Chamundeshwari darshan: ಈ ಸಲ ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ, ಉಚಿತ ಬಸ್ ಸೇವೆ

Ashada Masa 2022: ಚಾಮುಂಡೇಶ್ವರಿ ವರ್ಧಂತಿಯ ದಿನ ಮಾತ್ರ ಬೆಳಿಗ್ಗೆ 7 ಗಂಟೆಯಿಂದ ಸಾರಿಗೆ ಬಸ್ ಗಳ ಸಂಚಾರ ಆರಂಭವಾಗಲಿದೆ. ಇನ್ನುಳಿದ ಆಷಾಡ ಶುಕ್ರವಾರಗಳಂದು ಬೆಳಗಿನ ಜಾವ 3 ಗಂಟೆಯಿಂದ ಸಾರಿಗೆ ಬಸ್ ಗಳು ಸಂಚರಿಸಲಿವೆ. ಆಷಾಡ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗುತ್ತದೆ

Chamundeshwari darshan: ಈ ಸಲ ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ, ಉಚಿತ ಬಸ್ ಸೇವೆ
ಎಸ್.ಟಿ. ಸೋಮಶೇಖರ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 27, 2022 | 7:14 PM

ಮೈಸೂರು: ಕೊರೊನಾ ಮಹಾಮಾರಿ ಭೀತಿ ಕಳೆದಿದ್ದು, ಈ ಸಲ ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ಮಾಹಿತಿ ನೀಡಿದ್ದು, ಕಳೆದೆರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಆಷಾಡ ಮಾಸದಲ್ಲಿ ದೇವಿಯ ದರ್ಶನಕ್ಕೆ ಅವಕಾಶ ಸಿಕ್ಕಿರಲಿಲ್ಲ‌. ಈ ಬಾರಿಯ ಆಷಾಡ ಮಾಸದಲ್ಲಿ ಚಾಮುಂಡೇಶ್ವರಿಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎರಡು ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡಿರುವವರಿಗೆ ಪ್ರವೇಶ ನೀಡಲಾಗುವುದು. ಈ ಬಗ್ಗೆ ಆಯ್ದ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತದೆ. ಈ ಬಾರಿಯೂ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತ ಮಹಲ್ ಹೆಲಿಪ್ಯಾಡ್ ಬಳಿಯಿಂದ ಸಾರಿಗೆ ಬಸ್ ಗಳು ಹೊರಡಲಿವೆ. ಲಲಿತ ಮಹಲ್ ಹೆಲಿಪ್ಯಾಡ್ ಬಳಿಯಿಂದ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.

ಈ ಬಾರಿಯೂ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶಿಷ್ಟಾಚಾರದ ಪ್ರಕಾರ ಖಾಸಗಿ ವಾಹನಗಳ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತದೆ. ಎಲ್ಲೆಡೆ ಹೆಚ್ಚುವರಿಯಾಗಿ ಸಿ ಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸರತಿ ಸಾಲಿನಲ್ಲಿ ಬರುವ ಭಕ್ತಾಧಿಗಳು ಎಲ್ಇಡಿ ಪರದೆಯಲ್ಲಿ ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ. ಚಾಮುಂಡೇಶ್ವರಿ ವರ್ಧಂತಿಯ ದಿನ ಮಾತ್ರ ಬೆಳಿಗ್ಗೆ 7 ಗಂಟೆಯಿಂದ ಸಾರಿಗೆ ಬಸ್ ಗಳ ಸಂಚಾರ ಆರಂಭವಾಗಲಿದೆ. ಇನ್ನುಳಿದ ಆಷಾಡ ಶುಕ್ರವಾರಗಳಂದು ಬೆಳಗಿನ ಜಾವ 3 ಗಂಟೆಯಿಂದ ಸಾರಿಗೆ ಬಸ್ ಗಳು ಸಂಚರಿಸಲಿವೆ. ಆಷಾಡ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

Also Read:

ಕೆಂಪೇಗೌಡ ಜಯಂತಿ ಗಿಫ್ಟ್​! ಇನ್ಮುಂದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಶೇ. 25ರಷ್ಟು ರಿಯಾಯಿತಿ!

ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಬೆನ್ನಲ್ಲೇ ಟ್ರಾಫಿಕ್ ಪೊಲೀಸರ ಮೇಲೆ ಆರೋಪಗಳ ಸುರಿ ಮಳೆ, ತಿಂಗಳಲ್ಲಿ ಎರಡು ಮೂರು ಬಾರಿ ಮಾಮೂಲು ನೀಡಬೇಕೆಂದ ವ್ಯಾಪಾರಸ್ಥರು

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ