AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸಿದರೆ ಒಡೆದು ಹಾಕುತ್ತೇವೆ: ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್

ಗುಂಬಜ್ ಮಾದರಿ ಬಸ್ ಶೆಲ್ಟರ್ ಒಡೆದು ಹಾಕುವ ಎಚ್ಚರಿಕೆ ನೀಡಿದ್ದ ಸಂಸದ ಪ್ರತಾಪಸಿಂಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಬಸ್ ಶೆಲ್ಟರ್ ಬದಲಾಗಿದೆ.

ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸಿದರೆ ಒಡೆದು ಹಾಕುತ್ತೇವೆ: ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್
ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್
TV9 Web
| Updated By: ಆಯೇಷಾ ಬಾನು|

Updated on: Nov 14, 2022 | 10:43 AM

Share

ಮೈಸೂರು: ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ.13ರಂದು ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದೆ. ಈ ಬೆನ್ನಲ್ಲೇ ರಾತ್ರೋ ರಾತ್ರಿ ಬಸ್ ಶೆಲ್ಟರ್ ಮಾದರಿ ಬದಲಾಗಿದೆ.

ಬಸ್​ ನಿಲ್ದಾಣಗಳ ಮೇಲೆ ಗುಂಬಜ್​​ ಇರುವುದನ್ನ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್​ ನಿಲ್ದಾಣ ತೆರವಿಗೆ ಹೇಳಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್​ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದ್ರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಭಾಷಣ ಮಾಡಿದ್ದಾರೆ.

ಇದನ್ನೂ ಓದಿ: ನಕಲಿ ಫುಡ್ ಆ್ಯಪ್​ಗಳ ಮೂಲಕ ಗ್ರಾಹಕರ ಖಾತೆಗೆ ಕನ್ನ: ಬೆಳಕಿಗೆ ಬಂದ ಆನ್​ಲೈನ್ ವಂಚನೆಯ ಮತ್ತೊಂದು ಮುಖ

ಇನ್ನು ಇದೇ ಭಾಷಣದಲ್ಲಿ ಜಾಫರ್ ಷರೀಪ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಎಸ್ ನಿಜಲಿಂಗಪ್ಪನವರ ಕಾರ್ ಡ್ರೈವರ್ ಆಗಿದ್ದ ಜಾಫರ್ ಶರೀಫ್, ರೈಲಿಗೆ ಟಿಪ್ಪು ಎಕ್ಸ್‌ಪ್ರೆಸ್ ಎಂದು ನಾಮಕರಣ ಮಾಡಿಸಿದ್ರು. ಕಳ್ಳ ಕಿವಿ ಇಟ್ಟುಕೊಂಡು ಇಂದಿರಾಗಾಂಧಿ ಬಳಿ ಹೋಗಿ ಮಾಹಿತಿ ಕೊಟ್ಟು ಲೋಕಸಭಾ ಚುನಾವಣಾಗೆ ಟಿಕೆಟ್ ಗಿಟಿಸಿಕೊಂಡು ಗೆದ್ದು ರೈಲ್ವೆ ಸಚಿವರಾಗಿದ್ದವರು. 1980 ರಲ್ಲಿ ಟಿಪ್ಪು ಎಕ್ಸ್‌ಪ್ರೆಸ್‌ ಪ್ರಾರಂಭ ಮಾಡುತ್ತಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ರೈಲ್ವೆ ಇಲಾಖೆಯಲ್ಲಿ ರೈಲಿನ ಹೆಸರು ಬದಲಾಯಿಸಿದ್ದೇನೆ. ನಾಲ್ಕು ವರ್ಷ ಸತತ ಪ್ರಯತ್ನ ಮಾಡಿ ಹೆಸರು ಬದಲಾವಣೆ ಮಾಡಿದ್ದೇನೆ. ಮೈಸೂರಿನ‌ ಪ್ರತಿಯೊಂದು ಸಂಕೇತವೂ ಮಹಾರಾಜರ ಕೊಡುಗೆ. ರೈಲ್ವೆ ಸ್ಟೇಷನ್ ಗೆ ಚಾಮರಾಜ ಒಡೆಯರ್ ಹೆಸರು ಇಡುತ್ತೇವೆ ಹೊರತು ಟಿಪ್ಪುವಿನ ಯಾವ ಗುರುತುಗಳು ಸಿಗದ ಹಾಗೇ ಮಾಡುತ್ತೇವೆ ಎಂದು ಭಾಷಣದಲ್ಲಿ ಗುಡುಗಿದ್ದಾರೆ.

ಗುಂಬಜ್ ಮಾದರಿ ಬಸ್ ಶೆಲ್ಟರ್ ಒಡೆದು ಹಾಕುವ ಎಚ್ಚರಿಕೆ ನೀಡಿದ್ದ ಸಂಸದ ಪ್ರತಾಪಸಿಂಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಬಸ್ ಶೆಲ್ಟರ್ ಬದಲಾಗಿದೆ. ಇದೀಗ ಬಸ್ ಶೆಲ್ಟರ್ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ. ಶಾಸಕ ಎಸ್​ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಸ್​ ನಿಲ್ದಾಣದ ಶೆಲ್ಟರ್​ನಲ್ಲಿ ಮೂರು ಗುಂಬಜ್‌ಗಳ ಮೇಲೆ ಕಳಸ ಮಾದರಿಯ ಆಕೃತಿ ನಿರ್ಮಾಣ ಮಾಡಲಾಗಿದೆ.

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ