ಮೈಸೂರು: ನಗರದಲ್ಲಿ ಅಪಾರ್ಟ್‌ಮೆಂಟ್‌ಗಳಲ್ಲಿ ಹೊಸ ವರ್ಷ ಆಚರಣೆಗೆ ಅವಕಾಶ ನೀಡಲಾಗಿದೆ. ನೃತ್ಯ ಅಥವಾ ಬೇರೆ ಮನರಂಜನೆಗೆ ಯಾವುದೇ ಅವಕಾಶ ಇರುವುದಿಲ್ಲ. ನಾಳೆ (ಡಿಸೆಂಬರ್ 27) ರಾತ್ರಿಯಿಂದ ಎಲ್ಲಾ ವಹಿವಾಟುಗಳು ಬಂದ್ ಆಗಲಿವೆ. ಮೈಸೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಇರಲಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ರೂಪಾಂತರ ಕೊರೊನಾ ಹರಡುವ ಭೀತಿ ಹಿನ್ನೆಲೆ ನಾಳೆಯಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಇರಲಿದೆ. ರಾಜ್ಯ ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೂ ನಿರ್ಬಂಧ ಇರಲಿದೆ. ಪ್ರಯಾಣಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, 10 ಗಂಟೆಗೆ ಎಲ್ಲಾ ವ್ಯಾಪಾರ ವಹಿವಾಟು ಬಂದ್ ಆಗಲಿದೆ. ಹೊಸ ವರ್ಷಕ್ಕೆ ಸರ್ಕಾರದಿಂದ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗಿದೆ. ಹೋಟೆಲ್‌ಗಳು ಪಬ್‌ಗಳು 10 ಗಂಟೆಗೆ ಬಂದ್ ಆಗಲಿದೆ ಎಂದು ಮೈಸೂರು ನಗರ ಆಯುಕ್ತ ಡಾ ಚಂದ್ರಗುಪ್ತ ಹೇಳಿದ್ದಾರೆ.
ಸಮೂಹ ನೃತ್ಯ ಪಾರ್ಟಿ ಆರ್ಕೇಸ್ಟ್ರಾಗಳಿಗೆ ಅನುಮತಿ ಇಲ್ಲ. ಯಾರಾದರೂ ಈ ಬಗ್ಗೆ ಪ್ಲ್ಯಾನ್ ಮಾಡಿದ್ದರೆ ಅದನ್ನು ರದ್ದು ಮಾಡಿ. ಅಪಾರ್ಟ್‌ಮೆಂಟ್‌ಗಳಲ್ಲಿ ಹೊಸ ವರ್ಷ ಆಚರಣೆಗೆ ಅವಕಾಶ ಇದೆ. ನಾಳೆ ರಾತ್ರಿಯಿಂದ ಎಲ್ಲಾ ವಹಿವಾಟುಗಳು ಬಂದ್ ಆಗಲಿವೆ. ಮೈಸೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಇರಲಿದೆ ಎಂದು ಅವರು ತಿಳಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಮೈಸೂರು ಪೊಲೀಸರಿಂದ ವಿನೂತನ ಪ್ರಯತ್ನ ಮಾಡಲಾಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಕ್ಕೆ ತರಲು ಮೈಸೂರು ಪೊಲೀಸರು ಮುಂದಾಗಿದ್ದಾರೆ. ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಕೊವಿಡ್ ನಿಯಂತ್ರಣ ಮಾಡಲು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಮುಂದೆ ಬರುವವರಿಗೆ ಗುರುತಿನ ಚೀಟಿ ನೀಡಲಾಗಿದೆ.
MyCop (Mysuru covid policing) Volunteer card, ಕೊವಿಡ್ ಮಾರ್ಗಸೂಚಿ ಅನುಷ್ಠಾನ ಪ್ರತಿನಿಧಿ, ಪೊಲೀಸ್ ಇಲಾಖೆಯಿಂದ ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಗಿದೆ. ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ 200 ಮಂದಿಯನ್ನು ನಿಯೋಜನೆ ಮಾಡಿಕೊಳ್ಳಲು ಚಿಂತನೆ ನಡೆಸಲಾಗಿದೆ. ಕೊವಿಡ್ ನಿಯಂತ್ರಣಕ್ಕೆ ಬರುವವರೆಗೂ ಈ ರೀತಿಯ ಪ್ರಯತ್ನ ಮುಂದುವರಿಯಲಿದೆ. ನಂತರದ ದಿನಗಳಲ್ಲಿ ಬೇರೆ ಉದ್ದೇಶಗಳಿಗೂ ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೊರೊನಾವೈರಸ್ ಹೃದಯ, ಮೆದುಳಿನಲ್ಲಿ ತಿಂಗಳುಗಳವರೆಗೆ ಇರುತ್ತದೆ: ಅಧ್ಯಯನ ವರದಿ
ಇದನ್ನೂ ಓದಿ: ಕೊವಿಡ್ನಿಂದ ಮೃತರಾದವರ ಕುಟುಂಬಗಳಿಗೆ ಒಂದೂವರೆ ಲಕ್ಷ ಪರಿಹಾರ: ಕಂದಾಯ ಸಚಿವ ಆರ್ ಅಶೋಕ್
Published On - 5:24 pm, Mon, 27 December 21