೀರ ಆರೋಪ ಮಾಡಿದ್ದರು.
ಇದನ್ನೂ ಓದಿ: ಸಿಎಂ ಪತ್ನಿಯವರ ಜಮೀನು ಮುಡಾ ಸ್ವಾಧೀನ ಮಾಡಿಕೊಂಡಿದ್ದು ಬಿಜೆಪಿ ಅಧಿಕಾರದಲ್ಲಿದ್ದಾಗ: ಡಿಕೆ ಶಿವಕುಮಾರ
ಸೈಟುಗಳ ಹಂಚಿಕೆಯಲ್ಲಿ ಮೂಲ ಫಲಾನುಭವಿಗಳ ಹೆಸರಿನಲ್ಲಿ ಪ್ರಭಾವಿಗಳಿಗೆ ಕೊಟ್ಟು ವಂಚನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಇನ್ನು ಈ ವಿಷಯ ತಿಳಿಯುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ನಗರಾಭಿವೃದ್ಧಿ ಇಲಾಖೆ ಆಯುಕ್ತ ಸೇರಿದಂತೆ ಕೆಲ ಅಧಿಕಾರಿಗಳಿಗೆ ವರ್ಗಾವಣೆ ಮಾಡಿದ್ದರು. ಇನ್ನು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ದ ಆರೋಪ ಕೇಳಿಬಂದಿದ್ದು, ಇದನ್ನು ಸಿಬಿಐಗೆ ವಹಿಸಬೇಕು ಎಂದು ಆರ್ ಟಿ ಐ ಕಾರ್ಯಕರ್ತ ಗಂಗರಾಜು ಒತ್ತಾಯಿಸಿದ್ದಾರೆ. ಇದೆಲ್ಲದರ ಬೆನ್ನಲ್ಲೇ ಇದೀಗ ನೂತನ ಆಯುಕ್ತರ ನೇಮಕವಾಗಿದೆ.
Published On - 9:23 pm, Tue, 2 July 24