AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಆ ಕಡೆ ಈ ಕಡೆ ಇದೆ: ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದು ಎಷ್ಟು ಸ್ಥಾನ? ಬೈರಪ್ಪ ಹೇಳಿದ್ದಿಷ್ಟು

ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಹೊಂದಿದೆ. ಇದಕ್ಕಾಗ ಭರ್ಜರಿ ಕಸರತ್ತು ನಡೆಸಿದೆ. ಇದರ ಮಧ್ಯೆ ಹಿರಿಯ ಸಾಹಿತಿ ಎಸ್​ಎಲ್ ಬೈರಪ್ಪ ಮಾತನಾಡಿ, ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳಲ್ಲಿ ಗೆಲ್ಲುವುದಿಲ್ಲ. ಬದಲಿಗೆ ಅರ್ಧಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಪ್ರತಾಪ್ ಸಿಂಹ-ಯದುವೀರ್ ಬಗ್ಗೆ ಮಾತನಾಡಿದ್ದಾರೆ. ಇನ್ನು ಗುಜರಾತಿಗಳನ್ನು ಕೊಂಡಾಡಿದ್ದಾರೆ. ಈ ಎಲ್ಲಾ ವಿವರ ಈ ಕೆಳಗಿನಂತಿದೆ.

ಕರ್ನಾಟಕದಲ್ಲಿ ಆ ಕಡೆ ಈ ಕಡೆ ಇದೆ: ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದು ಎಷ್ಟು ಸ್ಥಾನ? ಬೈರಪ್ಪ ಹೇಳಿದ್ದಿಷ್ಟು
ಸಾಹಿತಿ ಎಸ್​.ಎಲ್.ಭೈರಪ್ಪ
ದಿಲೀಪ್​, ಚೌಡಹಳ್ಳಿ
| Edited By: |

Updated on: Mar 29, 2024 | 3:06 PM

Share

ಮೈಸೂರು, (ಮಾರ್ಚ್ 29): ಉತ್ತರ ಪ್ರದೇಶದಲ್ಲಿ ಬಿಜೆಪಿ(ಭಝಫ) ವಾತಾವರಣ ತುಂಬಾ ಚೆನ್ನಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ರೀತಿ ಇರಬೇಕು. ನಮ್ಮಲ್ಲಿ ಆ ರೀತಿ ಸಿಎಂ ಯಾರೂ ಬಂದಿಲ್ಲ. ಸಿಎಂ ಯೋಗಿ ಆಡಳಿತವನ್ನು ಬಿಗಿಯಾಗಿ ಇಟ್ಟುಕೊಂಡಿದ್ದಾರೆ. ಉತ್ತರ ಭಾರತ ಭಾಗದಲ್ಲಿ ಬಿಜೆಪಿಗೆ ಗ್ಯಾರಂಟಿ ಹೇಳಬಹುದು, ಆದ್ರೆ, ಇಲ್ಲಿ (ಕರ್ನಾಟಕ) ಸ್ವಲ್ಪ ಆ ಕಡೆ ಈ ಕಡೆ ಅನ್ನಿಸುತ್ತಿದೆ. ಕಾಂಗ್ರೆಸ್ ನವರು ಗ್ಯಾರೆಂಟಿ ಸ್ಕೀಂ ಇಟ್ಟುಕೊಂಡು ಅಬ್ಬರಿಸುತ್ತಿದ್ದಾರೆ. ಪರಿಸ್ಥಿತಿ ಈಗಿದ್ದರೂ ಸಹ ಬಿಜೆಪಿ ಕಳೆಪೆ ಪ್ರದರ್ಶನ ಮಾಡುವುದಿಲ್ಲ. ಅರ್ಧಕ್ಕಿಂತ ಹೆಚ್ಚಿನ ಸ್ಥಾನಗಳನ್ನ ಇಲ್ಲಿ(ಕರ್ನಾಟಕ) ಬಿಜೆಪಿ ಪಡೆಯುತ್ತದೆ ಎಂದು ಹಿರಿಯ ಸಾಹಿತಿ ಎಸ್​ಎಲ್​ ಬೈರಪ್ಪ(novelist SL Bhyrappa )ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಇಂದು (ಮಾರ್ಚ್ 29) ಸುದ್ದಿಗಾರರೊಂದಿಗೆ ಮಾತನಾಡಿದ ಬೈರಪ್ಪ, ಹಿಂದೆ ಇದ್ದ ಬಿಜೆಪಿ ಸರ್ಕಾರ ಅಧಿಕಾರಗಳ ಬಗ್ಗೆ ಸಾಫ್ಟ್ ಇತ್ತು. ಆಗ ಆಧಿಕಾರಿಗಳ ದರ್ಬಾರ್ ನಡೆಯುತ್ತಿತ್ತು. ಈಗಿನ ಕಾಂಗ್ರೆಸ್ ನವರು ಭಾರಿ ಜೋರ್ ಇದ್ದಾರೆ. ಆದರೆ ಅವರ ನಡೆ ನುಡಿಗಳು ಸರಿಯಿಲ್ಲ. ಅವರ ದರ್ಪದ ಮಾತುಗಳು ಜಾಸ್ತಿಯಾಗಿದೆ. ಸೌಜನ್ಯದ ನಡವಳಿಕೆಯೇ ಇಲ್ಲ. ಅಧಿಕಾರಿದಲ್ಲಿ ಇರುವವರು ದರ್ಪದಿಂದ ಮಾತನಾಡಬಾರದು. ಕಾಂಗ್ರೆಸ್ ನಲ್ಲಿ ಬರೀ ದರ್ಪದ ಮಾತುಗಳೇ ಇದೇ ಇದು ಒಳ್ಳೆಯದಲ್ಲ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು.

ಇದನ್ನೂ ಓದಿ: ಎಸ್​ಎಂ ಕೃಷ್ಣ ಭೇಟಿಯಾದ ಡಿಕೆ ಸುರೇಶ್; ಕುತೂಹಲ ಮೂಡಿಸಿದ ಬಿಜೆಪಿ-ಕಾಂಗ್ರೆಸ್ ನಾಯಕರ ಭೇಟಿ

ಯದುವೀರ್-ಪ್ರತಾಪ್ ಸಿಂಹ ಬಗ್ಗೆ ಬೈರಪ್ಪ ಮಾತು

ಇನ್ನು ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು ಬಿಜೆಪಿ ಟಿಕೆಟ್ ಕೈತಪ್ಪಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬೈರಪ್ಪ, ನಮ್ಮ ಪ್ರತಾಪ್ ಸಿಂಹ ಡೈನಾಮಿಕ್ ಮ್ಯಾನ್. ಅವರು ತುಂಬಾ ಕೆಲಸ ಮಾಡಿದ್ದಾರೆ. ಕೊಡಗಿನಲ್ಲಿ ಟಿಪ್ಪು ಜಯಂತಿಗೆ ಬ್ರೇಕ್ ಹಾಕಿದ್ದಾರೆ. ಅವರ ಬಳಿ ಫೈಟಿಂಗ್ ಸ್ಪಿರೀಟ್ ಇದೆ. ಇವತ್ತು ಕೂಡ ಫೈಟಿಂಗ್ ಸ್ಪಿರೀಟ್‌ನಲ್ಲಿ ಇದ್ದಾರೆ. ಟಿಕೆಟ್ ಮಿಸ್ ಆದ್ರೆ ಏನಾಗುತ್ತೆ. ಸಂಸದನಾದ್ರೆ ಅಲ್ಲೇ ಕೇಂದ್ರೀಕೃತವಾಗಿರ್ತಾರೆ. ಅದನ್ನ ಬಿಟ್ಟು ಮಾಡುವುದಕ್ಕೆ ಬಹಳ ಕೆಲಸ ಇದೆ. ಅದೇ ಉತ್ಸಾಹದಲ್ಲಿ ಪ್ರತಾಪ್ ಸಿಂಹ ಇದ್ದಾರೆ. ಯದುವೀರ್ ಗೆ ಟಿಕೆಟ್ ಕೊಟ್ಟಿರೋದಕ್ಕೆ ಒಂದಕ್ಕೊಂದು ವಿರೋಧ ಇಲ್ಲ. ಯದುವೀರ್‌ಗೆ ಟಿಕೆಟ್ ಕೊಟ್ಟಿದ್ದು ಒಳ್ಳೆಯದೇ ಆಯ್ತು. ಯದುವೀರ್ ಹಿನ್ನೆಲೆ ನೋಡಿದಾಗ ಇವರಿಗೆ ಸ್ಥಾನಮಾನ ಕೊಟ್ಟರೆ ಉತ್ತಮವಾಗಿ ನಿಭಾಯಿಸುತ್ತಾರೆ ಅನ್ಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗುಜರಾತಿಗಳನ್ನು ಕೊಂಡಾಡಿದ ಬೈರಪ್ಪ

ಗುಜರಾತಿನವರು ಆಕ್ಟಿವ್ ಹಾಗೂ ಆನೆಸ್ಟ್ ಆಗಿ ಕೆಲಸ ಮಾಡುತ್ತಾರೆ. ನಮ್ಮಲ್ಲಿ (ಕರ್ನಾಟಕ) ಅಂಗಡಿ ವ್ಯಾಪಾರಿಗಳು ಅಂದ್ರೆ ಪೂರ್ಣ ಪ್ರಾಮಾಣಿಕರು ಎಂದು ಹೇಳೊಕೆ ಆಗಲ್ಲ. ಆದರೆ, ಗುಜರಾತ್‌ನಲ್ಲಿ 6 ವರ್ಷದ ಮಗು ಕೈಯಲ್ಲಿ ಹಣ ಕೊಟ್ಟು ಕಳುಹಿಸಿದ್ರೂ ವ್ಯಾಪಾರಸ್ಥರು ಪ್ರಾಮಾಣಿಕವಾಗಿ ಚಿಲ್ಲರೆ ಕೊಟ್ಟು ಕಳುಹಿಸುತ್ತಾರೆ. ಹಾಗೇ ಗುಜರಾತಿಗಳು ಸುಳ್ಳು ಹೇಳಲ್ಲ ಎಂದು ಹಿರಿಯ ಸಾಹಿತಿ ಎಸ್​ಎಲ್​ ಬೈರಪ್ಪ ಗುಜರಾತಿಗಳನ್ನು ಕೊಂಡಾಡಿದ್ದಾರೆ.

ಅವರು ವ್ಯಾಪಾರಿಯಾಗಿ ಪ್ರಮಾಣಿಕರಾಗಿದ್ದಾರೆ. ವ್ಯಾಪರ ಕೇವಲ ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಮಾಡುತ್ತಾರೆ. ಅದಿಲ್ಲ ಅಂದ್ರೆ ಯಾವ ದೇಶ ಉದ್ದಾರ ಆಗೋಕೆ ಸಾಧ್ಯ ಹೇಳಿ. ಮೋದಿ ಅವರಿಗೂ ಅದೇ ಇದೆ. ಅವರು ವ್ಯಾಪಾರ ಬಿಟ್ಟು ಬರುವಾಗ ಅಲ್ಲಿದ್ದ ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತಮ್ಮ ಬಳಿ ಇದ್ದ 23 ಲಕ್ಷ ಕೊಟ್ಟು ಬಂದರು. ಅದೊಂದು ಮಾದರಿ ಆಯ್ತು. ಕೇಂದ್ರ ಸರ್ಕಾರದಲ್ಲಿ ಅದನ್ನ ಅಳವಡಿಸಿಕೊಂಡರು. ಇದನ್ನೆಲ್ಲ ಕ್ಯಾಪ್ಟಲಿಸ್ಟ್ ಅನ್ನೋಕಾಗುತ್ತಾ. ಕಾರು ವ್ಯಾಪಾರದಿಂದ ಹಣ ಬಂದು ಅಂದುಕೊಳ್ಳೋದು ಆರ್ಥಿಕತೆ ಅಲ್ಲ. ಅದರಿಂದ ಎಷ್ಟು ಕುಟುಂಬಕ್ಕೆ ನೆರವಾಯಿತು ಎನ್ನುವುದು ನಿಜವಾದ ಆರ್ಥಿಕತೆ. ಮತ್ತೊಮ್ಮೆ ಮೋದಿ ಪ್ರಧಾನಿ ಆಗುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ. ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್