ಮೈಸೂರು: ಜೂನ್ 20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಜೂನ್ 20) ಮಧ್ಯಾಹ್ನ ಮೈಸೂರಿಗೆ (Mysore) ತೆರಳಿದ ಅವರು ಮೈಸೂರು ಮಹಾರಾಜ ಕಾಲೇಜು (Mysore maharaja college) ಮೈದಾನದಲ್ಲಿ ಕೇಂದ್ರದ ಯೋಜನೆಗಳ ಫಲಾನುಭವಿಗಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದಾರೆ. ಸಂವಾದದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai), ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) , ಸಚಿವರಾದ ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ ಪ್ರಸಾದ್, ಸುಮಲತಾ ಅಂಬರೀಶ್, ಶಾಸಕ ಜಿ.ಟಿ.ದೇವೇಗೌಡ, ಮೇಯರ್ ಸುನಂದಾ ಪಾಲನೇತ್ರಾ ಉಪಸ್ಥಿತಿತರಿದ್ದರು.
ಮೋದಿ ಕಾರ್ಯಕ್ರಮದಲ್ಲಿ ಒಟ್ಟು 32 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು , ವಾಟರ್ಪ್ರೂಫ್ ಶಾಮಿಯಾನ, ಎಲ್ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ. ಮಹಾರಾಜ ಕಾಲೇಜಿನಲ್ಲಿ ಮೋದಿ ಸಭಾ ಕಾರ್ಯಕ್ರಮ
ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದರಾದ ಸುಮಲತಾ ಅಂಬರೀಷ್, ಶ್ರೀನಿವಾಸ ಪ್ರಸಾದ್, ಶಾಸಕರಾದ ಎಸ್ ಎ ರಾಮದಾಸ್ ಹರ್ಷವರ್ಧನ್ ಆಗಮಿಸಿದ್ದಾರೆ. ಜನಪ್ರತಿನಿಧಿಗಳು ತಮಗೆ ನಿಗದಿಯಾದ ಆಸನದಲ್ಲಿ ಆಸೀನರಾಗಿದ್ದಾರೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ