ಮೈಸೂರು: ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 12 ಜನರು ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿದ್ದಾರೆ. ಬೆಟ್ಟಹಳ್ಳಿ ಗ್ರಾಮಕ್ಕೆ ತಾಲೂಕು ಆಸ್ಪತ್ರೆಯ ವೈದ್ಯರ ತಂಡ ಭೇಟಿ ನೀಡಿ ಜನರ ಆರೋಗ್ಯ ಪರೀಕ್ಷೆ ನಡೆಸಿತು.
ಮೈಸೂರು, ಸೆಪ್ಟೆಂಬರ್ 11: ಕಲುಷಿತ ನೀರು (Contaminated Water) ಸೇವಿಸಿ 12 ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ (Saligram) ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದೇಗೌಡ (65 ವರ್ಷ) ಮೃತದುರ್ದೈವಿ. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.
ಮೃತ ಗೋವಿಂದೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗೋವಿಂದೇಗೌಡ ಮೃತಪಟ್ಟಿದ್ದಾರೆ. ತಾಲೂಕು ಆಸ್ಪತ್ರೆಯ ವೈದ್ಯರು ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ಜನರ ಆರೋಗ್ಯ ಪರೀಕ್ಷೆ ನಡೆಸಿದರು.
ಇದನ್ನೂ ಓದಿ: ದಾವಣಗೆರೆ: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ
ಕಾರು ಪಲ್ಟಿಯಾಗಿ ಯುವಕ ಸಾವು, ಇಬ್ಬರಿಗೆ ಗಾಯ
ಬಾಗಲಕೋಟೆ: ಹವೇಲಿ ಕ್ರಾಸ್ ಬಳಿ ಬೆಳಗಿನ ಜಾವ ಕಾರು ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಶಾಲ ಸರಗಣಾಚಾರಿ (27) ಮೃತ ಯುವಕ. ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ರಸ್ತೆಯಿಂದ 15 ಅಡಿ ಕೆಳಗೆ ಉರುಳಿದೆ. ಕಾರು ನುಜ್ಜುಗುಜ್ಜಾಗಿದೆ. ಬಾಗಲಕೋಟೆ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:52 am, Wed, 11 September 24