ರಾಜ್ಯದಲ್ಲಿ ನಿಫಾ ಭೀತಿ: ಕೇರಳ ಗಡಿಗೆ ತಹಶೀಲ್ದಾರ್, ಆರೋಗ್ಯಧಿಕಾರಿ ಭೇಟಿ

| Updated By: ಆಯೇಷಾ ಬಾನು

Updated on: Sep 15, 2023 | 8:59 AM

ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಯಾರು ನಿಫಾ ಬಗ್ಗೆ ಗಾಬರಿಯಾಗಬೇಡಿ ಎಚ್ಚರಿಕೆ ವಹಿಸಿ ಎಂದು ಆರೋಗ್ಯಧಿಕಾರಿ ಸೂಚನೆ ನೀಡಿದ್ದಾರೆ. ಕೇರಳ ರಾಜ್ಯದಲ್ಲಿ ದಿನೇ ದಿನೇ ನಿಫಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ.

ಮೈಸೂರು, ಸೆ.15: ಆಫ್ರಿಕನ್ ಫೀವರ್, ಹಕ್ಕಿ ಜ್ವರದ ಭೀತಿ, ಕೊರೊನಾ ಸಂದರ್ಭದಲ್ಲಿ ದೊಡ್ಡ ಆತಂಕ ಸೃಷ್ಟಿ ಮಾಡಿದ್ದ ಕೇರಳದಿಂದ ಇದೀಗ ರಾಜ್ಯಕ್ಕೆ ಮತ್ತೊಂದು ಆತಂಕ ಎದುರಾಗಿದೆ. ಕೇರಳದಲ್ಲಿ ನಿಫಾ ವೈರಸ್(Nipah Virus) ಹೆಚ್ಚಾಗಿರುವುದರಿಂದ ರಾಜ್ಯ ಗಡಿ ಭಾಗಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ ಕೇರಳ ಗಡಿ ಬಾವಲಿಗೆ ಹೆಚ್.ಡಿ.ಕೋಟೆ ತಹಶೀಲ್ದಾರ್ ಸಣ್ಣ ರಾಮಪ್ಪ ಹಾಘೂ ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಿ, ಹಾಗೂ ಜನರಿಗೆ ಜಾಗೃತಿ ಮೂಡಿಸಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ‌ ನೀಡಿದರು. ಸದ್ಯ ಗಡಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವಾಹನ ಸವಾರರಿಗೆ ಥರ್ಮಲ್ ಸ್ಕ್ಯಾನ್ ಮಾಡುತ್ತಿದ್ದಾರೆ.

ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಯಾರು ನಿಫಾ ಬಗ್ಗೆ ಗಾಬರಿಯಾಗಬೇಡಿ ಎಚ್ಚರಿಕೆ ವಹಿಸಿ ಎಂದು ಆರೋಗ್ಯಧಿಕಾರಿ ಸೂಚನೆ ನೀಡಿದ್ದಾರೆ. ಕೇರಳ ರಾಜ್ಯದಲ್ಲಿ ದಿನೇ ದಿನೇ ನಿಫಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ನಿಫಾ ವೈರಸ್ ಇಬ್ಬರು ಬಲಿಯಾಗಿದ್ದಾರೆ. ಹೀಗಾಗಿ ಕೇರಳ ಹಾಗೂ ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳ ಕರ್ನಾಟಕ ಗಡಿಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ಈಗಾಗಲೇ ಆರೋಗ್ಯ ಇಲಾಖೆ ಕೇರಳದಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಎಲ್ಲಾ ವಾಹನಗಳನ್ನ ತಪಾಸಣೆ ಮಾಡುತ್ತಿರುವ ಆರೋಗ್ಯ ಇಲಾಖೆ ಪ್ರತಿಯೊಬ್ಬರ ಮಾಹಿತಿಯನ್ನ ಸಂಗ್ರಹಣೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬರನ್ನ ಥರ್ಮಲ್ ಸ್ಕ್ಯಾನ್ ಮಾಡುವ ಮೂಲಕ ಪರೀಕ್ಷೆ ಸಹ ನಡೆಸುತ್ತಿದ್ದಾರೆ. ನಿಫಾ ವೈರಸ್ ನ ರೋಗ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಅವರನ್ನ ಐಸೋಲೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ನಿಫಾ ವೈರಸ್ ಬಗ್ಗೆ ಕಾಡಾಂಚಿನ ಗ್ರಾಮದ ಜನರಲ್ಲಿ ಅರಿವು ಮೂಡಿಸುತ್ತಿರುವ ಆರೋಗ್ಯ ಇಲಾಖೆ ಕೇರಳದಿಂದ ಬಂದು ಕಾಡಾಂಚಿನ ಗ್ರಾಮಗಳಲ್ಲಿ ಯಾರಾದರೂ ವಾಸ್ತವ್ಯ ಹೂಡಿದ್ರೆ ಅವರ ಮಾಹಿತಿ ನೀಡುವಂತೆ ಜನರಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿಕೆ, ರೋಗಿಗಳ ಸಂಪರ್ಕಕ್ಕೆ ಬಂದಿರುವ 700 ಮಂದಿ ಪೈಕಿ 77 ಜನರಿಗೆ ಅಪಾಯ ಹೆಚ್ಚು

ಇನ್ನೂ ನಿಫಾ ವೈರಸ್ ಬಗ್ಗೆ ಡಿ.ಬಿ ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಂಜಾಗೃತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರಿಂದ ಕೇರಳದಿಂದ ಬರುವವರ ಪ್ರತಿಯೊಬ್ಬರ ಟ್ರಾವೆಲ್ ಹಿಸ್ಟರಿಯನ್ನ ಸಂಗ್ರಹಣೆ ಮಾಡಲಾಗುತ್ತಿದೆ. ಕಾಡಾಂಚಿನ ಗ್ರಾಮಗಳಲ್ಲಿ ಜ್ವರದ ಸಮೀಕ್ಷೆ ಸಹ ನಡೆಸಲಾಗುತ್ತದೆ. ಜನರು ಆತಂಕ ಪಡಬೇಡಿ. ಬಾವಲಿಯಿಂದ ನೀಫಾ ವೈರಸ್ ಬರುತ್ತಿದೆ. ಜನರು ಎಚ್ಚರದಿಂದ ಇರಬೇಕೆಂದು ಎಂದು ಆರೋಗ್ಯಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.

ಮೈಸೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:56 am, Fri, 15 September 23