ಸಂಸತ್ ಭವನ ದಾಳಿ; ಮುಂದುವರೆದ ಮನೋರಂಜನ್ ಕುಟುಂಬಸ್ಥರ ವಿಚಾರಣೆ, ಮೈಸೂರಿನಲ್ಲೇ ವಾಸ್ತವ್ಯ ಹೂಡಿದ ದೆಹಲಿ ಪೊಲೀಸ್

Parliament Security Breach: ಇಡೀ ದೇಶವನ್ನೇ ಬೆಚ್ಚಿ‌ಬೀಳಿಸಿದ್ದ ಸಂಸತ್ ಮೇಲಿನ ಸ್ಮೋಕ್ ಬಾಂಬ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣದ ಎ1 ಆರೋಪಿ ಮೈಸೂರಿನ ಮನೋರಂಜನ ಪೋಷಕರನ್ನ ದೆಹಲಿಯ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ನಿನ್ನೆ ದೆಹಲಿ ಪೊಲೀಸರು ಮನೋರಂಜನ್ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ಇಂದು ಕೂಡ ವಿಚಾರಣೆ ಮುಂದುವರೆಯುವ ಸಾಧ್ಯತೆ ಇದೆ.

ಸಂಸತ್ ಭವನ ದಾಳಿ; ಮುಂದುವರೆದ ಮನೋರಂಜನ್ ಕುಟುಂಬಸ್ಥರ ವಿಚಾರಣೆ, ಮೈಸೂರಿನಲ್ಲೇ ವಾಸ್ತವ್ಯ ಹೂಡಿದ ದೆಹಲಿ ಪೊಲೀಸ್
ಆರೋಪಿ ಮನೋರಂಜನ್ ಮನೆ
Follow us
ದಿಲೀಪ್​, ಚೌಡಹಳ್ಳಿ
| Updated By: ಆಯೇಷಾ ಬಾನು

Updated on: Dec 20, 2023 | 12:09 PM

ಮೈಸೂರು, ಡಿ.20: ದೆಹಲಿ ಸಂಸತ್ ಭವನ ಮೇಲಿನ ದಾಳಿ ಪ್ರಕರಣದಲ್ಲಿ(Parliament Security Breach) ಭಾಗಿಯಾಗಿದ್ದ ಮೈಸೂರಿನ (Mysuru) ಮನೋರಂಜನ್ ನಿವಾಸದಲ್ಲಿ ದೆಹಲಿ ಪೊಲೀಸರ ತಲಾಶ್ ಮುಂದುವರೆದಿದೆ. ನಿನ್ನೆ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿ ಮನೋರಂಜನ್ ತಾಯಿ ಮತ್ತು ಸಹೋದರಿಯನ್ನ ಸತತ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆಯನ್ನ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ ದೆಹಲಿ ಪೊಲೀಸರು (Delhi Police) ಇಂದು ಕೂಡ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದಾರೆ. ಜೊತೆಗೆ ಇಂದು ಕೂಡ ಮನೋರಂಜನ್ ಕುಟುಂಬಸ್ಥರನ್ನ ವಿಚಾರಣೆ ನಡೆಸಲಿದ್ದಾರೆ.

ಇಡೀ ದೇಶವನ್ನೇ ಬೆಚ್ಚಿ‌ಬೀಳಿಸಿದ್ದ ಸಂಸತ್ ಮೇಲಿನ ಸ್ಮೋಕ್ ಬಾಂಬ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣದ ಎ1 ಆರೋಪಿ ಮೈಸೂರಿನ ಮನೋರಂಜನ ಪೋಷಕರನ್ನ ದೆಹಲಿಯ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ನಿನ್ನೆ ದೆಹಲಿ ಪೊಲೀಸರು ಮನೋರಂಜನ್ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ಇಂದು ಕೂಡ ವಿಚಾರಣೆ ಮುಂದುವರೆಯುವ ಸಾಧ್ಯತೆ ಇದೆ. ಸದ್ಯ ದೆಹಲಿ ಪೊಲೀಸರು ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದು ತಾವು ಇರುವಲ್ಲಿಗೆಯೇ ಮನೋರಂಜನ್ ತಂದೆ ದೇವಾರಾಜೇಗೌಡರನ್ನು ಕರೆಸಿಕೊಳ್ಳುವ ಸಾಧ್ಯತೆ ಇದೆ. ಇನ್ನು ದೇವಾರಾಜೇಗೌಡರಿಗೆ ಬ್ಯಾಂಕ್ ಸ್ಟೇಟ್ ಮೆಂಟ್ ತೆಗದುಕೊಂಡು ಬರುವಂತೆ ಸೂಚಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೋರಂಜನ್ ಹಣದ ಮೂಲದ ಬಗ್ಗೆ ದೆಹಲಿ ಪೊಲೀಸರು ಸಾಕಷ್ಟು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಮನೋರಂಜನ್​ಗೆ ಸಂಬಂಧ ಪಟ್ಟ ಪಾಸ್ ಪೋರ್ಟ್, ಬ್ಯಾಂಕ್ ಪಾಸ್ ಬುಕ್ ಹಾಗೂ ಕೆಲವು ನೋಟ್ ಪುಸ್ತಕಗಳನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮನೋರಂಜನ್ ಪೋಷಕರ ಸುದೀರ್ಘ ವಿಚಾರಣೆ: ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದ ದೆಹಲಿ ಪೊಲೀಸ್​

ದೆಹಲಿ ಪೊಲೀಸರ ಮುಂದೆ ಮನೋರಂಜನ್ ಕೊಟ್ಟಿರುವ ಹೇಳಿಕೆ ಹಾಗೂ ಪೋಷಕರು‌ ಕೊಡುತ್ತಿರುವ ಹೇಳಿಕೆಗೂ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಸಾಗರಶ ರ್ಮಾ ಎರಡು ಬಾರಿ ಮನೋರಂಜನ್ ನಿವಾಸಕ್ಕೆ ಬಂದಿರುವ ಬಗ್ಗೆ ಪೋಷಕರು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಮನೋರಂಜನ್ ಮೈಸೂರಿಗೆ ಬಂದೇ ಇಲ್ಲ ಎಂದು ವಿಚಾರಣ ವೇಳೆ ಹೇಳಿದ್ದಾನೆ. ಜೊತೆಗೆ ಮನೋರಂಜನಗೆ ಯಾರು ಹಣದ ಸಹಾಯ ಮಾಡುತ್ತಿದ್ದರು ಎಂಬ ಬಗ್ಗೆಯೂ ದೆಹಲಿ ಪೊಲೀಸರಿಗೆ ಸರಿಯಾದ ಮಾಹಿತಿಗಳು ಲಭ್ಯವಾಗಿಲ್ಲ. ಹೀಗಾಗಿ ಬ್ಯಾಂಕ್ ಸ್ಟೇಂಟ್ ಮೆಂಟ್ ಪರಿಶೀಲನೆಗೆ ದೆಹಲಿ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ