ವಿಶ್ವನಾಥ್ ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ; ಟ್ರಂಪ್, ಬೈಡೆನ್ ಅವರನ್ನೂ ಬಿಟ್ಟಿಲ್ಲ, ಗ್ಯಾಪ್​ನಲ್ಲಿ ನನ್ನ ಟೀಕೆ ಮಾಡಿದ್ದಾರೆ: ಸಂಸದ ಪ್ರತಾಪ್ ಸಿಂಹ

ಮೋದಿ ಅವರ ಆಡಳಿತದಲ್ಲಿ ಶುರುವಾಗುವ ಪ್ರಾಜೆಕ್ಟ್ಗಳು ಮೋದಿ ಸರಕಾರಕ್ಕೆ ಸಲ್ಲಬೇಕು. ವಿಶ್ವನಾಥ್ ಅವರು ತಾವೇ ಈ ಯೋಜನೆ ತಂದಿದ್ದರೆ ತಮ್ಮ ಚುನಾವಣೆ ವೇಳೆ ಯಾಕೆ ಹೇಳಿಲ್ಲ? ವಿಶ್ವನಾಥ್ ಅವರು ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ

ವಿಶ್ವನಾಥ್ ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ; ಟ್ರಂಪ್, ಬೈಡೆನ್ ಅವರನ್ನೂ ಬಿಟ್ಟಿಲ್ಲ, ಗ್ಯಾಪ್​ನಲ್ಲಿ ನನ್ನ ಟೀಕೆ ಮಾಡಿದ್ದಾರೆ: ಸಂಸದ ಪ್ರತಾಪ್ ಸಿಂಹ
ಸಂಸದ ಪ್ರತಾಪ್ ಸಿಂಹ, ಹೆಚ್.ವಿಶ್ವನಾಥ್
Follow us
TV9 Web
| Updated By: sandhya thejappa

Updated on:Aug 24, 2021 | 12:32 PM

ಮೈಸೂರು: ಬೆಂಗಳೂರು- ಮೈಸೂರು ದಶಪಥ ರಸ್ತೆಯ ಕ್ರೆಡಿಟ್ ಸಮರ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ (Pratap Simha), ಮೈಸೂರು -ಬೆಂಗಳೂರು ದಶಪಥ ರಸ್ತೆಯ ಕಾಮಗಾರಿ ಬಗ್ಗೆ ವಿಡಿಯೋ ಮಾಡಿದ್ದು ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತೆ ಅಂತಾ ಗೊತ್ತಿರಲಿಲ್ಲ. ಮೋದಿ ಸರಕಾರ ಈ ಯೋಜನೆಗೆ ಹಣ ಬಿಡುಗಡೆ ಮಾಡಿ, ಕಾಮಗಾರಿಗೆ ಚಾಲನೆ ನೀಡಲಾಗಿತ್ತು. 8,666 ಕೋಟಿ ರೂ. ಪ್ರಾಜೆಕ್ಟ್​ನಲ್ಲಿ 8 ಪೈಸೆನಾದರೂ ವಿಶ್ವನಾಥ್ (Vishwanath )ಅವರು ಬಿಡುಗಡೆ ಮಾಡಿಸಿದ್ರಾ? ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ರಾ? ಅಂತ ಪ್ರಶ್ನಿಸಿದ್ದಾರೆ.

ನಿತಿನ್ ಗಡ್ಕರಿ ನಮ್ಮ ಕೇಂದ್ರ ಸರ್ಕಾರದ ಮಂತ್ರಿ. ಮೋದಿ ಅವರ ಆಡಳಿತದಲ್ಲಿ ಶುರುವಾಗುವ ಪ್ರಾಜೆಕ್ಟ್​ಗಳು ಮೋದಿ ಸರಕಾರಕ್ಕೆ ಸಲ್ಲಬೇಕು. ವಿಶ್ವನಾಥ್ ಅವರು ತಾವೇ ಈ ಯೋಜನೆ ತಂದಿದ್ದರೆ ತಮ್ಮ ಚುನಾವಣೆ ವೇಳೆ ಯಾಕೆ ಹೇಳಿಲ್ಲ? ವಿಶ್ವನಾಥ್ ಅವರು ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ. ಟ್ರಂಪ್, ಬೈಡೆನ್ ಅವರನ್ನು ಬಿಟ್ಟಿಲ್ಲ. ದೇವೇಗೌಡರು, ಯಡಿಯೂರಪ್ಪ, ವಿಜಯೇಂದ್ರ, ಎಸ್.ಟಿ.ಸೋಮಶೇಖರ್ ಎಲ್ಲರನ್ನೂ ವಿಶ್ವನಾಥ್ ಬೈಯ್ದಿದ್ದು ಆಯ್ತು. ಸಿಎಂ ಬಸವರಾಜ್ ಬೊಮ್ಮಾಯಿ ಬಗ್ಗೆ ಮಾತನಾಡುವುದಕ್ಕೆ ಏನು ಸಿಕ್ಕಿಲ್ಲ. ಅದಕ್ಕಾಗಿ ಈ ಗ್ಯಾಪ್​ನಲ್ಲಿ ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಅಂತ ಪ್ರತಾಪ್ ಸಿಂಹ ಹೇಳಿದರು.

ಚರ್ಚೆ ಮಾಡೋಣಾ ಬನ್ನಿ ವಿಶ್ವನಾಥ್ ಅವರೇ, ಮಾಧ್ಯಮದ ಮುಂದೆ ಚರ್ಚೆ ಮಾಡೋಣಾ ಬನ್ನಿ. ಈ ಯೋಜನೆಯ ಬಗ್ಗೆ ಚರ್ಚೆಯಾಗಲಿ ಅಂತ ಹೇಳಿದ ಪ್ರತಾಪ್ ಸಿಂಹ, ಹಳೆ ಉಂಡುವಾಡಿ ಕುಡಿಯುವ ನೀರು ಯೋಜನೆಗೂ ವಿಶ್ವನಾಥ್ ಐದು ಪೈಸೆ ಕೊಡಿಸಿಲ್ಲ. ನೀವು ಸತ್ಯಸಂಧರ ರೀತಿ ಮಾತಾಡಬೇಡಿ ಎಂದರು. ಜೊತೆಗೆ ಮಾಜಿ ಸಚಿವ ಮಹದೇವಪ್ಪ ಅವರೇ ನೀವು ನಿಮ್ಮ ಅವಧಿಯಲ್ಲಿ ಮಾಡಿದ ಒಂದು ರಸ್ತೆ ನೆಟ್ಟಗಿದ್ದಿಯಾ? ನಿಮಗೆ ದಶಪಥ ರಸ್ತೆಯ ಕ್ರೆಡಿಟ್ ಬೇಕಾ? ನೀವು ಹಿರಿಯರು ನೀವು ಮಾರ್ಗದರ್ಶನ ಮಾಡಿ ಸರ್ ಬೀದಿ ಜಗಳಕ್ಕೆ ಇಳಿಯಬೇಡಿ ಎಂದು ಹೇಳಿದರು.

ದಶಪಥ ರಸ್ತೆಯಲ್ಲಿ ಎಲ್ಲಿ ಅವೈಜ್ಞಾನಿಕ ಕಾಮಗಾರಿ ಆಗಿದೆ ಅಂತಾ ಸಂಸದೆ ಸುಮಲತಾ ತೋರಿಸಲಿ. ಇಲ್ಲ ಒಂದು ಕರೆ ಮಾಡಿ ಅಥವಾ ಮೆಸೇಜ್ ಮಾಡಿ ಸಾಕು. 24 ಗಂಟೆ ಒಳಗೆ ನಾನು ಸ್ಥಳದಲ್ಲಿ ಇರುತ್ತೇನೆ. ತಜ್ಞರನ್ನು ನಾನೇ ಕರೆದುಕೊಂಡು ಬರುತ್ತೇನೆ. ರಸ್ತೆ ಅವೈಜ್ಞಾನಿಕವಾಗಿದ್ದರೆ ಅದನ್ನು ನೀವು ಹೇಳಿದ ರೀತಿ ವೈಜ್ಞಾನಿಕವಾಗಿಯೆ ಸರಿ ಪಡಿಸುತ್ತೇವೆ. ಸುಮ್ಮನೆ ಅದು ಅವೈಜ್ಞಾನಿಕ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ನಿಮಗೆ ಮಾಡಲು ಆಗದ ಕನಸುಗಳನ್ನು ನನಗೆ ಹೇಳಿ. ನಾನು ಮಾಡಿಕೊಡುತ್ತೇನೆ. ಕೇಂದ್ರದ ಯಾವ ಅಧಿಕಾರಿಯನ್ನು ಕರೆತರಬೇಕಾ ಹೇಳಿ. ನಾನು ಕರೆದುಕೊಂಡು ಬರುತ್ತೇನೆ. ನಮ್ಮ ಸಾಹೇಬರು ಹೇಳಿರುವ ಕೆಲಸ ಎಂದು ಮಾಡುತ್ತೇನೆ ಅಂತ ಮಂಡ್ಯ ಸಂಸದೆ ಸುಮಲತಾಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಮೋದಿ ಅವರು ಭಾರತ ಮಾತೆಯ ಸುಪುತ್ರ. ಅವರು ಮಾಡುವ ಎಲ್ಲಾ ಕೆಲಸವೂ ಭಾರತ ಮಾತೆಗೆ ಸೇರಿದ್ದು. ಕ್ಷೇತ್ರದಲ್ಲಿ ಮಾಡುವ ಕೆಲಸ ಭಾರತ ಮಾತೆಗೆ ಸೇರಿದ್ದು ಎಂದು ಹೇಳುವ ಕಾಲ ಈಗ ಬಂತಲ್ಲ ನನಗೆ ಸಂತೋಷವಾಗಿದೆ. ರಾಮದಾಸ್ ಅವರ ಕೆ.ಆರ್.ಕ್ಷೇತ್ರದಲ್ಲಿ ದಶಕಗಳಿಂದ ಬಿದ್ದಿರುವ ಕಸವನ್ನು ಸ್ವಚ್ಛ ಮಾಡುವ ಕೆಲಸವನ್ನು ನಾನೇ ಮಾಡುತ್ತಿದ್ದೇನೆ. ಅದರ ಕ್ರೆಡಿಟ್ ಕೂಡ ಭಾರತ ಮಾತೆಗೆ ಸೇರುತ್ತದೆ ಅಂತ ಪ್ರತಾಪ್ ಸಿಂಹ ಹೇಳಿದ್ದಾರೆ.

ಇದನ್ನೂ ಓದಿ

ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ವಿಚಾರ; ಸಂಸದ ಪ್ರತಾಪ್ ಸಿಂಹಗೆ ಹೆಚ್.ವಿಶ್ವನಾಥ್ ಟಾಂಗ್

ನನ್ನನ್ನು ಟಾರ್ಗೆಟ್​ ಮಾಡಿದೋರು ಮಣ್ಣಲ್ಲಿ ಮಣ್ಣಾಗಿದ್ದಾರೆ: ಸುಮಲತಾ ವಿರುದ್ದ ಶಾಸಕ ಪುಟ್ಟರಾಜು ಪರೋಕ್ಷವಾಗಿ ಆಕ್ರೋಶ

(Pratap Simha react to Vishwanath and Sumalatha Aambareesh statement in Mysuru)

Published On - 12:28 pm, Tue, 24 August 21