ವಿಧಾನ ಪರಿಷತ್: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ ಎಂದ ಕೆಎಸ್​ ಈಶ್ವರಪ್ಪ

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮಾತ್ರ ಮೈತ್ರಿ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ JDSಗೆ ಬೆಂಬಲ‌ ನೀಡುವ ಪ್ರಶ್ನೆಯೇ ಇಲ್ಲ. ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕರೆ ನೀಡಿದ್ದಾರೆ.

ವಿಧಾನ ಪರಿಷತ್: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ ಎಂದ ಕೆಎಸ್​ ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ
Follow us
| Updated By: Rakesh Nayak Manchi

Updated on: Nov 04, 2023 | 1:08 PM

ಮೈಸೂರು, ನ.4: ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ, ಜೆಡಿಎಸ್ ಮೈತ್ರಿಗೆ ವಿಘ್ನ ಎದುರಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ (BJP-JDS Alliance) ನಡುವೆ ಮೈತ್ರಿಯಿಲ್ಲ ಎಂದು ಹೇಳಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa), ಪಕ್ಷದ ಗೆಲುವಿಗೆ ಶ್ರಮಿಸುವಂತೆ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು.

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ಅವರು ಆಕಾಂಕ್ಷಿಗಳ ಜೊತೆ ಸಭೆ ನಡೆಸಿದರು. ಚುನಾವಣೆ ಸಂಬಂಧ ಆಕಾಂಕ್ಷಿಗಳಿಂದ ಮಾಹಿತಿ ಸಂಗ್ರಹಿಸಿದರು. ಸಭೆಯಲ್ಲಿ ಸಂಸದ ಪ್ರತಾಪಸಿಂಹ, ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಇದ್ದರು.

ಬಳಿಕ ಮಾತನಾಡಿದ ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ಮಾತ್ರ ಮೈತ್ರಿ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಿಜೆಪಿ ಬೆಂಬಲ ನೀಡುವುದಿಲ್ಲ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಒಮ್ಮೆಯೂ ಗೆದ್ದಿಲ್ಲ. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ 12 ಟಿಕೆಟ್ ಆಕಾಂಕ್ಷಿಗಳಿದ್ದಾರೆ ಎಂದರು.

ಇದನ್ನೂ ಓದಿ: ಬಿಜೆಪಿ ಲೀಡರ್​​ ಲೆಸ್, ಜೆಡಿಎಸ್​​ ಪೀಪಲ್​ ಲೆಸ್: ಸಚಿವ ಪ್ರಿಯಾಂಕ್ ಖರ್ಗೆಗೆ ಕೆಎಸ್​ ಈಶ್ವರಪ್ಪ ತಿರುಗೇಟು

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ JDSಗೆ ಬೆಂಬಲ‌ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ ಈಶ್ವರಪ್ಪ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ಯಾರೇ ಅಭ್ಯರ್ಥಿಯಾದರೂ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.

ಕಾಂಗ್ರೆಸ್ ಹೈಕಮಾಂಡ್​ಗೆ ಈಶ್ವರಪ್ಪ ಸವಾಲು

ಕಾಂಗ್ರೆಸ್ ಹೈಕಮಾಂಡ್​ಗೆ ತಾಕತ್ ಇದ್ದರೆ ಪಕ್ಷದ ಶಿಸ್ತು ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಈಶ್ವರಪ್ಪ ಸವಾಲು ಹಾಕಿದರು. ಸಿಎಂ ಹುದ್ದೆ ವಿಚಾರದಲ್ಲಿ ಯಾರು ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಎಚ್ಚರಿಕೆ ನೀಡಿತ್ತು. ರಣದೀಪ್ ಸಿಂಗ್ ಸುರ್ಜೇವಾಲಾ, ಕೆ ಸಿ ವೇಣುಗೋಪಾಲ್ ಸಭೆ ನಡೆಸಿ ಎಚ್ಚರಿಕೆ ನೀಡಿದ್ದರು. ಅವರು ವಾಪಸ್ಸು ಹೋಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ರಾಜಣ್ಣ ಬಹಿರಂಗ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್​ಗೆ ತಾಕತ್ ಇದ್ದರೇ ಇವರೆಲ್ಲರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ