ವಿಪಕ್ಷನಾಯಕ ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನ
ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ವಿಧಿವಶರಾಗಿದ್ದಾರೆ.
ಮೈಸೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರ ಕಿರಿಯ ಸಹೋದರ ರಾಮೇಗೌಡ (Ramegowda) (64) ವಿಧಿವಶರಾಗಿದ್ದಾರೆ. ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ರಾಮೇಗೌಡ ಅವರು ಪತ್ನಿ ರುಕ್ಮಿಣಿ, ಮಕ್ಕಳಾದ ರವಿ, ರಘು ಮತ್ತು ನಾಗರತ್ನ ಸೇರಿದಂತೆ ಕುಟುಂಬಸ್ಥರನ್ನು ಮೃತರು ಅಗಲಿದ್ದಾರೆ. ಹೊಸಹಳ್ಳಿಯಲ್ಲಿರುವ ಜಮೀನಿನಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದ್ದು, ಸಿದ್ದರಾಮಯ್ಯ ಅವರು ತಮ್ಮನ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಿದ್ದರಾಮಯ್ಯ ಕಿರಿಯ ಸಹೋದರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ
— Basavaraj S Bommai (@BSBommai) August 26, 2022
Published On - 11:09 pm, Fri, 26 August 22