ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ​ ಅವರಿಗೆ ಸಚಿವ ಹೆಚ್​ಸಿ ಮಹದೇವಪ್ಪರಿಂದ ಅಧಿಕೃತ ಆಹ್ವಾನ

ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದ್ದು, ಪ್ರತಿ ವರ್ಷದಂತೆ ಈ ಬಾರಿ ಕೂಡ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿಗೆ ಗೌರವಧನ ನೀಡಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ಅವರು ಆಹ್ವಾನ ನೀಡಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿ ಹಲವರು ಸಾಥ್ ನೀಡಿದರು.

ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ​ ಅವರಿಗೆ ಸಚಿವ ಹೆಚ್​ಸಿ ಮಹದೇವಪ್ಪರಿಂದ ಅಧಿಕೃತ ಆಹ್ವಾನ
ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಅವರಿಗೆ ಅಧಿಕೃತ ಆಹ್ವಾನ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 29, 2024 | 9:46 PM

ಮೈಸೂರು, ಸೆ.29: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಸಾಂಸ್ಕೃತಿಕ ನಗರಿ ಮೈಸೂರಿ(Mysore)ನಲ್ಲಿ ಮೆರಗು ಬಂದಿದೆ. ಈ ಬಾರಿ ಸಾಹಿತಿ ಹಂಪಾ ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಅದರಂತೆ ಪ್ರತಿ ವರ್ಷದಂತೆ ಈ ಬಾರಿ ಕೂಡ ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿಗೆ ಗೌರವಧನ ನೀಡಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ಅವರು ಆಹ್ವಾನ ನೀಡಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿ ಹಲವರು ಸಾಥ್ ನೀಡಿದರು.

ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದ್ದು, ಅಕ್ಟೋಬರ್​ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ದಸರಾ ಸಮೀಪಿಸುತ್ತಿದ್ದಂತೆ ಅರಮನೆಯಲ್ಲಿ ದಸರಾ ಸಿದ್ದತೆಗಳು ಬರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಪ್ ಬದಲಾಯಿಸುತ್ತಿದ್ರೆ, ಮತ್ತೊಂದೆಡೆ ಅರಮನೆ ಗೋಡೆಗಳಿಗೆ ಸುಣ್ಣ ಬಣ್ಣ ಬಳಿಯಲಾಗುತ್ತಿದೆ. ಹೌದು, ದಸರಾ ಸಮೀಪಿಸುತ್ತಿದ್ದಂತೆ ಅರಮನೆಯಲ್ಲಿ ಅಳವಡಿಸಿರುವ ದೀಪಗಳಲ್ಲಿ ಕೆಟ್ಟುಹೋಗಿರುವ ವಿದ್ಯುತ್ ದೀಪಾಗಳನ್ನು ಬದಲಾಯಿಸುವ ಕಾರ್ಯ ಬರದಿಂದ ಸಾಗಿದೆ. ಇಡೀ ಅರಮನೆಯನ್ನ ಒಂದು ಲಕ್ಷ ವಿದ್ಯುತ್ ದೀಪಾಗಳಿಂದ ಅಲಂಕರಿಸಲಾಗಿದೆ.

ಇದನ್ನೂ ಓದಿ:ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ

ವಿವಿಧ ಹೂಗಳಿಂದ ಅರಮನೆ ಆವರಣ ಅಲಂಕಾರ

ಇನ್ನು ಇದೇ ರೀತಿ ಅರಮನೆಗೆ ಸುಣ್ಣ ಬಣ್ಣ ಬಳಿಯುವ ಕೆಲಸವನ್ನು ಮಾಡಲಾಗುತ್ತಿದೆ. ಸದ್ಯ ಹಬ್ಬದ ಸಂಧರ್ಭದಲ್ಲಿ ಮನೆಗಳಿಗೆ ಹೇಗೆ ಸುಣ್ಣ ಬಣ್ಣ ಬಳಿಯುತ್ತೇವೆ ಅದೇ ಮಾದರಿಯಲ್ಲಿ ಇಡೀ ಅರಮನೆಯ ಪ್ರಾಂಗಣದಲ್ಲಿ ಬಣ್ಣ ಬಳಿಯಲಾಗುತ್ತಿದೆ. ಅದೇ ರೀತಿ ಅರಮನೆ ಆವರಣವನ್ನ ವಿವಿಧ ಹೂಗಳಿಂದ ಅಲಂಕರಿಸಲಾಗುತ್ತೆ. ಸುಮಾರು 15 ಕ್ಕು ಹೆಚ್ಚು ಜಾತಿಯ 10 ಸಾವಿರಕ್ಕು ಹೆಚ್ಚು ಹೂಕುಂಡಗಳಿಂದ ಅಲಂಕರಿಸಲಾಗುತ್ತಿದೆ.

ಒಟ್ಟಾರೆ, ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಬರದಿಂದ ಸಿದ್ದತೆ ಮಾಡಿಕೊಳ್ಳುತ್ತಿದೆ. ಒಟ್ಟಿನಲ್ಲಿ ವಿಶ್ವವೇ ತಿರುಗಿ ನೋಡುವಂತಹ ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಮಲ್ಲಿಗೆ ನಗರಿ ಮೈಸೂರು ಸಜ್ಜಾಗುತ್ತಿದ್ದು, ಇತ್ತ ದಸರಾ ಗಜಪಡೆ ಭರ್ಜರಿ ಕಸರತ್ತು ಕೂಡ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ