
ಮೈಸೂರು, ಆಗಸ್ಟ್ 01: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು (ಆ. 1) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ನಗರದಲ್ಲಿ ಸಂಭ್ರಮ ಹಾಗೂ ಬಿಗಿ ಭದ್ರತೆಯ ವಾತಾವರಣ ನಿರ್ಮಾಣವಾಗಿದೆ. 1892 ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ನೆನಪಿನಲ್ಲಿ ನಿರ್ಮಿಸಲಾಗಿರುವ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ’ (ವಿವೇಕ ಸ್ಮಾರಕ) ವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಧಾನಿಯವರ ಈ ಪ್ರಮುಖ ಭೇಟಿಯ ನೇತೃತ್ವಕ್ಕೆ ಮೈಸೂರು ಸಜ್ಜಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ರಾಮಕೃಷ್ಣ ಆಶ್ರಮದ ವಿವೇಕ ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿದ್ದು, ಅವರ ಪ್ರವಾಸದ ವೇಳಾಪಟ್ಟಿ ಹೀಗಿದೆ:
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಪ್ರವಾಸದಲ್ಲಿ ಅವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯುವುದರ ಜೊತೆಗೆ, ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಸ್ವಾಗತಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ನಗರದಲ್ಲಿ ರಸ್ತೆ ಸಂಚಾರ ಬಂದ್; ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ 12 ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ:
ಬಂದ್ ಆಗುವ ರಸ್ತೆಗಳು: ಕೆ.ಆರ್.ಬಿ ರಸ್ತೆ (ಡಿಸಿ ಆಫೀಸ್‌ನಿಂದ ಏಕಲವ್ಯ ಸರ್ಕಲ್), ಬೋಗಾದಿ ರಸ್ತೆ (ಮುಡಾ ಜಂಕ್ಷನ್‌ನಿಂದ ಡಾ.ಪದ್ಮ ವೃತ್ತ), ಪಡುವಾರಹಳ್ಳಿ ಜಂಕ್ಷನ್‌ನಿಂದ ಮೆಟ್ರೋಪೋಲ್ ಸರ್ಕಲ್, ಜೆ.ಎಲ್.ಬಿ ರಸ್ತೆ, ರಮಾವಿಲಾಸ ರಸ್ತೆ, ಕೃಷ್ಣವಿಲಾಸ ರಸ್ತೆ ಹಾಗೂ ದಿವಾನ್ಸ್ ರಸ್ತೆಗಳು.
ಪರ್ಯಾಯ ಮಾರ್ಗಗಳು: ಹುಣಸೂರು ರಸ್ತೆ ಹಾಗೂ ವಿಜಯನಗರ ಕಡೆಯಿಂದ ಬರುವವರು ಗೋಕುಲಂ ರಸ್ತೆ, ಪಂಚವಟಿ, ಜಾವಾ ರಸ್ತೆ ಹಾಗೂ ಆಯುರ್ವೇದಿಕ್ ವೃತ್ತದ ಮೂಲಕ ನಗರ ಪ್ರವೇಶಿಸಬೇಕು. ಅಗ್ರಹಾರ, ಜೆ.ಪಿ.ನಗರ ಕಡೆಯಿಂದ ಬಸ್ ನಿಲ್ದಾಣಕ್ಕೆ ತೆರಳುವವರು ಸಿದ್ದಪ್ಪ ಸ್ಕ್ವೇರ್, ಎಂ.ಜಿ.ರಸ್ತೆ ಅಂಡರ್ ಬ್ರಿಡ್ಜ್ ಹಾಗೂ ಜಿ.ಎನ್.ರಸ್ತೆ ಮಾರ್ಗವಾಗಿ ತೆರಳಲು ಸೂಚಿಸಲಾಗಿದೆ.
ಪ್ರಧಾನಿ ಮೋದಿ ಯಾವ ಸಮಯಕ್ಕೆ ಮೈಸೂರಿಗೆ ಭೇಟಿ ಕೊಡುತ್ತಿದ್ದಾರೆ?
ಉತ್ತರ: ಪ್ರಧಾನಿ ಮೋದಿ ಆಗಸ್ಟ್ 1ರ ಬೆಳಗ್ಗೆ 10.45ಕ್ಕೆ ಮೈಸೂರಿಗೆ ಭೇಟಿ ಕೊಡುತ್ತಿದ್ದಾರೆ?
ಪ್ರಶ್ನೆ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ (ವಿವೇಕ ಸ್ಮಾರಕ) ಎಲ್ಲಿದೆ?
ಉತ್ತರ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ (ವಿವೇಕ ಸ್ಮಾರಕ) ಮೈಸೂರಿನಲ್ಲಿದೆ
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:39 am, Sat, 1 August 26