ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಗ್ರಾ.ಪಂ. ಸದಸ್ಯ(Grama Panchay Member) ಮೃತಪಟ್ಟಿದ್ದಾರೆ. ನಿಲುವಾಗಿಲು ಗ್ರಾ.ಪಂ. ಸದಸ್ಯ ಭಾಸ್ಕರ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು ಕಾರಿನಲ್ಲಿದ್ದ ಭಾಸ್ಕರ್ ಪತ್ನಿ, ತಾಯಿ, ಪುತ್ರನಿಗೆ ಗಾಯಗಳಾಗಿವೆ. ಮೂವರು ಗಾಯಾಳುಗಳು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾ.ಪಂ. ಸದಸ್ಯ ತಮ್ಮ ಕುಟುಂಬದ ಜೊತೆ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು: ಗುಬ್ಬಿ ತಾಲೂಕಿನ ಬಾಡೇನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮದಲ್ಲಿ ಹಲವು ಮನೆಗಳಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ. ಹಲವರ ಮನೆಗಳಲ್ಲಿ ಟಿವಿ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿವೆ. ಗ್ರಾಮದ ಲೋಕೇಶ್ ಎಂಬುವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ. ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ