ಅಶ್ಲೀಲ ವಿಡಿಯೋ ಪ್ರಕರಣ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ, ಮೈಸೂರಿನಲ್ಲಿಯೂ ಕೇಸ್ ದಾಖಲು

ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣಗೆ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದೆ. ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರಂತೆ ಪ್ರಕರಣ ದಾಖಲಾಗಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ, ಮೈಸೂರಿನಲ್ಲಿಯೂ ಕೇಸ್ ದಾಖಲು
ಹೆಚ್​ಡಿ ರೇವಣ್ಣ
Follow us
ದಿಲೀಪ್​, ಚೌಡಹಳ್ಳಿ
| Updated By: Ganapathi Sharma

Updated on:May 03, 2024 | 9:43 AM

ಮೈಸೂರು, ಮೇ 3: ಹಾಸನದ ಸಂಸದ ಪ್ರಜ್ವಲ್ ರೇವಣ್ಣ (Prajwal video case) ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಪ್ರಜ್ವಲ್ ತಂದೆ, ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು (HD Revanna) ಕೂಡ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿಯೂ (Mysuru) ಹೆಚ್​ಡಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ (KR Nagar) ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಹೆಚ್​ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ.

‘ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ’ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ.

ಮಹಿಳೆ ಅಪಹರಣ ಮಾಡಿರುವ ಆರೋಪ

ಹೆಚ್​ಡಿ ರೇವಣ್ಣ ವಿರುದ್ಧ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಅಪಹರಿಸಿದ ಆರೋಪ ಹೊರಿಸಲಾಗಿದೆ. ಹೊಳೇನರಸಿಪುರದ ಚೆನ್ನಾಂಬಿಕ ಥಿಯೇಟರ್ ಪಕ್ಕ ಇರುವ ಮನೆಯಲ್ಲಿ ಮಹಿಳೆ ಸುಮಾರು 6 ವರ್ಷ ಕೆಲಸ‌ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ಸತೀಶ್ ಎಂಬುವವರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಭವಾನಿ ಅಕ್ಕರವರು ಕರೆಯುತ್ತಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನನ್ನ ತಾಯಿರವರನ್ನು ಹೊಳೆನರಸಿಪುರಕ್ಕೆ ಕರೆದುಕೊಂಡು ಹೋದರು. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು ಕರೆದುಕೊಂಡು ಬಂದು ಬಿಟ್ಟರು. ನನ್ನ ತಂದೆ ಮತ್ತು ತಾಯಿಗೆ, ‘ಪೊಲೀಸ್ ಬಂದರೆ ಏನು ಹೇಳಬೇಡಿ. ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ’ ಎಂದು ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಬಲವಂತದಿಂದ ಕರೆದೊಯ್ದು ಕೂಡಿಹಾಕಿದ್ದಾರೆ’

ಏಪ್ರಿಲ್ 29ರಂದು 9 ಗಂಟೆಗೆ, ‘ನಿಮ್ಮ ತಾಯಿ ಪೊಲೀಸಿನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ. ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಕರೆದುಕೊಂಡು ಹೋದರು. ಸತೀಶ್ ಅವರ ಹೀರೋ ಹೊಂಡಾ ಸ್ಪ್ಲೆಂಡ‌ರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ 1 ರಂದು ನಮ್ಮ ತಾಯಿ ವಿಡಿಯೋ ಬಗ್ಗೆ ಸ್ನೇಹಿತರ ಬಗ್ಗೆ ನನಗೆ ಮಾಹಿತಿ ಸಿಕ್ಕಿತು. ನಿನ್ನ ಅಮ್ಮ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ. ಆದರೆ ಹಲ್ಲೆ ಪ್ರಕರಣದಲ್ಲಿ ನಿಮ್ಮ ತಾಯಿ ಆರೋಪಿ ಅಂತಾ ಸುಳ್ಳು ಹೇಳಿದರು. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ ಎಂದು ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯ ಹಾಸನದ ಅಶ್ಲೀಲ ಪೆನ್​​​ಡ್ರೈವ್ ಪ್ರಕರಣ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಬೆಳಕಿಗೆ ಬಂದಿರುವ ಈ ಪ್ರಕರಣ ರಾಜಕೀಯವಾಗಿ ಬಹಳಷ್ಟು ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತಿದೆ. ಈ ಮಧ್ಯ ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿದೆ.

ಆದರೆ, ಆರೋಪಿ ಪ್ರಜ್ವಲ್ ಜರ್ಮನಿಯಲ್ಲಿದ್ದು ಭಾರತಕ್ಕೆ ಬರಲು ವಿಳಂಬ ಮಾಡುತ್ತಿದ್ದಾರೆ. ಈ ವಿಚಾರವಾಗಿ ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ್ ಗುರುವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಪ್ರಜ್ವಲ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಸಹಕರಿಸದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್, ಏನಿದು ನೋಟಿಸ್? ಪ್ರಜ್ವಲ್ ಮೇಲಾಗುವ ಪರಿಣಾಮವೇನು?

ಮತ್ತೊಂದೆಡೆ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ನಡುವಿನ ವಾಕ್ಸಮರಕ್ಕೂ ಪ್ರಕರಣ ಕಾರಣವಾಗಿದೆ. ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಡಿಕೆ ಸಹೋದರರ ಕೈವಾಡವಿದೆ ಎಂದು ಕುಮಾರಸ್ವಾಮಿ ಆರೂಪಿಸಿದ್ದಾರೆ. ಡಿಕೆ ಅವರದ್ದು 420 ಫ್ಯಾಮಿಲಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಡಿಕೆ ಸುರೇಶ್, ಮಾಜಿ ಪ್ರಧಾನಿಗಳ ಕುಟುಂಬದ ಬಗ್ಗೆ ಹಾಗೆ ಹೇಳುವುದಿಲ್ಲ. ಆದರೆ ಇನ್ನು ಮುಂದೆ ಜೆಡಿಎಸ್ ಪಕ್ಷದ ತೆನೆ ಹೊತ್ತ ಮಹಿಳೆ ಪೆನ್ ಡ್ರೈವ್ ಹೊರಬೇಕಾಗುತ್ತದೆ ಎಂದು ವ್ಯಂಗ್ಯವಾಡಿದ್ದರು. ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ನಮ್ಮ ಕೈವಾಡವಿಲ್ಲ ಎಂದು ಅವರು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 am, Fri, 3 May 24

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ