New Year 2024: ಮೈಸೂರಿನಲ್ಲಿ ರಾತ್ರಿ 1 ಗಂಟೆವರೆಗೆ ಮಾತ್ರ ವರ್ಷಾಚರಣೆಗೆ ಅವಕಾಶ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 31, 2023 | 6:37 PM

ಹೊಸ ವರ್ಷಾಚರಣೆ(New Year celebration) ಹಿನ್ನಲೆ ಸಾಂಸ್ಕೃತಿಕ ನಗರಿ ಮೈಸೂರಿ(Mysore)ನಲ್ಲಿ ಗೈಡ್ ಲೈನ್ಸ್ ವಿಧಿಸಲಾಗಿದೆ. ರಾತ್ರಿ 1 ಗಂಟೆ ವರೆಗೆ ಮಾತ್ರ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ.

New Year 2024: ಮೈಸೂರಿನಲ್ಲಿ ರಾತ್ರಿ 1 ಗಂಟೆವರೆಗೆ ಮಾತ್ರ ವರ್ಷಾಚರಣೆಗೆ ಅವಕಾಶ
ಮೈಸೂರು ಹೊಸ ವರ್ಷಾಚರಣೆ
Follow us on

ಮೈಸೂರು, ಡಿ.31: ಹೊಸ ವರ್ಷಾಚರಣೆ(New Year celebration) ಹಿನ್ನಲೆ ಸಾಂಸ್ಕೃತಿಕ ನಗರಿ ಮೈಸೂರಿ(Mysore)ನಲ್ಲಿ ಗೈಡ್ ಲೈನ್ಸ್ ವಿಧಿಸಲಾಗಿದೆ. ರಾತ್ರಿ 1 ಗಂಟೆ ವರೆಗೆ ಮಾತ್ರ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂಸ್ಟೇ ಸರ್ವಿಸ್ ಅಪಾರ್ಟ್ಮೆಂಟ್, ಅಪಾರ್ಟ್ಮೆಂಟ್ ಅಸೋಸಿಯೇಷನ್, ಮಾಲ್ಸ್, ಸಂಘ ಸಂಸ್ಥೆಗಳು ರಾತ್ರಿ 1 ಗಂಟೆಗೆ ಕಾರ್ಯಕ್ರಮ ಮುಗಿಸುವುದು ಕಡ್ಡಾಯವಾಗಿದೆ.

ಅಸಭ್ಯ ವರ್ತನೆ ತಡೆಯಲು 36 ವಿಶೇಷ ಕಾರ್ಯಪಡೆ ತಂಡ ರಚನೆ

ನ್ಯೂ ಇಯರ್ ನೆಪದಲ್ಲಿ ಅಸಭ್ಯ ವರ್ತನೆ ತಡೆಯಲು 36 ವಿಶೇಷ ಕಾರ್ಯಪಡೆ ತಂಡವನ್ನು ಕೂಡ ರಚಿಸಲಾಗಿದೆ. ಮಹಿಳೆಯರ ರಕ್ಷಣೆಗಾಗಿ 8 ಸುರಕ್ಷತಾ ಪಿಂಕ್ ಗರುಡಾ (ಚಾಮುಂಡಿ ಪಡೆ) ರಚಿಸಿದ್ದು, ನಗರದ ಪ್ರಮುಖ ಸ್ಥಳದಲ್ಲಿ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ತಡೆಗಾಗಿ 4 ತಂಡವನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:New Year 2024: ಮೈಸೂರು ಅರಮನೆಯಲ್ಲಿ ಹೊಸವರ್ಷಾಚರಣೆಗೆ ಸಿದ್ಧತೆ ಹೇಗಿದೆ?

ಮೈಸೂರು ನಗರದಲ್ಲಿರುವ 59 ಸಿಸಿ ಕ್ಯಾಮೆರಾ ಜೊತೆಗೆ 275 ಸಿಸಿಟಿವಿ ಅಳವಡಿಕೆ

ಇನ್ನು ಮೈಸೂರು ನಗರದಲ್ಲಿರುವ 59 ಸಿಸಿ ಕ್ಯಾಮೆರಾ ಜೊತೆಗೆ 275 ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಪೊಲೀಸ್ ಕಂಟ್ರೋಲ್ ರೂಂ ಮೂಲಕ ಕಣ್ಗಾವಲು ಇಡಲಾಗಿದೆ. ವೀಲಿಂಗ್, ಸ್ಪೀಡ್, ಕರ್ಕಶ ಶಬ್ದ ಕುಡಿದು ವಾಹನ ಚಾಲನೆ ತಡೆಗಾಗಿ ಸಂಚಾರ ಪೊಲೀಸರ ತಜ್ಞರನ್ನೊಳಗೊಂಡ ಕ್ಷಿಪ್ರ ಪಡೆ ಜೊತೆಗೆ ರಿಂಗ್ ರೋಡ್‌ನಲ್ಲಿ 8 ಹೈವೇ ಪೆಟ್ರೋಲ್ ವಾಹನ ನಿಯೋಜಿಸಲಾಗಿದೆ. ಈ ಮೂಲಕ ಒಟ್ಟು 18 ಗರುಡ ವಾಹನಗಳು ಗಸ್ತು ತಿರುಗಾಡಲಿದೆ.

ನಗರದ ಹೊರವಲಯದಲ್ಲಿ 12 ಹಾಗೂ ನಗರದ ಒಳ ಭಾಗದಲ್ಲಿ 18 ಕಡೆ ಚಕ್ ಪೊಸ್ಟ್ ನಿರ್ಮಿಸಿ ಕಿಡಿಗೇಡಿಗಳ ಮೇಲೆ ನಿಗಾ ಇಡಲಾಗಿದೆ. ಹೊಸ ವರ್ಷ ಆಚರಣೆಯ ಕಾರ್ಯಕ್ರಮ ಆಯೋಜನೆಗಾಗಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅನುಮತಿಯನ್ನು ಕಡ್ಡಾಯ ಮಾಡಲಾಗಿದೆ. ಧ್ವನಿವರ್ಧಕ ಅಳವಡಿಸುವುದು ಆ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ ಅರಬೆತ್ತಲೆ ಮಾದಕ ವಸ್ತುಗಳ ಸೇವನೆ ಜೂಜಾಟ ನಿಷೇಧ ಹೇರಲಾಗಿದೆ.

ಬಂದೋಬಸ್ತ್‌ಗಾಗಿ ಪೊಲೀಸ್​ ನೀಯೋಜನೆ

ಡಿಸಿಪಿ 3, ಎಸಿಪಿ 12, ಪಿಐ 30, ಎಎಸ್ಪಿ 70, ಹೆಚ್‌ಸಿ/ಪಿಸಿ 550, ಸಿಬ್ಬಂದಿ 80, ಸಿಎಆರ್ 12 ತುಕಡಿ, ಕೆಎಸ್​ಆರ್​ಪಿ 4 ತಂಡ, ಕಮಾಂಡೋ ಪಡೆ 4, ಶ್ವಾನದಳ 4 ತಂಡ, ಎಎಸ್‌ಸಿವ4 ತಂಡ ಸಶಸ್ತ್ರ ಪಡೆಗಳು ಇರಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Sun, 31 December 23