ಆನ್‌ಲೈನ್ ಮೂಲಕ ವಂಚಿಸುತ್ತಿದ್ದವರ ಬ್ಯಾಂಕ್ ಖಾತೆ ಫ್ರೀಜ್; 4 ಪ್ರಕರಣಗಳ ಭೇದಿಸಿ ಹಣ ಮರುಪಾವತಿ ಮಾಡಿದ ಮೈಸೂರು ಸೈಬರ್ ಕ್ರೈಂ ಪೊಲೀಸ್
ಅಲ್ಲದೆ ಆನ್ ಲೈನ್ನಿಂದ ವಂಚನೆಗೊಳಗಾಗಿದ್ದವರಿಗೆ ಹಣ ಮರುಪಾವತಿ ಮಾಡಿದ್ದಾರೆ. ಒಟ್ಟು 6,43,297 ರೂ ಹಣ ಮರುಪಾವತಿ ಮಾಡಲಾಗಿದೆ. ವಿಜಯನಗರ ನಿವಾಸಿಗಳಾದ ಚಂದಾಲಾಲ್ ಮತ್ತು ಸುನೀತಾಗೆ ಕೆವೈಸಿ ಒಟಿಪಿ ಪಡೆದು ಒಟ್ಟು 4,49,100 ರೂಪಾಯಿ ವಂಚನೆ ಮಾಡಲಾಗಿತ್ತು.
ಮೈಸೂರು: ಮೈಸೂರು ಸೈಬರ್ ಕ್ರೈಂ ಪೊಲೀಸರು(Mysuru Cyber Crime Police) ಕಾರ್ಯಾಚರಣೆ ನಡೆಸಿ ಆನ್‌ಲೈನ್ ಮೂಲಕ ವಂಚಿಸುತ್ತಿದ್ದವರ(Online Fraud) ಬ್ಯಾಂಕ್ ಖಾತೆ ಫ್ರೀಜ್ ಮಾಡಿದ್ದಾರೆ. ಮೈಸೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ದಾಖಲಾಗಿದ್ದವು. ಇದರ ಜಾಡು ಹಿಡಿದ ಪೊಲೀಸರು ಪ್ರಕರಣಗಳನ್ನು ಭೇದಿಸಿ ಆನ್‌ಲೈನ್ ಮೂಲಕ ವಂಚಿಸುತ್ತಿದ್ದವರ ಬ್ಯಾಂಕ್ ಖಾತೆ ಫ್ರೀಜ್ ಮಾಡಿದ್ದಾರೆ.
ಅಲ್ಲದೆ ಆನ್ ಲೈನ್ನಿಂದ ವಂಚನೆಗೊಳಗಾಗಿದ್ದವರಿಗೆ ಹಣ ಮರುಪಾವತಿ ಮಾಡಿದ್ದಾರೆ. ಒಟ್ಟು 6,43,297 ರೂ ಹಣ ಮರುಪಾವತಿ ಮಾಡಲಾಗಿದೆ. ವಿಜಯನಗರ ನಿವಾಸಿಗಳಾದ ಚಂದಾಲಾಲ್ ಮತ್ತು ಸುನೀತಾಗೆ ಕೆವೈಸಿ ಒಟಿಪಿ ಪಡೆದು ಒಟ್ಟು 4,49,100 ರೂಪಾಯಿ ವಂಚನೆ ಮಾಡಲಾಗಿತ್ತು. ವಿದ್ಯಾರಣ್ಯಪುರಂ ಚಂದ್ರು ಅವರಿಗೆ 1,69,199 ರೂಪಾಯಿ ವಂಚನೆ ಆಗಿದೆ. ದಟ್ಟಗಳ್ಳಿಯ ರವಿ ಹೆಬ್ಬಾರ್ ಅವರಿಗೆ 22,999 ರೂಪಾಯಿ ವಂಚನೆ. ಹಿನಕಲ್ ನಿವಾಸಿ ಪ್ರೇಮ್ ದಾಸ್ ಅವರಿಗೆ 1,999 ರೂಪಾಯಿ ವಂಚನೆ ಆಗಿತ್ತು. ಸದ್ಯ ಈ ನಾಲ್ಕು ಪ್ರಕರಣಗಳನ್ನು ಬೇದಿಸಿದ ಪೊಲೀಸರು, ವಂಚನೆಗೊಳಗಾಗಿದ್ದವರಿಗೆ ಹಣ ಮರುಪಾವತಿ ಮಾಡಿದ್ದಾರೆ.
ಆನ್‌ಲೈನ್ ಮೂಲಕ ವಂಚಿಸಿ ದೇಶದ ವಿವಿಧ ಭಾಗಗಳಲ್ಲಿನ ಆರೋಪಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಬ್ಯಾಂಕ್ ಮ್ಯಾನೇಜರ್, ನೋಡಲ್ ಆಫೀಸರ್, ಮತ್ತು ಕೋರ್ ಬ್ಯಾಂಕಿಂಗ್‍ನ ಲೀಗಲ್ ಟೀಮ್ ರವರನ್ನು ಸಂಪರ್ಕಿಸಿ ಆರೋಪಿಗಳ ಬ್ಯಾಂಕ್ ಖಾತೆ ಫ್ರೀಜ್ ಮಾಡಲಾಗಿದೆ. ಪೊಲೀಸರು ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಹಣ ಕಳೆದುಕೊಂಡವರಿಗೆ ವಾಪಸ್ಸು ಕೊಡಿಸಿದ್ದಾರೆ.
ಇದನ್ನೂ ಓದಿ: ರಷ್ಯಾ-ಉಕ್ರೇನ್ ನಡುವೆ ಮಹಾಯುದ್ಧ! ಉಕ್ರೇನ್ನಲ್ಲಿ ಸಿಲುಕಿರುವ ಕರ್ನಾಟಕದ 91 ವಿದ್ಯಾರ್ಥಿಗಳು; ಪೋಷಕರು ಕಣ್ಣೀರು
‘ಇದು ಬರೀ ಸಿನಿಮಾ ಅಲ್ಲ, ಮ್ಯಾಜಿಕ್’: ‘ಗಂಗೂಬಾಯಿ ಕಾಠಿಯಾವಾಡಿ’ ನೋಡಿದ ಸೆಲೆಬ್ರಿಟಿಗಳ ವಿಮರ್ಶೆ