AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಜಯಮೃತ್ಯುಂಜಯ ಸ್ವಾಮೀಜಿಗೆ ಕೆಎಸ್ ಶಿವರಾಮು ಎಚ್ಚರಿಕೆ

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ, ಹೋರಾಟದ ನೇತೃತ್ವ ವಹಿಸಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ ಎನ್ನುವ ಮೂಲಕ ವಿವಾದದ ಕಿಚ್ಚು ಹಚ್ಚಿದ್ದಾರೆ. ವಿವರ ಇಲ್ಲಿದೆ.

ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಜಯಮೃತ್ಯುಂಜಯ ಸ್ವಾಮೀಜಿಗೆ ಕೆಎಸ್ ಶಿವರಾಮು ಎಚ್ಚರಿಕೆ
ಕೆಎಸ್ ಶಿವರಾಮು & ಜಯಮೃತ್ಯುಂಜಯ ಸ್ವಾಮೀಜಿ
ರಾಮ್​, ಮೈಸೂರು
| Edited By: |

Updated on:Dec 14, 2024 | 3:04 PM

Share

ಮೈಸೂರು, ಡಿಸೆಂಬರ್ 14: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಬಗ್ಗೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ಹೋರಾಟ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಎಚ್ಚರಿಕೆ ನೀಡಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಹೋರಾಟವನ್ನು ಖಂಡಿಸುತ್ತಿದ್ದೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಕೆಎಸ್ ಶಿವರಾಮು ಹೇಳಿದ್ದಾರೆ.

ಕಾವಿ ಬಟ್ಟೆಗೆ ನಾವು ಗೌರವ ಕೊಡುತ್ತಾ ಇದ್ದೇವೆ. ಅದನ್ನು ಉಳಿಸಿಕೊಳ್ಳಿ. ಮೀಸಲಾತಿ ವಿಚಾರ ಸುಪ್ರೀಂ ಕೋರ್ಟ್​​ನಲ್ಲಿ ಇದೆ. ಸ್ವಾಮೀಜಿಯಾಗಿ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಾ ಇದ್ದೀರಿ. ಇದೇನಾ ನಿಮ್ಮ ರೀತಿ ನೀತಿ? ಹಿಂದುಳಿದ ವರ್ಗಗಳು ವೀರಶೈವರು, ಲಿಂಗಾಯತರು ಒಂದಾಗಿ ಇದ್ದೇವೆ. ನಮ್ಮಗಳ ಮಧ್ಯೆ ಜಗಳ ತಂದು ಹಾಕುತ್ತಾ ಇದ್ದೀರಿ ಎಂದು ಶಿವರಾಮು ಕಿಡಿಕಾರಿದ್ದಾರೆ.

ಜಯಮೃತ್ಯುಂಜಯ ಸ್ವಾಮಿ ಬಿಜೆಪಿ ಏಜೆಂಟ್: ಶಿವರಾಮು

ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಾ ಇದ್ದಾರೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸುಪಾರಿ ಪಡೆದುಕೊಂಡಿದ್ದಾರೆ ಎಂದು ಶಿವರಾಮು ಆರೋಪಿಸಿದ್ದಾರೆ.

ಇದನ್ನೂ ಓದಿ: ಶಾಂತಿಯುತ ಅಲ್ಲ, ಇನ್ಮೇಲೆ ಕ್ರಾಂತಿಯುತ ಹೋರಾಟ: ಜಯಮೃತ್ಯುಂಜಯ ಶ್ರೀ ಎಚ್ಚರಿಕೆ

ಬೆಳಗಾವಿಯಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಮಂಡಲ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರಗೊಂಡಿದೆ. ಬೆಳಗಾವಿಯಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಿದ ವಿಚಾರ ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಸಭೆ ನಡೆಸಿದೆ. ಸಭೆಯ ಬಳಿಕ ಮಾತನಾಡಿದ ಶಿವರಾಮು, ಜಯಮೃತ್ಯುಂಜಯ ಸ್ವಾಮೀಜಿಗೆ ಎಚ್ಚರಿಕೆ ನೀಡಿದ್ದಲ್ಲದೆ, ವಿವಾದಾತ್ಮಕ ಹೇಳಿಕೆಯನ್ನೂ ನೀಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Sat, 14 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್