AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮದ ಬಗ್ಗೆ ತಿಳಿಯದವರಿಂದ ಇಂಥ ಮಾತು: ಉದಯನಿಧಿ ಸ್ಟಾಲಿನ್ ಹೇಳಿಕೆಗೆ ನಿರ್ಮಲಾನಂದನಾಥ ಸ್ವಾಮೀಜಿ ಆಕ್ಷೇಪ

ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ಇಡೀ ದೇಶಾದ್ಯಂತ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಸದ್ಯ ಈ ಕುರಿತಾಗಿ ಮೈಸೂರಿನಲ್ಲಿ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಪರೋಕ್ಷವಾಗಿ ತರಾಟೆ ತೆಗೆದುಕೊಂಡಿದ್ದು, ಧರ್ಮದ ಬಗ್ಗೆ ತಿಳಿದುಕೊಳ್ಳದವನು ತಮ್ಮ ಧರ್ಮದ ಬಗ್ಗೆಯೂ, ಇತರೆ ಧರ್ಮಗಳ ಬಗ್ಗೆಯೂ ಮಾತನಾಡುತ್ತಾನೆ ಎಂದಿದ್ದಾರೆ.

ಧರ್ಮದ ಬಗ್ಗೆ ತಿಳಿಯದವರಿಂದ ಇಂಥ ಮಾತು: ಉದಯನಿಧಿ ಸ್ಟಾಲಿನ್ ಹೇಳಿಕೆಗೆ ನಿರ್ಮಲಾನಂದನಾಥ ಸ್ವಾಮೀಜಿ ಆಕ್ಷೇಪ
ನಿರ್ಮಲಾನಂದನಾಥ ಸ್ವಾಮೀಜಿ, ಉದಯನಿಧಿ ಸ್ಟಾಲಿನ್
ರಾಮ್​, ಮೈಸೂರು
| Edited By: |

Updated on: Sep 07, 2023 | 4:42 PM

Share

ಮೈಸೂರು, ಸೆಪ್ಟೆಂಬರ್​​ 7: ಧರ್ಮದ ಬಗ್ಗೆ ತಿಳಿದುಕೊಂಡವರು ಮಾತನಾಡುವುದಿಲ್ಲ. ಧರ್ಮದ ಬಗ್ಗೆ ತಿಳಿದುಕೊಳ್ಳದವನು ತಮ್ಮ ಧರ್ಮದ ಬಗ್ಗೆಯೂ ಮಾತನಾಡುತ್ತಾನೆ. ಇತರೆ ಧರ್ಮಗಳ ಬಗ್ಗೆಯೂ ಮಾತನಾಡುತ್ತಾನೆ ಎಂದು ಸಚಿವ ಉದಯನಿಧಿ ಸ್ಟಾಲಿನ್​ ಅವರನ್ನು ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಪರೋಕ್ಷವಾಗಿ ತರಾಟೆ ತೆಗೆದುಕೊಂಡಿದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಾಳುವ ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಹಿಂದೂ ಧರ್ಮದ ಪರ ಸ್ವಾಮೀಜಿಗಳ ಹೋರಾಟದ ಕುರಿತು ನಿರ್ಮಲಾನಂದನಾಥ ಸ್ವಾಮೀಜಿ ಸುಳಿವು ನೀಡಿದ್ದು, ಇದೇ ವಿಚಾರಕ್ಕೆ ಪ್ರತ್ಯೇಕವಾಗಿ ಸಭೆ ಕರೆಯುವ ಅನಿವಾರ್ಹತೆ ಬರಬಹುದು. ಬಂದಾಗ ಅದನ್ನು ಮುಖ್ಯವಾಗಿ ಇಟ್ಟುಕೊಂಡು ಚರ್ಚಿಸೋಣ. ಮುಂತಾದಾಳತ್ವದ ಬಗ್ಗೆ ಕೇಳಿದ ಪ್ರಶ್ನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಮೌನವಹಿಸಿದರು.

ಇದನ್ನೂ ಓದಿ: ತಮ್ಮ ವಿರುದ್ಧ ಉತ್ತರ ಪ್ರದೇಶದಲ್ಲಿ FIR ದಾಖಲಾಗಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಪ್ರತಿಕ್ರಿಯೆ

ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ! ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಜಾಗೃತವಾಗಿ ಮಾತನಾಡಬೇಕು. ಬಳಸುವ ಪದಗಳ ಬಗ್ಗೆ ನಿಗಾ ಇರಬೇಕು ಎಂದು ಹೇಳಿದರು.

‘ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ ಸನಾತನ’. ಧರ್ಮ ಅಂದರೆ ಸಿದ್ಧ ಸಾಧನೆಯ ಮಾರ್ಗ. ಸನಾತನ ಪದಕ್ಕೆ ಪುರಾತನ ಅರ್ಥವಿದೆ, ಎಲ್ಲರಿಗೂ ಇತಿಹಾಸ ಗೊತ್ತಿದೆ. ಕ್ರೈಸ್ತ ಧರ್ಮ ಶುರುವಾಗಿದ್ದು 2 ಸಾವಿರ ವರ್ಷಗಳ ಹಿಂದೆ. ಮುಸ್ಲಿಂ ಧರ್ಮಕ್ಕೆ 1,600 ವರ್ಷಗಳ ಇತಿಹಾಸವಿದೆ ಎಂದರು.

ಇದನ್ನೂ ಓದಿ: ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡಿಸುವ ಶಕ್ತಿ ನಿಮಗಿಲ್ಲ: ಕಾಂಗ್ರೆಸ್​​ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​​​ ಜೋಶಿ ವಾಗ್ದಾಳಿ

2500 ವರ್ಷಗಳ ಹಿಂದೆ ಬೌದ್ಧ, ಜೈನ ಧರ್ಮ ಸ್ಥಾಪನೆಯಾಗಿದೆ. ಸಿಖ್, ಯಹೂದಿ ಸೇರಿದಂತೆ ಇತರೆ ಧರ್ಮಗಳು ನಂತರದಲ್ಲಿ ಬಂದವು. ಇದೆಲ್ಲಕ್ಕಿಂತ ಹಿಂದೂ ಧರ್ಮ ಪುರಾತನವಾದುದು. ಪ್ರಪಂಚದ ಪ್ರತಿ ವ್ಯಕ್ತಿಯೂ ಭಿನ್ನ, ಆದರೆ ಎಲ್ಲರಿಗೂ ಆಮ್ಲಜನಕ ಬೇಕು. ಆಮ್ಲಜನಕ ಇಲ್ಲದೆ ಇರುತ್ತೇನೆ ಎಂದರೆ ಏನಾಗುತ್ತೆ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಈ ವಿಚಾರದಲ್ಲಿ ಚರ್ಚೆ ಅನಗತ್ಯ ಎಂದ ನಿರ್ಮಲಾನಂದನಾಥಶ್ರೀ

ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಸಾಧ್ಯತೆ ವಿಚಾರವಾಗಿ ಮಾತನಾಡಿದ ಅವರು, ಇಂಗ್ಲಿಷ್​ನಲ್ಲಿ ಇಂಡಿಯಾ ಹಿಂದಿಯಲ್ಲಿ ಭಾರತ ಅಂತಾ ಬಳಸುತ್ತಿದ್ದೇವೆ. ಈ ಚರ್ಚೆ ಯಾವಾಗ, ಹೇಗೆ ಶುರುವಾಯಿತು ಎಂದು ನನಗೆ ಗೊತ್ತಿಲ್ಲ. ಹಿಂದಿ ಹಾಗೂ ಕನ್ನಡದಲ್ಲಿ ಭಾರತ ಸರ್ಕಾರ ಎಂದೇ ಬರೆಯುತ್ತೇವೆ. ಕೆಲವೊಂದು ಬಾರಿ ಇಂಡಿಯನ್​ ಗವರ್ನಮೆಂಟ್ ಎಂದು ಬಳಸುತ್ತೇವೆ. ಕೇಂದ್ರ ಸರ್ಕಾರವೇ ಮರುನಾಮಕರಣ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಚಾರದಲ್ಲಿ ಚರ್ಚೆ ಅನಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ