ಮೈಸೂರು ವಿವಿಯಲ್ಲಿ ಇದ್ದಾರೆ 92 ಅಫ್ಘಾನಿಸ್ತಾನ ವಿದ್ಯಾರ್ಥಿಗಳು, ಅವರೆಲ್ಲ ನಿರ್ಭೀತಿಯಿಂದ ಇದ್ದಾರೆ: ಮೈಸೂರು ವಿವಿ ಕುಲಪತಿ

ಮೈಸೂರು ವಿವಿಯಲ್ಲಿ 92 ಅಫ್ಘಾನ್ ವಿದ್ಯಾರ್ಥಿಗಳು ಇದ್ದಾರೆ. ಅವರೆಲ್ಲರೂ ನಿರ್ಭೀತಿಯಿಂದ ಇದ್ದಾರೆ. ಯಾರಿಗೂ ಯಾವುದೇ ರೀತಿಯ ಆತಂಕ ಇಲ್ಲ. ಸದ್ಯಕ್ಕೆ ವಿದ್ಯಾರ್ಥಿಗಳಿಂದ ಯಾವುದೇ ಬೇಡಿಕೆ ಬಂದಿಲ್ಲ - ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್‌ಕುಮಾರ್

ಮೈಸೂರು ವಿವಿಯಲ್ಲಿ ಇದ್ದಾರೆ 92 ಅಫ್ಘಾನಿಸ್ತಾನ ವಿದ್ಯಾರ್ಥಿಗಳು, ಅವರೆಲ್ಲ ನಿರ್ಭೀತಿಯಿಂದ ಇದ್ದಾರೆ: ಮೈಸೂರು ವಿವಿ ಕುಲಪತಿ
ಮೈಸೂರು ವಿವಿಯಲ್ಲಿ 92 ಅಫ್ಘಾನಿಸ್ತಾನ ವಿದ್ಯಾರ್ಥಿಗಳು, ಅವರೆಲ್ಲ ನಿರ್ಭೀತಿಯಿಂದ ಇದ್ದಾರೆ: ಮೈಸೂರು ವಿವಿ ಕುಲಪತಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 17, 2021 | 11:08 AM

ಮೈಸೂರು: ಅತ್ತ ಅಫ್ಘಾನಿಸ್ತಾನದಲ್ಲಿ ನಾಗರಿಕರ ಬದುಕು ಮೂರಾಬಟ್ಟೆಯಾಗಿದೆ. ಆದರೆ ಅಲ್ಲಿನ ಅನೇಕ ವಿದ್ಯಾರ್ಥಿಗಳು ನಾನಾ ದೇಶಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರ ಅನೇಕ ಮಂದಿ ಕರ್ನಾಕದಲ್ಲಿಯೂ ಇದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಯೂ 92 ಅಫ್ಘಾನಿಸ್ತಾನ ವಿದ್ಯಾರ್ಥಿಗಳು ನೆಲೆಸಿದ್ದಾರೆ. ಅವರೆಲ್ಲಾ ಮೈಸೂರು ವಿಶ್ವ ವಿದ್ಯಾಲಯದಲ್ಲಿ ನಿರಾತಂಕವಾಗಿ ವ್ಯಾಸಂಗ ನಿರತರಾಗಿದ್ದಾರೆ.

ಈ ಬಗ್ಗೆ ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್‌ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರು ವಿವಿಯಲ್ಲಿ 92 ಅಫ್ಘಾನ್ ವಿದ್ಯಾರ್ಥಿಗಳು ಇದ್ದಾರೆ. ಅವರೆಲ್ಲರೂ ನಿರ್ಭೀತಿಯಿಂದ ಇದ್ದಾರೆ. ಯಾರಿಗೂ ಯಾವುದೇ ರೀತಿಯ ಆತಂಕ ಇಲ್ಲ. ಸದ್ಯಕ್ಕೆ ವಿದ್ಯಾರ್ಥಿಗಳಿಂದ ಯಾವುದೇ ಬೇಡಿಕೆ ಬಂದಿಲ್ಲ. ಎಲ್ಲರೂ ನಿರ್ಭೀತಿಯಿಂದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸದ್ಯಕ್ಕೆ ಯಾವ ವಿದ್ಯಾರ್ಥಿಯೂ ತಾಯ್ನಾಡಿಗೆ ಹೋಗುತ್ತಿಲ್ಲ. ಸೆಪ್ಟೆಂಬರ್ 20ರಿಂದ ಅವರಿಗೆ ವಿವಿಧ ಕೋರ್ಸ್ ಗಳಿಗೆ ಪರೀಕ್ಷೆ ಇದೆ. ಅಕ್ಟೋಬರ್ ಮೊದಲ ವಾರದವರೆಗೂ ಪರೀಕ್ಷೆ ನಡೆಯುತ್ತದೆ ಎಂದು ಅವರು ವಿವರಿಸಿದ್ದಾರೆ.

ಅಫ್ಘಾನ್ ವಿದ್ಯಾರ್ಥಿಗಳಿಗೆ ಏನೇ ಸಮಸ್ಯೆ ಆದರೂ ಇಂಟರ್ ನ್ಯಾಷನಲ್ ಡೈರೆಕ್ಟರ್ ಬಗೆಹರಿಸುತ್ತಾರೆ. ಅವರಿಂದ ಸಮಸ್ಯೆ ಬಗೆಹರಿಯದ ಸಮಯದಲ್ಲಿ ನಾವು ಮುಂದೆ ಬರುತ್ತವೆ. ಅಫ್ಘಾನಿಸ್ತಾನ ವಿದ್ಯಾರ್ಥಿಗಳ ಬೇಡಿಕೆಗೆ ವಿವಿ ಸ್ಪಂದಿಸುತ್ತದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹಿನ್ನೆಲೆ ಆಫ್ಘನ್ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ನಾವಿದ್ದೇವೆ. ವೀಸಾ ಅವಧಿ ವಿಸ್ತರಣೆ ಮಾಡಿದರೆ ಸಹಾಯ ಮಾಡ್ತೇವೆ. ವಿದ್ಯಾರ್ಥಿಗಳು ಮೈಸೂರಿನಲ್ಲಿಯೇ ಇರಲು ವ್ಯವಸ್ಥೆ ಮಾಡುತ್ತೇವೆ ಎಂದು ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್‌ಕುಮಾರ್ ಭರವಸೆಯ ಮಾತುಗಳನ್ನಾಡಿದ್ದಾರೆ.

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

(ninety two afghanistan students are in mysore university they are calm mysore university chancellor)

Published On - 11:08 am, Tue, 17 August 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?