AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಹಸ್ತ; BJP ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ಸೇರಿ 30 ಮುಖಂಡರು ಕಾಂಗ್ರೆಸ್ ಸೇರ್ಪಡೆ

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ​​​​​ರಾಮಸ್ವಾಮಿ ಸೇರಿ 30 ಮುಖಂಡರು BJP ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 30 ಜನ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ.

ಆಪರೇಷನ್ ಹಸ್ತ; BJP ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ಸೇರಿ 30 ಮುಖಂಡರು ಕಾಂಗ್ರೆಸ್ ಸೇರ್ಪಡೆ
ಸಿದ್ದರಾಮಯ್ಯ
ದಿಲೀಪ್​, ಚೌಡಹಳ್ಳಿ
| Edited By: |

Updated on:Apr 02, 2024 | 8:00 AM

Share

ಮೈಸೂರು, ಏಪ್ರಿಲ್. 02: ಲೋಕಸಭೆ ಚುನಾವಣೆಯ (Lok Sabha Election) ಅಸಲಿ ಯುದ್ಧ ಆರಂಭವಾಗಿದೆ. ಒಂದ್ಕಡೆ ನಾಮಪತ್ರ ಭರಾಟೆ ಜೋರಾಗಿದ್ರೆ, ಮತ್ತೊಂದ್ಕೆಡೆ, ಪ್ರಚಾರ, ಮಾತಿನ ಯುದ್ಧ, ಆಪರೇಷನ್ ಹಸ್ತ (Operation Hasta) ನಡೆಯುತ್ತಿದೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ​​​​​ರಾಮಸ್ವಾಮಿ ಸೇರಿ 30 ಮುಖಂಡರು BJP ತೊರೆದು ಕಾಂಗ್ರೆಸ್ ಸೇರಲಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 30 ಜನ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ. ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ, ಪುತ್ರ ಭರತ್​​​​​ ರಾಮಸ್ವಾಮಿ ಸೇರಿ 30 ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಇನ್ನು ಮೈಸೂರು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರೋ ಸಿಎಂ ಸಿದ್ದರಾಮಯ್ಯ, ಮೂರು ದಿನ ಠಿಕಾಣಿ ಹೂಡಿ, ಆಪರೇಷನ್ ಅಸ್ತ್ರ ಹೂಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮುಂದುವರೆದಿದೆ. ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಿಎಂ ಭಾರಿ ಕಸರತ್ತು ನಡೆಸುತ್ತಿದ್ದಾರೆ. ನಾನಾ ಕಡೆಗಳಿಗೆ ಭೇಟಿ ನೀಡಿ ಸಭೆ ಹಾಗೂ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಲೋಕಸಭಾ ಪ್ರಚಾರ ಕಣದಲ್ಲಿ ಹೆಲಿಕಾಪ್ಟರ್​​ಗಳಿಗೆ ಹೆಚ್ಚಿದ ಬೇಡಿಕೆ: ಲಕ್ಷ ಲಕ್ಷ ಬಾಡಿಗೆ ಕೊಟ್ಟು ನಾಯಕರ ಸುತ್ತಾಟ

ಮೈಸೂರಿನಲ್ಲಿ ಸಾಲು ಸಾಲು ಸಭೆ

ಸಿಎಂ ಸಿದ್ದರಾಮಯ್ಯನವರು ಇಂದು ಮೈಸೂರಿನ ಚಾಮರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಭೆ ನಡೆಸಲಿದ್ದಾರೆ. ಚಾಮರಾಜ ವಿಧಾನಸಭ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ನಂತರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಇನ್ನು ಮತ್ತೊಂದೆಡೆ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರ ಸಭೆ ನಡೆಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲೀಡ್ ಕೊಡಲೇಬೇಕು ಎಂದು ಈಗಾಗಲೇ ಸಿಎಂ ಮುಖಂಡರಿಗೆ ಸೂಚನೆ ನೀಡಿದ್ದಾರೆ. ಇದೀಗಾ ಕ್ಷೇತ್ರ ಪ್ರತಿಯೊಬ್ಬ ಮುಖಂಡರ ಜೊತೆ ಸಭೆ ನಡೆಸಿ ಮತಗಳಿಕೆಗೆ ಪ್ಲಾನ್ ಮಾಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆಯು ಚರ್ಚೆ ನಡೆಯಲಿದೆ. ಮುಖಂಡರುಗಳ ಸೇರ್ಪಡೆಯಿಂದ ಅನುಕೂಲ ಅನಾನುಕೂಲ ಬಗ್ಗೆಯು ಚರ್ಚೆ ನಡೆಯಲಿದೆ.

ಇನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರೋ ವರುಣದಲ್ಲಿ ಸಿಎಂ ಅಬ್ಬರದ ಪ್ರಚಾರ ಮಾಡಿದ್ರು. ಸಚಿವ ಹೆಚ್‌.ಸಿ ಮಹದೇವಪ್ಪ ಪುತ್ರ ಸುನಿಲ್‌ ಬೋಸ್ ಪರ ಮತ ಮತಯಾಚಿಸಿದ ಸಿಎಂ, ವರುಣದಿಂದ ಕಾಂಗ್ರೆಸ್ ಅಭ್ಯರ್ಥಿಗೆ 60 ಸಾವಿರ ಲೀಡ್ ಕೊಡಿ. ನೀವು ಒಳ್ಳೆ ಲೀಡ್ ಕೊಟ್ರೆ ನನಗೆ ಸಂತೋಷ ವಾಗುತ್ತೆ. ನನ್ನ ಯಾರೂ ಮುಟ್ಟೋಕೆ ಆಗಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ನಾನು ಇರ್ಬೇಕೋ ಬೇಡ್ವೋ ಅನ್ನೋ ಪ್ರಶ್ನೆಯನ್ನ ಜನರ ಮುಂದಿಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:58 am, Tue, 2 April 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ