AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಸಿದ್ಧವಾಗಿದೆ ವಾಟರ್ ಪ್ರೂಫ್ ವೇದಿಕೆ

ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವ ಮಹಿಳೆಯರಿಗೆ ಸುಸಜ್ಜಿತ ಶೌಚಾಲಯ ನಿರ್ಮಿಸಲಾಗುತ್ತಿದೆ. ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವೇದಿಕೆ ಮುಂಭಾಗ 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಸಿದ್ಧವಾಗಿದೆ ವಾಟರ್ ಪ್ರೂಫ್ ವೇದಿಕೆ
ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಸಿದ್ಧತೆ
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on: Aug 27, 2023 | 3:27 PM

Share

ಮೈಸೂರು, ಆ.27: ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Scheme) ಚಾಲನೆ ಸಿಗಲಿದೆ. ಹೀಗಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ(Mysore Maharaja College Ground) ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. 80 ಅಡಿ ಉದ್ದ, 60 ಅಡಿ ಅಗಲ, 8 ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ವೇದಿಕೆ ಹಿಂಭಾಗ 140 ಅಡಿಯ ಬೃಹತ್ ಎಲ್ಇಡಿ ನಿರ್ಮಾಣ ಮಾಡಲಾಗುತ್ತಿದೆ. ವಿಐಪಿ, ವಿವಿಐಪಿಗಳಿಗೆ ವಿಶ್ರಾಂತಿ ಕೊಠಡಿಗಳನ್ನೂ ಸಹ ನಿರ್ಮಾಣ ಮಾಡಲಾಗುತ್ತಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ವಾಟರ್ ಪ್ರೂಫ್ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವ ಮಹಿಳೆಯರಿಗೆ ಸುಸಜ್ಜಿತ ಶೌಚಾಲಯ ನಿರ್ಮಿಸಲಾಗುತ್ತಿದೆ. ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವೇದಿಕೆ ಮುಂಭಾಗ 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಹಾಗೂ ಮೈದಾನದ ಸುತ್ತಮುತ್ತ ಕಾಂಗ್ರೆಸ್ ನಾಯಕರ ಫ್ಲೆಕ್ಸ್​ಗಳು ರಾರಾಜಿಸುತ್ತಿವೆ. ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಗಲು ರಾತ್ರಿ ಎನ್ನದೆ 500ಕ್ಕೂ ಹೆಚ್ಚು ಕಾರ್ಮಿಕರು ವೇದಿಕೆಯ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ, ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಇನ್ನು ರಾಜ್ಯದಾದ್ಯಂತ 1.1 ಕೋಟಿ ಕುಟುಂಬಗಳ ಮುಖ್ಯಸ್ಥೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಯ ಮುಖ್ಯಸ್ಥೆಗೆ ಮಾಸಿಕ 2 ಸಾವಿರ ರೂ. ನೀಡಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಈ ಹಿಂದೆ ಮಾಹಿತಿ ನೀಡಿದ್ದರು. ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಿಂದ 2 ಸಾವಿರ ಬಸ್‌ಗಳಲ್ಲಿ 1 ಲಕ್ಷ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ