ಇನ್ನೂ 92 ದೇಗುಲಗಳು ಇವೆ; ಅವುಗಳನ್ನು ಮುಟ್ಟಲು ಬಿಡಲ್ಲ- ನಂಜನಗೂಡು ದೇಗುಲ ತೆರವು ಬಳಿಕ ಪ್ರತಾಪ್ ಸಿಂಹ ವಾಗ್ದಾಳಿ

Pratap Simha: ಮೈಸೂರಿನಲ್ಲಿ ಇನ್ನು 92 ದೇವಾಲಯಗಳು ವಿವಿಧ ಮೂಲೆಗಳಲ್ಲಿವೆ. ಅವುಗಳನ್ನು ಯಾವುದೇ ಕಾರಣಕ್ಕೂ ಮುಟ್ಟಲು ಬಿಡಲ್ಲ. ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ.

ಇನ್ನೂ 92 ದೇಗುಲಗಳು ಇವೆ; ಅವುಗಳನ್ನು ಮುಟ್ಟಲು ಬಿಡಲ್ಲ- ನಂಜನಗೂಡು ದೇಗುಲ ತೆರವು ಬಳಿಕ ಪ್ರತಾಪ್ ಸಿಂಹ ವಾಗ್ದಾಳಿ
ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Sep 12, 2021 | 8:10 PM

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಹರದನಹಳ್ಳಿ ಹುಚ್ಚುಗಣಿ ಗ್ರಾಮದಲ್ಲಿ ದೇಗುಲ ನೆಲಸಮ ವಿಚಾರಕ್ಕೆ ಸಂಬಂಧಿಸಿ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ್ದಾರೆ. ಗ್ರಾಮಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಜನರ ಜತೆ ಚರ್ಚೆ ನಡೆಸಿದ್ದಾರೆ. ಶಕ್ತಿ ಮಹಾದೇವಿ ದೇಗುಲಕ್ಕೆ 800 ವರ್ಷಗಳ ಇತಿಹಾಸ ಇದೆ. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ಧಾರ್ಮಿಕ ಸ್ಥಳ, ಭಾವೈಕ್ಯತೆಗೆ ಧಕ್ಕೆ ಬಂದಿದೆ. ಮಹಾದೇವಿ ದೇಗುಲದ ಬಳಿ ಸಾಕಷ್ಟು ವೀರಗಲ್ಲುಗಳಿವೆ. ಇತಿಹಾಸ ಪೂರ್ವದ ದೇವಸ್ಥಾನ ಅನ್ನಲು ಇವೇ ಸಾಕ್ಷಿ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಅಧಿಕಾರಿಗಳು ವೀರಗಲ್ಲುಗಳನ್ನು ಕೂಡ ಗಮನಿಸಿಲ್ಲ. ಮೈಸೂರಿನಲ್ಲಿ ಇನ್ನು 92 ದೇವಾಲಯಗಳು ವಿವಿಧ ಮೂಲೆಗಳಲ್ಲಿವೆ. ಅವುಗಳನ್ನು ಯಾವುದೇ ಕಾರಣಕ್ಕೂ ಮುಟ್ಟಲು ಬಿಡಲ್ಲ. ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. ಗ್ರಾಮಸ್ಥರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಪ್ರತಾಪ್ ಸಿಂಹಗೆ ಬಳೆ ಕೊಟ್ಟು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಬಳೆ ವಿಚಾರದಲ್ಲಿ ಶಾಸಕ ತನ್ವೀರ್‌ ಸೇಠ್ ಬಗ್ಗೆ ಲೇವಡಿ ಮಾಡಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಂಸದ‌ ಪ್ರತಾಪ್‌ ಸಿಂಹಗೆ ಬಳೆ ಕೊಟ್ಟು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಸಂಸದರ ಕಚೇರಿಗೆ 20 ಡಜನ್ ಬಳೆ ಕೊಟ್ಟು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ತೋರಿದ್ದಾರೆ.

ರಾಜ್ಯ ಕಾರ್ಯದರ್ಶಿ ದೀಪಕ್ ಶಿವಣ್ಣ ನೇತೃತ್ವದಲ್ಲಿ ಧರಣಿ ನಡೆಸಲಾಗಿದೆ. ಕಾಂಗ್ರೆಸ್ ನಾಯಕರ ಬಗ್ಗೆ ಎಚ್ಚರಿಕೆಯಿಂದ ಮಾತಾಡಬೇಕು. ಕೊರೊನಾ ಸಂಕಷ್ಟದ ಸಮಯದಲ್ಲಿ ಕೋಮುವಾದ ಬೇಕಾ? ಪ್ರಚೋದನೆ ಕೊಡುವುದನ್ನ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ್ಣಿಗೆ ಗೌರವ ಕೊಡುವುದನ್ನು ನಿಮ್ಮಿಂದ ಕಲಿಯಬೇಕಿಲ್ಲ ಎಂದು ಪ್ರತಾಪ್​ ಸಿಂಹ ವಿರುದ್ಧ ‘ಕೈ’ ಕಾರ್ಯಕರ್ತರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನಂಜನಗೂಡು ದೇಗುಲ ತೆರವು ವಿಚಾರ: ದೇವಾಲಯ ಮರುನಿರ್ಮಾಣಕ್ಕೆ ಗ್ರಾಮಸ್ಥರ ತಯಾರಿ

ಇದನ್ನೂ ಓದಿ: ಅನಧಿಕೃತ ಧಾರ್ಮಿಕ ಕೇಂದ್ರ ತೆರವು ವಿಚಾರ: ಎಷ್ಟು ದರ್ಗಾ, ಮಸೀದಿ ತೆರವು ಮಾಡಿದ್ದೀರಿ?- ಸಂಸದ ಪ್ರತಾಪ್ ಸಿಂಹ ಗರಂ

Published On - 8:07 pm, Sun, 12 September 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್