Sumalatha: ಮೈಸೂರು ಕಾರ್ಯಕ್ರಮದಲ್ಲಿ ಮಂಡ್ಯ ಸಂಸದೆ ಸುಮಲತಾ ಪ್ರತ್ಯಕ್ಷ! ಹೇಗಿದ್ದೀರಾ ಸುಮಲತಾ ಎಂದು ಕೇಳಿದ ಪ್ರಧಾನಿ ಮೋದಿ
Narendra Modi in Mysore: ಮೈಸೂರಿನಲ್ಲಿ ಮೋದಿ ಕಾರ್ಯಕ್ರಮ: ವೇದಿಕೆ ಮೇಲೆ ಮಂಡ್ಯ ಸಂಸದೆ ಸುಮಲತಾ ಪ್ರತ್ಯಕ್ಷಗೊಂಡಿದ್ದಾರೆ!
ಮೈಸೂರು: ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ನಾಳೆ ಮಂಗಳವಾರ ವಿಶ್ವ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೀಗತಾನೆ ಮೈಸೂರಿಗೆ ಆಗಮಿಸಿದ್ದಾರೆ. ಈ ಮಧ್ಯೆ ಪ್ರಧಾನಿ ಮೋದಿ ಭಾಗವಹಿಸಲಿರುವ (Narendra Modi in Mysore) ಕಾರ್ಯಕ್ರಮದ ವೇದಿಕೆಯ ಮೇಲೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha ambareesh) ಪ್ರತ್ಯಕ್ಷಗೊಂಡಿದ್ದಾರೆ!
ಪಕ್ಕದ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ಮೋದಿ ಭಾಗವಹಿಸುತ್ತಿರುವ ಮಹಾರಾಜ ಕಾಲೇಜಿನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದು ರಾಜಕೀಯವಾಗಿ ಕುತೂಹಲ ಕೆರಳಿಸಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮಂಡ್ಯ ಕ್ಷೇತ್ರದ ಸಂಸದೆಯ ವಿರುದ್ಧ ಈ ಹಿಂದೆ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಾ ಬಂದಿದ್ದು, ಅಂತರ ಕಾಯ್ದುಕೊಂಡಿರುವುದು ಗಮನಾರ್ಹ. ಇನ್ನು ಸ್ವತಃ ಸುಮತಲಾ ಅವರು ಸದ್ಯಕ್ಕೆ ಸ್ವತಂತ್ರ ಸಂಸದೆಯಾಗಿದ್ದು, ಯಾವುದೇ ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ.
ಇತ್ತೀಚೆಗೆ ಇನ್ನೇನು ಸುಮಲತಾ ಅವರು ಬಿಜೆಪಿ ಸೇರಿಯೇ ಬಿಟ್ಟರು ಎಂಬ ಸುದ್ದಿ ಹರಿದಾಡಿದಾಗ ಬಿಜೆಪಿಯಿಂದ ಅಂತರ ಕಾಯ್ದುಕೊಂಡ ಸುಮಲತಾ ತಾನು ಯಾವುದೇ ಪಕ್ಷಕ್ಕೆ ಅಂಕಿತವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಇದೀಗ ನೆರೆಯ ಕ್ಷೇತ್ರದ ಸಂಸದೆಯಾಗಿ ಸುಮಲತಾ ಅವರು ಮೈಸೂರಿನಲ್ಲಿ ನಡೆಯುತ್ತಿರುವ ಪ್ರಧಾನಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದು ತೀವ್ರ ರಾಜಕೀಯ ಚರ್ಚೆಗಳಿಗೆ ಗ್ರಾಸವೊದಗಿಸಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಇನ್ನು, ಮೈಸೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮಕ್ಕೆ ಆಗಮಿಸುವ ಪ್ರಧಾನಿ ಮೋದಿ ಫಲಾನುಭವಿಗಳ ಜತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ವೇದಿಕೆಯ ಮೊದಲ ಸಾಲಿನಲ್ಲಿ 9 ಆಸನ ವ್ಯವಸ್ಥೆ ಮಾಡಲಾಗಿದ್ದು ವೇದಿಕೆಯ 2ನೇ ಸಾಲಿನಲ್ಲಿ 19 ಆಸನಗಳ ವ್ಯವಸ್ಥೆ ಮಾಡಲಾಗಿದೆ. ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತಿತರರು ಮೋದಿ ಜತೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು 32 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಹೇಗಿದ್ದೀರಾ ಸುಮಲತಾ ಎಂದು ಕೇಳಿದ ಪ್ರಧಾನಿ ಮೋದಿ
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:28 pm, Mon, 20 June 22