PM Modi In Mysuru: ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

|

Updated on: Apr 08, 2023 | 8:55 PM

ನಾಳೆಯಿಂದ ಮೂರು ದಿನಗಳ ಕಾಲ ನಡೆಯುವ ಹುಲಿ ಸಂರಕ್ಷಣೆ ಸಂಬಂಧಿತ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ. ಇಂದು ಅವರು ಪ್ರತಿಷ್ಠಿತ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

PM Modi In Mysuru: ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮನ
Follow us on

ಮೈಸೂರು: ನಾಳೆಯಿಂದ (ಏಪ್ರಿಲ್ 9) ಮೂರು ದಿನಗಳ ಕಾಲ ನಡೆಯುವ ಹುಲಿ ಸಂರಕ್ಷಣೆ ಸಂಬಂಧಿತ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ರಾತ್ರಿಯೇ ಮೈಸೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ಸೇನಾ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ (Mandakalli airport, Mysuru) ಬಂದಿಳಿದ ಪ್ರಧಾನಿ ಮೋದಿ ಕಾರು ಮೂಲಕ ಪ್ರತಿಷ್ಠಿತ ರಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಿದ್ದಾರೆ. ಹುಲಿಗಳ ಸಂರಕ್ಷಣೆಗಾಗಿ ಜಾರಿಗೊಳಿಸಲಾಗಿರುವ ಹುಲಿ ಯೋಜನೆಗೆ (Project Tiger Reserve) 50 ವರ್ಷ ತುಂಬಿದೆ. ಈ ನಿಟ್ಟಿನಲ್ಲಿ ಆಯೋಜಿಸಿರುವ ಮೂರು ದಿನಗಳ ಕಾರ್ಯಕ್ರಮಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

2022 ರ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಮೈಸೂರಿನಲ್ಲಿ ನಡೆಯಲಿರುವ ಪ್ರಾಜೆಕ್ಟ್ ಟೈಗರ್‌ನ 50 ವರ್ಷಗಳ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ತಿಳಿಸಲಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಮುಕ್ತಾಯಗೊಳಿಸಿ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ.

ಇದನ್ನೂ ಓದಿ: PM Modi Mysuru Visit: ಇಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ, ಸಂಚಾರ ಮಾರ್ಗಗಳಲ್ಲಿ ಬದಲಾವಣೆ, ಬದಲಿ ಮಾರ್ಗ ಹೀಗಿದೆ

ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಕ್ಷೀಣಿಸುತ್ತಿರುವ ಹುಲಿಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಭಾರತದಲ್ಲಿ ಅವುಗಳ ಸಂರಕ್ಷಣೆಯನ್ನು ಉತ್ತೇಜಿಸಲು 1973ರ ಏಪ್ರಿಲ್ 1 ರಂದು ಹುಲಿ ಯೋಜನೆಯನ್ನು ಪ್ರಾರಂಭಿಸಿದ್ದರು. ಅಂದಿನಿಂದ, ಈ ಯೋಜನೆಯು ಹುಲಿಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಹುಲಿಗಳ ಸಂರಕ್ಷಣೆಗೆ ಸಹಾಯ ಮಾಡಿದೆ. ಪ್ರಾಜೆಕ್ಟ್ ಟೈಗರ್ ಪ್ರಾರಂಭಿಸಿದಾಗ ಬಂಡೀಪುರದಲ್ಲಿ 12 ಹುಲಿಗಳು ಇದ್ದವು. 2018 ರಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಸಂಸ್ಥೆ ಪ್ರಕಟಿಸಿದ ಭಾರತದಲ್ಲಿ ಟೈಗರ್ ಕೋ ಪ್ರಿಡೇಟರ್ ಅಂಡ್ ಪ್ರೇ ವರದಿ ಪ್ರಕಾರ, ಈ ಉದ್ಯಾನವನದ ಸುತ್ತಮುತ್ತ ಓಡಾಡುವ ಹುಲಿಗಳ ಸಂಖ್ಯೆ 173, ಆದರೆ ಮೀಸಲು ಪ್ರದೇಶದೊಳಗಿನ ಹುಲಿಗಳ ಸಂಖ್ಯೆ 126 ಎಂದು ನಿಗದಿಪಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ