ಮೈಸೂರಿನಲ್ಲಿ 7 ತಿಂಗಳಲ್ಲಿ 63 ಅಪರಾಧ ಪ್ರಕರಣಗಳು ಭೇದಿಸಿದ ಪೊಲೀಸರು

Mysuru News: ಮೈಸೂರಿನಲ್ಲಿ ಜನವರಿಯಿಂದ ಜುಲೈವರೆಗೆ ನಡೆದ ಒಟ್ಟು 63 ಅಪರಾಧ ಪ್ರಕರಣಗಳನ್ನು ಜಿಲ್ಲಾ ಪೊಲೀಸರು ಭೇದಿಸಿದ್ದಾರೆ. ಒಟ್ಟು 63 ಪ್ರಕರಣಗಳಿಂದ 1,34,66,697 ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆಯಲಾಗಿದೆ.

ಮೈಸೂರಿನಲ್ಲಿ 7 ತಿಂಗಳಲ್ಲಿ 63 ಅಪರಾಧ ಪ್ರಕರಣಗಳು ಭೇದಿಸಿದ ಪೊಲೀಸರು
ಮೈಸೂರು ಜಿಲ್ಲಾ ಪೊಲೀಸ್​​
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Aug 12, 2023 | 11:07 AM

ಮೈಸೂರು: ನಗರದಲ್ಲಿ ಜನವರಿಯಿಂದ ಜುಲೈವರೆಗೆ ನಡೆದ ಒಟ್ಟು 63 ಅಪರಾಧ ಪ್ರಕರಣಗಳನ್ನು ಜಿಲ್ಲಾ ಪೊಲೀಸರು (Police) ಭೇದಿಸಿದ್ದಾರೆ. ಲಾಭಕ್ಕಾಗಿ ಒಂದು ಕೊಲೆ, ಎರಡು ದರೋಡೆ ಪ್ರಕರಣ, ನಾಲ್ಕು ಸುಲಿಗೆ, ಎರಡು ಸರಗಳ್ಳತನ, 38 ಕಳ್ಳತನ ಪ್ರಕಣಗಳು, 15 ವಾಹನ ಕಳ್ಳತನ ಮತ್ತು ಒಂದು ವಂಚನೆ ಪ್ರಕರಣ ನಡೆದಿದೆ. ಒಟ್ಟು 63 ಪ್ರಕರಣಗಳು ಪತ್ತೆಯಾಗಿದ್ದು 1,34,66,697 ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ ಪಡೆಯಲಾಗಿದೆ.

ಚಿನ್ನ ಮತ್ತು ಬೆಳ್ಳಿ 1 ಕೆ.ಜಿ 770 ಗ್ರಾಂ, ನಗದು12,62,147ರೂ. 36,23,000 ಮೌಲ್ಯದ 22 ವಾಹನಗಳು, 80,800 ರೂ. ಮೌಲ್ಯದ ಹಾರ್ಡ್‌ವೇರ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ 1 ಲಕ್ಷ ಮೌಲ್ಯದ ದೇವರ ವಿಗ್ರಹಗಳು, 25 ಲಕ್ಷ ಮೌಲ್ಯದ ವಿವಿಧ ಕಂಪನಿಯ ಒಟ್ಟು 192 ಮೊಬೈಲ್‌ಗಳು ಪತ್ತೆಯಾಗಿವೆ. ಅಲ್ಲದೇ 7 ಹಸು, 13 ಕುರಿಗಳು, 43 ಪಾರಿವಾಳಗಳನ್ನು ಮಾಲಿಕರಿಗೆ ಹಿಂದಿರುಗಿಸಲಾಗಿದೆ ಎಂದು ಎಸ್ ಪಿ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

ಚಲಿಸುತ್ತಿದ್ದ ಟೆಂಪೋ ಚಕ್ರದಡಿ ಸಿಲುಕಿ ಬಾಲಕ ಸಾವು

ಮೈಸೂರು: ಚಲಿಸುತ್ತಿದ್ದ ಟೆಂಪೋ ಚಕ್ರದಡಿ ಸಿಲುಕಿ ಬಾಲಕ ಮೃತಪಟ್ಟಿರುವ ಘಟನೆ ನಗರದ ಅಭಿಷೇಕ್ ವೃತ್ತದಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಬಾಲಾಜಿ (10) ಮೃತ ದುರ್ದೈವಿ. ಮತ್ತೊಬ್ಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರು ಬಾಲಕರು ಸೈಕಲ್​ನಲ್ಲಿ ಮನೆಗೆ ತೆರಳುತ್ತಿದ್ದರು. ವೇಗವಾಗಿ ತೆರಳುತ್ತಿದ್ದ ಹಿನ್ನೆಲೆ ಸೈಕಲ್​ ನಿಂಯಂತ್ರಣ ತಪ್ಪುದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ತೆರೆದಿರಲಿದೆ ಮೈಸೂರು ಮೃಗಾಲಯ, ಸಿಬ್ಬಂದಿಗೆ ವಾರದ ರಜೆ ರದ್ದು

ಇದರಿಂದ ಚಲಿಸುತ್ತಿದ್ದ ಟೆಂಪೋದ ಹಿಂದಿನ ಚಕ್ರಕ್ಕೆ ಸಿಲುಕಿ ಬಾಲಕ ಮೃತನಾಗಿದ್ದಾನೆ. ಮೈಸೂರಿನ ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಬಾಲಕ ಮೂಲತಃ ಯಳಂದೂರಿನ ರಾಮಣ್ಣ ಎಂಬುವರ ಪುತ್ರನಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:07 am, Sat, 12 August 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್