AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್‌ ಮೂಲಕ ಕಾರು ಖರೀದಿಸುವ ಮುನ್ನ ಹುಷಾರ್:​ ಅಂತಾರಾಜ್ಯ ಜಾಲ ಪತ್ತೆ

ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರು ಕೊಡಿಸುವುದಾಗಿ ವಂಚಿಸುತ್ತಿದ್ದ ಅಂತಾರಾಜ್ಯ ಜಾಲವೊಂದನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1.10 ಕೋಟಿ ರೂ. ಮೌಲ್ಯದ 8 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್ ಬಳಸುತ್ತಿದ್ದ ಐಡಿಯಾ ಕೇಳಿದರೆ ನೀವು ಶಾಕ್ ಆಗುತ್ತೀರಾ.

ಫೇಸ್‌ಬುಕ್‌ ಮೂಲಕ ಕಾರು ಖರೀದಿಸುವ ಮುನ್ನ ಹುಷಾರ್:​ ಅಂತಾರಾಜ್ಯ ಜಾಲ ಪತ್ತೆ
ಪೊಲೀಸರು ವಶಕ್ಕೆ ಪಡೆದಿರುವ ಕಾರುಗಳುImage Credit source: tv9 kannada
ರಾಮ್​, ಮೈಸೂರು
| Edited By: |

Updated on:Mar 27, 2026 | 6:40 PM

Share

ಮೈಸೂರು, ಮಾರ್ಚ್​ 27: ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರುಗಳ ಫೋಟೋ ನೋಡಿ ಮರುಳಾಗಬೇಡಿ. ಏಕೆಂದರೆ ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುತ್ತೇವೆ ಅಂತ ನಂಬಿಸಿ ಕೋಟ್ಯಂತರ ರೂ ವಂಚಿಸುತ್ತಿದ್ದ (Luxury Car Scam) ದೊಡ್ಡ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಅಸಲಿ ಮಾಲೀಕರಿಗೂ ಇಲ್ಲ, ಇತ್ತ ಖರೀದಿ ಮಾಡುವವರಿಗೂ ಇಲ್ಲ ಎನ್ನುವ ರೀತಿ ವಂಚಿಸುತ್ತಿದ್ದರು. ಈ ಖದೀಮರ ಮೋಸದ ಆಟ ಹೇಗಿತ್ತು ಅಂತಾ ಕೇಳಿದರೆ ಶಾಕ್​ ಆಗುವುದು ಗ್ಯಾರಂಟಿ.

ಅಂತಾರಾಜ್ಯ ವಂಚಕರ ಜಾಲ ಪತ್ತೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ ಹೈಟೆಕ್ ವಂಚಕರದ್ದೇ ಸದ್ದು. ಫೇಸ್‌ಬುಕ್ ಎಂಬ ಮಾಯಾಲೋಕವನ್ನೇ ಬಂಡವಾಳ ಮಾಡಿಕೊಂಡಿದ್ದ ಖದೀಮರು, ಐಷಾರಾಮಿ ಕಾರುಗಳ ಖರೀದಿ ಮತ್ತು ಮಾರಾಟದ ಹೆಸರಿನಲ್ಲಿ ಭಾರೀ ದೋಖಾ ಮಾಡುತ್ತಿದ್ದರು. ಮೈಸೂರು ಮೂಲದ ಅಭಿಷೇಕ್ ಎಂಬುವವರು ನೀಡಿದ ದೂರಿನ ಬೆನ್ನತ್ತಿದ ಮೈಸೂರು ಜಿಲ್ಲಾ ಪೊಲೀಸರು, ಈಗ ಅಂತಾರಾಜ್ಯ ವಂಚಕರ ಜಾಲವನ್ನೇ ಬಯಲಿಗೆಳೆದಿದ್ದಾರೆ.

ಇದನ್ನೂ ಓದಿ: ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು!

ಪ್ರಕರಣದ ಪ್ರಮುಖ ಆರೋಪಿಗಳಾದ  ರುಮಾನ್ ಷರೀಫ್, ​ಮುಜಾಹಿದ್ ಫಾಷಾ, ​ಷಾಹಬುದ್ದಿನ್‌ರನ್ನು ಬಂಧಿಸಲಾಗಿದೆ. ಈ ಮೂವರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು, ಇವರಿಂದ ಬರೋಬ್ಬರಿ ಒಂದು ಕೋಟಿ, ಹತ್ತು ಲಕ್ಷ ರೂ ಮೌಲ್ಯದ 8 ಐಶಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಗ್ಯಾಂಗ್ ಬಳಸುತ್ತಿದ್ದ ಐಡಿಯಾ ಕೇಳಿದರೆ ನೀವು ಶಾಕ್ ಆಗುತ್ತೀರಾ.

ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡಿ ವಂಚನೆ

​ಹಳೇ ಐಷಾರಾಮಿ ಕಾರುಗಳನ್ನು ಉತ್ತಮ ಬೆಲೆಗೆ ಖರೀದಿಸುವುದಾಗಿ ಫೇಸ್‌ಬುಕ್‌ನಲ್ಲಿ ಜಾಹೀರಾತು ನೀಡುತ್ತಿದ್ದರು. ​ನಂಬಿದ ಮಾಲೀಕರಿಗೆ ಅಲ್ಪ ಸ್ವಲ್ಪ ಮುಂಗಡ ಹಣ ನೀಡಿ ಕಾರನ್ನು ಪಡೆಯುತ್ತಿದ್ದರು. ​ಅದೇ ಕಾರನ್ನು ಮತ್ತೆ ಯಾರಿಗೋ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ​ಹೊಸ ಮಾಲೀಕರು ಕಾರಿನ ಅಸಲಿ ದಾಖಲಾತಿ ಕೇಳಿದಾಗ ರಾತ್ರೋರಾತ್ರಿ ನಾಪತ್ತೆಯಾಗುತ್ತಿದ್ದರು.

ಇತ್ತ ಕಾರಿನ ಅಸಲಿ ಮಾಲೀಕರಿಗೂ ಹಣ ಸಿಗದೆ, ಅತ್ತ ಕಾರು ಖರೀದಿಸಿದವರಿಗೂ ದಾಖಲಾತಿ ಸಿಗದೆ ಇಬ್ಬರಿಗೂ ನಾಮ ಹಾಕುತ್ತಿದ್ದರು ಈ ಖದೀಮರು. ಮೈಸೂರು ಜಿಲ್ಲಾ ಪೊಲೀಸ್, ಎಸ್​ಪಿ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆ ಮಾಡಲಾಗಿದ್ದು, ಈ ಜಾಲದ ಹಿಂದೆ ಇನ್ನೂ ಯಾರೆಲ್ಲಾ ಇದ್ದಾರೆ ಅನ್ನೋದನ್ನ ಪತ್ತೆ ಹಚ್ಚಲು ಮುಂದಾಗಿದೆ. ಸದ್ಯ ಎಂಟು ಕಾರುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಕಾರಿನ ಮೂಲ ಮಾಲೀಕರ ಪತ್ತೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹಣದ ಮಳೆ ಸುರಿಸ್ತೀವಿ ಅಂದೋರು ಮಾಡಿದ್ರು ಚೀಟಿಂಗ್; ಲಕ್ಷ ಲಕ್ಷ ಪಂಗನಾಮ

ಒಟ್ಟಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಕಾಣುವ ಆಕರ್ಷಕ ಡೀಲ್‌ಗಳ ಹಿಂದೆ ಇಂತಹ ದೊಡ್ಡ ವಂಚನೆ ಜಾಲ ಇರುತ್ತೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿ. ಇನ್ನಾದರೂ ಸಾರ್ವಜನಿಕರು ಆನ್‌ಲೈನ್ ವ್ಯವಹಾರ ಮಾಡುವಾಗ ಎಚ್ಚರದಿಂದಿರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:31 pm, Fri, 27 March 26

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ