AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಭದ್ರತಾ ಲೋಪ: ಸಂಕಷ್ಟಕ್ಕೀಡಾದ ಮನೋರಂಜನ್ ಕುಟುಂಬಸ್ಥರು, ಮೈಸೂರು ಬಿಟ್ಟು ತೆರಳದಂತೆ ಸೂಚನೆ

ಮುಂದಿನ ಸೂಚನೆ ನೀಡುವ ವರೆಗೂ ಯಾವುದೇ ಪತ್ರಿಕೆ, ಹಳೆಯ ಪುಸ್ತಕ ಮಾರಾಟ ಮಾಡಬೇಡಿ ಎಂದು ಆರೋಪಿ ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಶುಕ್ರವಾರ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದರು.

ಲೋಕಸಭೆ ಭದ್ರತಾ ಲೋಪ: ಸಂಕಷ್ಟಕ್ಕೀಡಾದ ಮನೋರಂಜನ್ ಕುಟುಂಬಸ್ಥರು, ಮೈಸೂರು ಬಿಟ್ಟು ತೆರಳದಂತೆ ಸೂಚನೆ
ಸಂಗ್ರಹ ಚಿತ್ರ
TV9 Web
| Updated By: Ganapathi Sharma|

Updated on:Dec 16, 2023 | 11:31 AM

Share

ಮೈಸೂರು, ಡಿಸೆಂಬರ್ 16: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ (Parliament Security Breach) ಪ್ರಕರಣ​ಕ್ಕೆ ಸಂಬಂಧಿಸಿ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ (D Manoranjan) ಕುಟುಂಬಸ್ಥರಿಗೆ ಈಗ ಸಂಕಷ್ಟ ಎದುರಾಗಿದೆ. ಶುಕ್ರವಾರವಷ್ಟೇ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದ ಗುಪ್ತಚರ ಇಲಾಖೆ ಅಧಿಕಾರಿಗಳು, ಇದೀಗ ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಕುಟುಂಬಸ್ಥರಿಗೆ ಸೂಚನೆ ನೀಡಿದ್ದಾರೆ.

ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿ ಮೇಲೆ ತೆರಳಿ. ಮನೆಗೆ ಯಾವ ಸಂಬಂಧಿಕರಿಗೂ ಸದ್ಯಕ್ಕೆ ಬಾರದಂತೆ ಸೂಚನೆ ಕೊಡಿ. ಪ್ರತಿ ನಿತ್ಯ ನಿಮಗೆ ಬರುವ ಕರೆಗಳ ಮಾಹಿತಿಯನ್ನು ಕಡ್ಡಾಯವಾಗಿ ನಮಗೆ ತಿಳಿಸಿ. ಎಲ್ಲಾ ಕರೆಗಳನ್ನು ತಪ್ಪದೆ ಸ್ವೀಕರಿಸಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಮನೋರಂಜನ್ ಕುಟುಂಬದವರಿಗೆ ಸೂಚಿಸಿದ್ದಾರೆ.

ಮುಂದಿನ ಸೂಚನೆ ನೀಡುವ ವರೆಗೂ ಯಾವುದೇ ಪತ್ರಿಕೆ, ಹಳೆಯ ಪುಸ್ತಕ ಮಾರಾಟ ಮಾಡಬೇಡಿ ಎಂದು ಆರೋಪಿ ಮನೋರಂಜನ್ ಪೋಷಕರಿಗೆ ಗುಪ್ತಚರ ಇಲಾಖೆಯಿಂದ ಸೂಚನೆ ನೀಡಲಾಗಿದೆ.

ಶುಕ್ರವಾರ ಮನೋರಂಜನ್ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದರು. ಸುಮಾರು 1 ಗಂಟೆಗೂ ಹೆಚ್ಚು ಸಮಯದಿಂದ ಮನೋರಂಜನ್ ಮನೆಯಲ್ಲಿ ತಪಾಸಣೆ ನಡೆಸಿ ಹಿಂದಿರುಗಿದ್ದರು.

ಇದನ್ನೂ ಓದಿ: ಸಂಸತ್​​ನೊಳಗೆ ನುಸುಳಿ ಹಂಗಾಮ ಮಾಡಿದ ಮನೋರಂಜನ್ ಮನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಪರಿಶೀಲನೆ

ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಜಿಗಿದಿದ್ದ ಮನೋರಂಜನ್ ಡಿ ಮತ್ತು ಸಾಗರ್ ಶರ್ಮಾ ಹಳದಿ ಅನಿಲದಿಂದ ತುಂಬಿರುವ ಡಬ್ಬಿಗಳನ್ನು ತೆರೆದು ಸ್ಪ್ರೇ ಮಾಡಿದ್ದರು. ಬಳಿಕ ಲೋಕಸಭೆ ಸಂಸದರು ಅವರನ್ನು ಹಿಡಿದು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದರು. ಘಟನೆಯು ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಇದೀಗ ವಿವಿಧ ಆಯಾಮಗಳಲ್ಲಿ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ಮನೆಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:24 am, Sat, 16 December 23

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ