ಮೈಸೂರಿನಲ್ಲಿ ಗುಂಡಿ ಬಿದ್ದ ರಸ್ತೆಗಳು: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 21, 2022 | 10:23 AM

ಹುಣಸೂರು ನರಸಿಂಹಸ್ವಾಮಿ ಬಡಾವಣೆಯ ಸರ್ಕಾರಿ ಶಾಲೆಯ ಮುಂಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಶಾಲಾ ವಿದ್ಯಾರ್ಥಿಗಳೇ ರಸ್ತೆ ಗುಂಡಿ ಮುಚ್ಚಿದ್ದಾರೆ.

ಮೈಸೂರಿನಲ್ಲಿ ಗುಂಡಿ ಬಿದ್ದ ರಸ್ತೆಗಳು: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು
ರಸ್ತೆ ಗುಂಡಿ ಮುಚ್ಚುತ್ತಿರುವ ವಿದ್ಯಾರ್ಥಿಗಳು
Follow us on

ಮೈಸೂರು: ನಗರದ ಹುಣಸೂರು ನರಸಿಂಹಸ್ವಾಮಿ ಬಡಾವಣೆಯ ಸರ್ಕಾರಿ ಶಾಲೆಯ ಎದುರುಗಡೆ ದೊಡ್ಡ ಗುಂಡಿಗಳಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ದಿನನಿತ್ಯ ಓಡಾಡುವ ಸವಾರರಿಗೆ ರಸ್ತೆಯಲ್ಲಿ ಸಾಗುವುದು ಕಷ್ಟಕರವಾಗಿತ್ತು . ಈ ಕುರಿತು ರಸ್ತೆ ಸರಿ ಮಾಡುವಂತೆ ಅನೇಕ ಬಾರಿ ಸ್ಥಳೀಯರು ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ರಸ್ತೆ ಗುಂಡಿಗಳಿಗೆ ಮಣ್ಣು ತುಂಬಿ ಮುಚ್ಚಿದ್ದಾರೆ.

ದಿನನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತದೆ. ಅದು ಅಲ್ಲದೆ ಸರ್ಕಾರಿ ಶಾಲೆಯ ಎದುರುಗಡೆ ಇರುವುದರಿಂದ ಮಕ್ಕಳು ಓಡಾಡುತ್ತಿರುತ್ತಾರೆ. ರಸ್ತೆಗಳಲ್ಲಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು ಸಂಚರಿಸುವಾಗ ಜೀವ ಭಯದಲ್ಲೇ ವಾಹನ ಚಲಾಯಿಸುತ್ತಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ, ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಅಲ್ಲದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಕ್ರಮ ಕೈಗೊಂಡು ದಿನನಿತ್ಯ ನೂರಾರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜನರು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ, 15 ಜನರ ದುರ್ಮರಣ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಬೆಂಗಳೂರಿನಲ್ಲಿ ರಸ್ತೆಗುಂಡಿಯಿಂದ ಮತ್ತೊಂದು ಅವಘಡ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

ಬೆಂಗಳೂರು: ಬಸವನಗುಡಿಯ ಟ್ಯಾಗೋರ್ ಸರ್ಕಲ್ ಬಳಿ ತಡರಾತ್ರಿ ಮ್ಯಾನ್​ಹೋಲ್ ಮುಚ್ಚಳವಿದ್ದ​​ ರಸ್ತೆಗುಂಡಿಗೆ ಸ್ಕೂಟರ್ ಚಕ್ರ​​ ಸಿಲುಕಿ ದಂಪತಿಗಳಿಬ್ಬರು ಬಿದ್ದಿದ್ದಾರೆ. ಸ್ಕೂಟರ್​ ಸವಾರ ಸೂರಿ, ಆತನ ಪತ್ನಿಗೆ ಗಾಯಗಳಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮ್ಯಾನ್​ಹೋಲ್ ಮುಚ್ಚಳವಿದ್ದ​​ ಗುಂಡಿಗೆ ಸ್ಕೂಟರ್ ಚಕ್ರ ಸಿಲುಕಿದಾ ಬೈಕ್ ನಿಯಂತ್ರಣ ಕಳೆದುಕೊಂಡು ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್​ ಹಿಂಬದಿಯಿಂದ ಯಾವುದೇ ವಾಹನ ಇಲ್ಲಿದ್ದಿದ್ದರಿಂದ ಅನಾಹುತ ಸಂಭವಿಸಿಲ್ಲ. ಬೆಂಗಳೂರಿನಲ್ಲಿ ಇಂತಹ ಸಾಕಷ್ಟು ಘಟನೆಗಳು ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಸುಮ್ಮನಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ