ಪಂಡಿತ ಕೆ ವೆಂಕಟೇಶ್ ಕುಮಾರ್ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ
ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಪ್ರತಿಷ್ಠಿತ "ಸಂಗೀತ ವಿದ್ವಾನ್" ಪ್ರಶಸ್ತಿ ಘೋಷಿಸಿದೆ. ಈ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ ಸೆ 22 ರಂದು ನಡೆಯುವ ದಸರಾ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಿದ್ದಾರೆ. ವೆಂಕಟೇಶ್ ಕುಮಾರ್ ಅವರ ಸಂಗೀತ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಮೈಸೂರು, ಸೆಪ್ಟೆಂಬರ್ 20: ನಾಡಹಬ್ಬ ದಸರಾದಲ್ಲಿ (Dasara) ನೀಡಲಾಗುವ ‘ಸಂಗೀತ ವಿದ್ವಾನ್’ ಪ್ರಶಸ್ತಿ ಈ ಭಾರಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ (pandit Venkatesh kumar) ಅವರಿಗೆ ಒಲಿದಿದೆ. ರಾಜ್ಯ ಸರ್ಕಾರ ಶನಿವಾರ ಪ್ರಶಸ್ತಿ ಘೋಷಣೆ ಮಾಡಿದೆ. ಪಂಡಿತ ವೆಂಕಟೇಶ್ ಕುಮಾರ್ ಅವರು ಹಿಂದೂಸ್ತಾನಿ ಸಂಗೀತದಲ್ಲಿ ದೇಶಾದ್ಯಂತ ಖ್ಯಾತಿ ಗಳಿಸಿದ್ದಾರೆ.
ಸಚಿವ ಶಿವರಾಜ ತಂಗಡಗಿ ಹೇಳಿದ್ದಿಷ್ಟು
ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರು ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ. ಕೆ ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮೈಸೂರು ದಸರಾ ಹಾಡು ಬಿಡುಗಡೆ, ರಾಜೇಶ್ ಕೃಷ್ಣನ್ ಕಂಠ ಸಿರಿಯಲ್ಲಿ ಮೊಳಗಿದ ಹಾಡು, ವಿಡಿಯೋ ಇಲ್ಲಿದೆ ನೋಡಿ
ಡಾ. ವೈ.ಕೆ ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ ಮಾಡಲಾಗಿದೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ ಎಂದರು.
ಇದನ್ನೂ ಓದಿ: ಗಜಪಡೆ ತಾಲೀಮು, ವಜ್ರಖಚಿತ ಸಿಂಹಾಸನ ಜೋಡಣೆ: ಇಲ್ಲಿವೆ ಮೈಸೂರು ದಸರಾ ಸಂಭ್ರಮದ ಚಿತ್ರಗಳು
ಸೆಪ್ಟೆಂಬರ್ 22ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಈ ಪ್ರಶಸ್ತಿ ಐದು ಲಕ್ಷ ರೂ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:28 pm, Sat, 20 September 25



