Mysuru Accident: KSRTC ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ನಿಲುವಾಗಿಲು ಗ್ರಾ.ಪಂ. ಸದಸ್ಯ ಸಾವು

ಮೈಸೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಿಲುವಾಗಿಲು ಗ್ರಾ.ಪಂ. ಸದಸ್ಯ ಭಾಸ್ಕರ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು ಕಾರಿನಲ್ಲಿದ್ದ ಭಾಸ್ಕರ್​​​​​​​ ಪತ್ನಿ, ತಾಯಿ, ಪುತ್ರನಿಗೆ ಗಾಯಗಳಾಗಿವೆ.

Mysuru Accident: KSRTC ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ನಿಲುವಾಗಿಲು ಗ್ರಾ.ಪಂ. ಸದಸ್ಯ ಸಾವು
ನಿಲುವಾಗಿಲು ಗ್ರಾ.ಪಂ. ಸದಸ್ಯ ಭಾಸ್ಕರ್
Follow us
ಆಯೇಷಾ ಬಾನು
|

Updated on: Jun 12, 2023 | 9:04 AM

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ KSRTC ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಗ್ರಾ.ಪಂ. ಸದಸ್ಯ(Grama Panchay Member) ಮೃತಪಟ್ಟಿದ್ದಾರೆ. ನಿಲುವಾಗಿಲು ಗ್ರಾ.ಪಂ. ಸದಸ್ಯ ಭಾಸ್ಕರ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು ಕಾರಿನಲ್ಲಿದ್ದ ಭಾಸ್ಕರ್​​​​​​​ ಪತ್ನಿ, ತಾಯಿ, ಪುತ್ರನಿಗೆ ಗಾಯಗಳಾಗಿವೆ. ಮೂವರು ಗಾಯಾಳುಗಳು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾ.ಪಂ. ಸದಸ್ಯ ತಮ್ಮ ಕುಟುಂಬದ ಜೊತೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಳಗಾವಿ ನಗರದಲ್ಲಿ ಹೃದಯವಿದ್ರಾವಕ ಘಟನೆ: ರಾತ್ರಿ ಮಲಗಿದ್ದ ವೇಳೆ ವಿಷಜಂತು ಕಚ್ಚಿ ಪತಿ ಸಾವು, ಪತ್ನಿ ಚಿಂತಾಜನಕ.. 3 ಪುಟ್ಟ ಮಕ್ಕಳು ಅನಾಥ

ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮಕ್ಕೆ ವಿದ್ಯುತ್ ಶಾಕ್

ತುಮಕೂರು: ಗುಬ್ಬಿ ತಾಲೂಕಿನ ಬಾಡೇನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್​ಸರ್ಕ್ಯೂಟ್​​ನಿಂದ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮದಲ್ಲಿ ಹಲವು ಮನೆಗಳಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ. ಹಲವರ ಮನೆಗಳಲ್ಲಿ ಟಿವಿ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿವೆ. ಗ್ರಾಮದ ಲೋಕೇಶ್​ ಎಂಬುವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ. ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್