Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​.ಸಿ ಮಹದೇವಪ್ಪ ಕೃತಜ್ಞತಾ ಸಭೆ: ಬಾಡೂಟದ ವೇಳೆ ನೂಕುನುಗ್ಗಲು, ಅಜ್ಜಿ ಕಾಲು ಮುರಿತ

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹೆಳವರ ಹುಂಡಿ ಗ್ರಾಮದ ಬಳಿ ಆಯೋಜಿಸಲಾಗಿದ್ದ ಸಚಿವ ಡಾ. ಹೆಚ್​​.ಸಿ ಮಹದೇವಪ್ಪ ಕೃತಜ್ಞತಾ ಸಭೆಯಲ್ಲಿ ಬಾಡೂಟದ ವೇಳೆ ನೂಕುನುಗ್ಗಲು ಸಂಭವಿಸಿ ನೆಲಕ್ಕೆ ಬಿದ್ದಿದ್ದ ಅಜ್ಜಿಯೊಬ್ಬರ ಮೂಳೆ ಮುರಿದಿದೆ.

ಹೆಚ್​​.ಸಿ ಮಹದೇವಪ್ಪ ಕೃತಜ್ಞತಾ ಸಭೆ: ಬಾಡೂಟದ ವೇಳೆ ನೂಕುನುಗ್ಗಲು, ಅಜ್ಜಿ ಕಾಲು ಮುರಿತ
ಬಾಡೂಟದ ವೇಳೆ ನೂಕುನುಗ್ಗಲು
Follow us
ವಿವೇಕ ಬಿರಾದಾರ
|

Updated on:Jun 04, 2023 | 9:12 PM

ಮೈಸೂರು: ಜಿಲ್ಲೆಯ ಟಿ.ನರಸೀಪುರ (T Narasipura) ತಾಲೂಕಿನ ಹೆಳವರ ಹುಂಡಿ ಗ್ರಾಮದ ಬಳಿ ಆಯೋಜಿಸಲಾಗಿದ್ದ ಸಚಿವ ಡಾ. ಹೆಚ್​​.ಸಿ ಮಹದೇವಪ್ಪ (H. C. Mahadevappa) ಕೃತಜ್ಞತಾ ಸಭೆಯಲ್ಲಿ ಬಾಡೂಟದ ವೇಳೆ ನೂಕುನುಗ್ಗಲು ಸಂಭವಿಸಿ ನೆಲಕ್ಕೆ ಬಿದ್ದಿದ್ದ ಅಜ್ಜಿಯೊಬ್ಬರ ಕಾಲು ಮುರಿದಿದೆ. ಚಿಕ್ಕಮುತ್ತಮ್ಮ (66) ಅಜ್ಜಿಯ ಮೂಳೆ ಮುರಿದಿದ್ದು, ಕೆ.ಆರ್ ಆಸ್ಪತ್ರೆಗೆ (KR Hospital) ದಾಖಲಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರಿಗೆ ಬಾಡೂಟ ಆಯೋಜಿಸಲಾಗಿತ್ತು. ಭರ್ಜರಿ ಬಾಡೂಟದ ವೇಳೆ ಭಾರಿ ನೂಕುನುಗ್ಗಲು ಸಂಭವಿಸಿದೆ. ನೂಕುನುಗ್ಗಲಲ್ಲಿ ಸಿಲುಕಿ ಕೆಳಗೆ ಬಿದ್ದ ಪರಿಣಾಮ ಚಿಕ್ಕಮುತ್ತಮ್ಮ ಅವರ ಮೂಳೆ ಮುರಿದಿದೆ.

ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಕೆಎಸ್​ಆರ್​ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್​ನಲ್ಲಿ ಬಟ್ಟೆ ಅಂಗಡಿಗೆ ಶಾಪಿಂಗ್​ಗಾಗಿ ತೆರಳುತ್ತಿದ್ದರು. ಮತ್ತೊಂದು ಬೈಕ್​ನಲ್ಲಿ ಪುತ್ರಿ ಕೂಡ ತೆರಳುತ್ತಿದ್ದರು. ಈ ವೇಳೆ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಇಳಿಯುವ ವೇಳೆ ವೇಗವಾಗಿ ಬಲಕ್ಕೆ ಬಸ್ ಬಂದಿದ್ದು, ಬಸ್​​ ಹಿಂಬದಿ ದ್ವಿಚಕ್ರ ವಾಹನಕ್ಕೆ ಟಚ್ ಆಗಿ ಇಬ್ಬರು ರಸ್ತೆಗೆ ಬಿದ್ದಿದ್ದಾರೆ.

ಇದನ್ನೂ ಓದಿ:  Mysuru zoo: ಮೈಸೂರು ಮೃಗಾಲಯದಲ್ಲಿ ಹೊಸ ಆಕರ್ಷಣೆ, ರಿಂಗ್-ಟೈಲ್ಡ್ ಲೆಮರ್​ಗಳಿಗೆ ಸಿದ್ದವಾಯ್ತು ಮನೆ

ಈ ವೇಳೆ ಮಹಿಳೆ ಮೇಲೆ ಬಸ್​​ ಹರಿದಿದೆ. ಸದ್ಯ ಲತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು

ರಾಯಚೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ. ವಿರೂಪಾಕ್ಷ ಅರಕೇರಾ ಜುಟಮರಡಿ ಕೆಇಬಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇಂದು(ಜೂ.4) ವಿದ್ಯುತ್ ಪೂರೈಕೆಯ ಸಮಸ್ಯೆಯನ್ನು ಪರಿಹರಿಸಲು ಕಂಬ ಹತ್ತಿದ್ದನು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ವಿದ್ಯುತ್ ಕಂಬದ ಮೇಲೆಯೇ ಕೊನೆಯುಸಿರೆಳದಿದ್ದಾನೆ. ಈ ಕುರಿತು ದೇವದುರ್ಗ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Sun, 4 June 23

ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ