ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಮೈಸೂರು ಪೊಲೀಸರು

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಯಶಸ್ವಿಯಾಗಿ ಭೇದಿಸಿದೆ. ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅರುಣ್ ಕುಮಾರ್ ಮತ್ತು ಸ್ವಾಮಿ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ₹55,200 ಮೌಲ್ಯದ ಲಾಟರಿ ಟಿಕೆಟ್‌ಗಳು ಹಾಗೂ ₹22,930 ನಗದು ಸೇರಿದಂತೆ ಒಟ್ಟು 78,130 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಲಾಟರಿ ಮಾರಾಟ ನಿಷಿದ್ಧವಾಗಿದ್ದರೂ, ಗಡಿ ಮೂಲಕ ಅಕ್ರಮ ದಂಧೆ ನಡೆಯುತ್ತಿತ್ತು.

ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಮೈಸೂರು ಪೊಲೀಸರು
,ಅಕ್ರಮ ಲಾಟರಿ ಜಾಲ
Edited By:

Updated on: Feb 12, 2026 | 8:16 AM

ಮೈಸೂರು, ಫೆ.12: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ವಿಶೇಷ ತಂಡ ಪತ್ತೆಹಚ್ಚಿ ಭರ್ಜರಿ ಕಾರ್ಯಾಚರಣೆ ನಡೆಸಿದೆ.ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅರುಣ್ ಕುಮಾರ್ ಹಾಗೂ ಸ್ವಾಮಿ ಎಂದು ಹೇಳಲಾಗಿದೆ. ಅರುಣ್ ಕುಮಾರ್ ಪಿರಿಯಾಪಟ್ಟಣದ ವೆಂಕಟೇಶ್ವರ ವೇ ಬ್ರಿಡ್ಜ್ (Weigh Bridge) ಬಳಿ ಅಕ್ರಮವಾಗಿ ಲಾಟರಿ ಮಾರಾಟ ಮಾಡುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಸ್ವಾಮಿಯನ್ನು ಪಿರಿಯಾಪಟ್ಟಣದ ಸಿಂಚನ ಹೋಟೆಲ್‌ನಲ್ಲಿ ಲಾಟರಿ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ.

ಪೊಲೀಸರು ಬಂಧಿತರಿಂದ ಒಟ್ಟು 78,130 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಒಟ್ಟು 55,200 ರೂ. ಮೌಲ್ಯದ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಗಳಿಂದ ಅರುಣ್ ಕುಮಾರ್‌ನಿಂದ 33,000 ರೂ. ಮತ್ತು ಸ್ವಾಮಿಯಿಂದ 22,200 ರೂ. ಮೌಲ್ಯದ ಟಿಕೆಟ್ ವಶಪಡಿಸಿಕೊಳ್ಳಲಾಗಿದೆ. ಇನ್ನು ಆರೋಪಿಗಳಿಂದ ಒಟ್ಟು 22,930 ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಅರುಣ್ ಕುಮಾರ್‌ನಿಂದ 20,000 ರೂ. ಹಾಗೂ ಸ್ವಾಮಿಯಿಂದ 2,930 ರೂ. ಹಣವನ್ನು ಪೊಲೀಸರು ವಶಪಡಿದಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!

ಮೈಸೂರು ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ಮತ್ತು ಅಡಿಷನಲ್ ಎಸ್‌ಪಿ ಮಲ್ಲಿಕ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ತಂಡದಲ್ಲಿ ಇನ್ಸ್‌ಪೆಕ್ಟರ್ ಗೋವಿಂದರಾಜು ಮತ್ತು ಪಿಎಸ್‌ಐ ಜಗದೀಶ್ ಹಾಗೂ ಎಸ್‌ಪಿ ಸ್ಕ್ವ್ಯಾಡ್ ಸಿಬ್ಬಂದಿ ಪಾಲ್ಗೊಂಡಿದ್ದರು. ಕರ್ನಾಟಕದಲ್ಲಿ ಲಾಟರಿ ಮಾರಾಟವನ್ನು ನಿಷೇಧಿಸಲಾಗಿದ್ದರೂ, ಗಡಿ ಭಾಗದ ಮೂಲಕ ಕೇರಳ ಲಾಟರಿಯನ್ನು ತಂದು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ